ಕರ್ನಾಟಕ ಸಂಘ ಡೊಂಬಿವಲಿ: ಸಾಧಕ ಮಹಿಳೆಯರಿಗೆ ಸಮ್ಮಾನ
Team Udayavani, Mar 14, 2019, 3:09 PM IST
ಡೊಂಬಿವಲಿ: ಕರ್ನಾಟಕ ಸಂಘ ಡೊಂಬಿವಲಿ ಮಹಿಳಾ ವಿಭಾಗದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಸಮಾರಂಭವು ಮಾ. 10ರಂದು ಸಂಜೆ ಡೊಂಬಿವಲಿ ಪೂರ್ವದ ರೋಟರಿ ಸಭಾಗೃಹದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಿತು.
ಸಂಘದ ಅಧ್ಯಕ್ಷ ಇಂದ್ರಾಳಿ ದಿವಾಕರ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಸಮಾಜ ಸೇವೆಯಲ್ಲಿ ಗಣನೀಯ ಸಾಧನೆಗೈದ ಗಂಗಾ ಹೆಗಡೆ ಇವರನ್ನು ಗಣ್ಯರು ಶಾಲು ಹೊದಿಸಿ, ಫಲಪುಷ್ಪ, ಸ್ಮರಣಿಕೆ, ಸಮ್ಮಾನ ಪತ್ರವನ್ನಿತ್ತು ಗೌರವಿಸ ಲಾಯಿತು. ಅಲ್ಲದೆ ಅತಿಥಿಗಳಾಗಿ ಪಾಲ್ಗೊಂಡ ಕಲಾವಿದೆ, ಮುಂಬಯಿ ನ್ಯೂಸ್ ಆ್ಯಂಕರ್ ಸವಿತಾ ಕುಲಕರ್ಣಿ, ಡಾ| ಸೌಮ್ಯಾ ಹೆಗ್ಡೆ ಇವರನ್ನು ಹಾಗೂ ಗಣ್ಯರನ್ನು ಸಂಘದ ಪದಾಧಿಕಾರಿಗಳು ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆಯನ್ನು ನೀಡಿ ಗೌರವಿಸಿದರು.
ಸಂಘದ ಕಾರ್ಯಾಧ್ಯಕ್ಷ ಸುಕುಮಾರ್ ಎನ್. ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಷ್ಮಾ ಡಿ. ಶೆಟ್ಟಿ, ಸಂಘದ ಪದಾಧಿಕಾರಿಗಳಾದ ಲೋಕನಾಥ ಶೆಟ್ಟಿ, ದೇವದಾಸ್ ಕುಲಾಲ್, ಮಾಧುರಿಕಾ ಆರ್. ಬಂಗೇರ, ಯೋಗಿನಿ ಶೆಟ್ಟಿ, ವಿದ್ಯಾ ಆಲಗೂರ, ಆಶಾ ಶೆಟ್ಟಿ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಘದ ಪದಾಧಿಕಾರಿಗಳಾದ ಡಾ| ದಿಲೀಪ್ ಕೋಪರ್ಡೆ, ನ್ಯಾಯವಾದಿ ಆರ್. ಎಂ. ಭಂಡಾರಿ, ರಾಜು ಭಂಡಾರಿ, ಕರುಣಾಕರ ಶೆಟ್ಟಿ ಕಲ್ಲಡ್ಕ, ಆರ್. ಟಿ. ಶೆಟ್ಟಿ, ಸುರೇಶ್ ಶೆಟ್ಟಿ, ಸೋಮನಾಥ ಪೂಜಾರಿ, ಸುರೇಶ್ ಶೆಟ್ಟಿ, ರಮೇಶ್ ಶೆಟ್ಟಿ, ವಸಂತ ಸುವರ್ಣಉಪಸ್ಥಿತರಿದ್ದರು.
ಮಹಿಳಾ ವಿಭಾಗದ ಕಾರ್ಯದರ್ಶಿ ಮಾಧುರಿಕಾ ಬಂಗೇರ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. ಹೇಮಾ ಹೆಗಡೆ, ಯೋಗಿನಿ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿದರು. ಸುನಂದಾ ಶೆಟ್ಟಿ ಪ್ರಾರ್ಥನೆಗೈದರು. ಚಂಚಲಾ ಸಾಲ್ಯಾನ್, ಪರಿಮಳಾ ಕುಲಕರ್ಣಿ, ಕಾಂತಿಲಾಲ್ ಪಾಟೀಲ್, ಪವಿತ್ರಾ ಶೆಟ್ಟಿ ಮೊದಲಾದವರು ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು
ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
State Budget Meeting: ಇಂದಿನಿಂದ ಸಿಎಂ ಬಜೆಟ್ ಪೂರ್ವಭಾವಿ ಸರಣಿ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.