ರವೀಂದ್ರ ಸಹೋದರಿಗೆ ರಾಜ್ಯ ಕಾರ್ಯದರ್ಶಿ ಹುದ್ದೆ
Team Udayavani, Mar 14, 2019, 10:47 AM IST
ಹರಪನಹಳ್ಳಿ: ಅಖೀಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಶ್ಮತಾದೇವ್ ಆದೇಶದ ಮೇರೆಗೆ ಸಜ್ಜನ ರಾಜಕಾರಣಿ ಮಾಜಿ ಉಪಮುಖ್ಯಮಂತ್ರಿ ಎಂ.ಪಿ.ಪ್ರಕಾಶ್ ಅವರ ಹಿರಿಯ ಪುತ್ರಿ ಎಂ.ಪಿ.ಲತಾ ಮಲ್ಲಿಕಾರ್ಜುನ ಅವರನ್ನು ಪ್ರದೇಶ ಕಾಂಗ್ರೆಸ್ ಮಹಿಳಾ ಘಟಕದ ರಾಜ್ಯ ಕಾರ್ಯದರ್ಶಿ ಹುದ್ದೆ ನೀಡಿ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪ ಅಮರನಾಥ್ ಆದೇಶ ಹೊರಡಿಸಿದ್ದಾರೆ.
ಅಖಲ ಭಾರತ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಾಹುಲ್‌ಗಾಂಧಿ ನೇತೃತ್ವದಲ್ಲಿ ಮಹಿಳೆಯರನ್ನು ರಾಜಕೀಯವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮತ್ತು ಅರ್ಥಿಕವಾಗಿ ದೇಶದ ಆಡಳಿತದ ಮುಖ್ಯವಾಹಿನಿಗೆ ತರಲು ಹಾಗೂ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗಾಗಿ
ದುಡಿಯುತ್ತೀರೆಂದು ನಂಬಿ ನಾನು ಈ ಜವಾಬ್ಟಾರಿಯನ್ನು ವಹಿಸುತ್ತೀನೆ ಎಂದು ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪ ಅಮರನಾಥ್ ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.
ಕಳೆದ ನ.3ರಂದು ಮಾಜಿ ಶಾಸಕ ಎಂ.ಪಿ.ರವೀಂದ್ರ ನಿಧನ ನಂತರ ಆವರ ಸಹೋದರಿ ಎಂ.ಪಿ.ಲತಾ ಮಲ್ಲಿಕಾರ್ಜುನ ಅವರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಜೊತೆಗೆ ಗುರುತಿಸಿಕೊಂಡು ಪಕ್ಷದ ಚಟುವಟಿಯಲ್ಲಿ ತೊಡಗಿಸಿಕೊಂಡು ತಮ್ಮನ ಸ್ಥಾನ ತುಂಬಿದ್ದರು. ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಳ್ಳಲು ಎಂ.ಪಿ.ಲತಾ ಯಾರು? ಪಕ್ಷದಲ್ಲಿ ಅವರ ಸ್ಥಾನಮಾನ ಏನು ಎಂದು ಸ್ವಯಪಕ್ಷಿಯರೇ ಕೆಲವರು ಪ್ರಶ್ನಿಸುತ್ತಿದ್ದರು. ಇದೀಗ ಪಕ್ಷದಲ್ಲಿ ಹುದ್ದೆ ನೀಡಿರುವುದರಿಂದ ಟೀಕಾಕಾರರ ಬಾಯಿಗೆ ಬೀಗ ಹಾಕಿದಂತಾಗಿದೆ.
ಎಂ.ಪಿ.ರವೀಂದ್ರ ನಿಧನದ ನಂತರ ಕಾಂಗ್ರೆಸ್ ಪಾಳೆಯದಲ್ಲಿ ಅನಾಥ ಪ್ರಜ್ಞೆ ಕಾಡುತ್ತಿದ್ದ ಸಂದರ್ಭದಲ್ಲಿ ಎಂ.ಪಿ.ಲತಾ ಅವರು ನನ್ನ ಸಹೋದರ ರವೀಂದ್ರ ಸ್ಥಾನ ತುಂಬುತ್ತೇನೆಂಬ ಭರವಸೆ ನೀಡಿ ಪಕ್ಷದ ಯಾವುದೇ ಕಾರ್ಯ ಚಟುವಟಿಕೆಯಿದ್ದರೂ ಅದರ ನೇತೃತ್ವವಹಿಸಿ ಮುನ್ನಡೆಸಿಕೊಂಡು ಬಂದಿದ್ದರು. ಪಕ್ಷದಲ್ಲಿ ಟಿಕೆಟ್ ಆಕಾಂಕ್ಷಿಗಳಾಗಿದ್ದ ಕೆಲವರು ಅವರ ಆಗಮನವನ್ನು
ಟೀಕಿಸುತ್ತಲೇ ಬಂದಿದ್ದರು. ಇದಲ್ಲದೆ, ಇವರ ಸಹೋದರಿ ಎಂ.ಪಿ.ವೀಣಾ ಮಹಾಂತೇಶ್ ಅವರು ಸಹ ಎಂ.ಪಿ.ಪ್ರಕಾಶ್ ಸಮಾಜಮುಖೀ ಟ್ರಸ್ಟ್ ಹೆಸರಿನ ಮೂಲಕ ಸಮಾಜ ಸೇವೆ ನೆಪದಲ್ಲಿ ಫ್ಲೆಕ್ಸ್‌ಗಳಲ್ಲಿ ಕಾಂಗ್ರೆಸ್ ಮುಖಂಡರ ಭಾವಚಿತ್ರ ಹಾಕಿಸಿ ಕಾಂಗ್ರೆಸ್ ನಾಯಕಿ ಎಂದು ಬಿಂಬಿಸಿಕೊಳ್ಳುವ ಪ್ರಯತ್ನ ನಡೆಸಿದ್ದಾರೆ.
ಪಕ್ಷದಲ್ಲಿ ಯಾವುದೇ ಹುದ್ದೆ ಹೊಂದಿಲ್ಲದಿದ್ದರೂ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದ ಎಂ.ಪಿ.ಲತಾ ಮಲ್ಲಿಕಾರ್ಜುನ ಅವರ ಸೇವೆಯನ್ನು ಗುರುತಿಸಿರುವ ಪಕ್ಷವು ಅವರಿಗೆ ರಾಜ್ಯ ಕಾರ್ಯದರ್ಶಿ ಹುದ್ದೆ ನೀಡುವ ಮೂಲಕ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಲು ಹುರಿದುಂಬಿಸಿದಂತಾಗಿದೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ ಮಹಿಳೆಯೊಬ್ಬರೂ ಪಕ್ಷದ ಚುಕ್ಕಾಣಿ ಹಿಡಿದು ಪಕ್ಷ ಸಂಘಟಿಸುತ್ತಿದ್ದಾರೆ.
ಕಳೆದ ಐದು ತಿಂಗಳಿಂದ ಹರಪನಹಳ್ಳಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಕೆಲಸಕ್ಕೆ ಮಾಡಿಕೊಂಡು ಬಂದಿದ್ದೇನೆ. ಪಕ್ಷದ ಹೈಕಮಾಂಡ್ ನನ್ನ ಕೆಲಸವನ್ನು ಗುರುತಿಸಿ ರಾಜ್ಯ ಕಾರ್ಯದರ್ಶಿ ಹುದ್ದೆ ನೀಡಿರುವುದರಿಂದ ಜವಾಬ್ಟಾರಿ ಹೆಚ್ಚಾಗಿದೆ. ನಾನು ಹೆಚ್ಚು ಮಾತನಾಡುವುದಕ್ಕಿಂತಹ ಕೆಲಸ ಮಾಡಿ ನಮ್ಮ ಸಾಧನೆ ಏನು ಎಂಬುವುದನ್ನು ತೋರಿಸುತ್ತೇವೆ.
ಎಂ.ಪಿ.ಲತಾ ಮಲ್ಲಿಕಾರ್ಜುನ
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗಂಡೂರಾವ್ ಅವರು ಪಕ್ಷ ಸಂಘಟನೆಗಾಗಿ ಎಂ.ಪಿ.ಲತಾ ಅವರಿಗೆ ಸೂಚನೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷ ಎಂ.ಪಿ.ಲತಾ ಅವರಿಗೆ ರಾಜ್ಯ ಕಾರ್ಯದರ್ಶಿ ಹುದ್ದೆ ನೀಡಿರುವುದು ಕ್ಷೇತ್ರದಲ್ಲಿ ಪಕ್ಷಕ್ಕೆ ಶಕ್ತಿ ತುಂಬಿದಂತಾಗಿದೆ.
ಎಂ.ವಿ.ಅಂಜಿನಪ್ಪ, ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್
Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ
Bellary: ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ
MUST WATCH
ಹೊಸ ಸೇರ್ಪಡೆ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
INDWvsIREW: ಪ್ರತಿಕಾ ರಾವಲ್ ಭರ್ಜರಿ ಬ್ಯಾಟಿಂಗ್; ಐರ್ಲೆಂಡ್ ವಿರುದ್ದ ಸರಣಿ ಶುಭಾರಂಭ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.