ದುರಸ್ತಿಗಾಗಿ ಅಗೆದಿದ್ದ ಸೇತುವೆಯಲ್ಲಿ ಬೈಕ್ ಪಲ್ಟಿ;ಸವಾರ ಗಂಭೀರ
Team Udayavani, Mar 15, 2019, 12:30 AM IST
ಕಾಪು: ದುರಸ್ತಿಗಾಗಿ ಅಗೆದಿದ್ದ ಸೇತುವೆ ಮೇಲೆ ಬೈಕ್ ಚಲಾಯಿಸಿದ ಪರಿಣಾಮ ಹೊಂಡಕ್ಕೆ ಬಿದ್ದು ಸವಾರ, ಕಟಪಾಡಿ ಅಚ್ಚಡ ನಿವಾಸಿ ದಿನೇಶ್ ಶೆಟ್ಟಿ (35) ಅವರು ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ರಾತ್ರಿ ಕಟಪಾಡಿ ಕಲ್ಲಾಪಿನಲ್ಲಿ ಸಂಭವಿಸಿದೆ.
ಕಟಪಾಡಿ ಹಳೆ ಎಂ.ಬಿ.ಸಿ ರಸ್ತೆಯಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಅದಕ್ಕಾಗಿ ಸೇತುವೆಯನ್ನು ಅಗೆಯಲಾಗಿತ್ತು. ಇಲ್ಲಿ ಸಂಚಾರ ತಡೆಗೆ ಯಾವುದೇ ಕ್ರಮ ಕೈಗೊಳ್ಳ ದಿರುವುದು ಘಟನೆಗೆ ಕಾರಣವೆನ್ನಲಾಗಿದೆ.ಸೇತುವೆಯನ್ನು ಅಗೆದಿರುವ ವಿಚಾರ ತಿಳಿಯದೆ ಮಾಮೂಲಿನಂತೆ ಸವಾರಿ ಮಾಡಿದ್ದ ದಿನೇಶ್ ಅವರು ಬೈಕ್ ಸಹಿತ ಹೊಂಡಕ್ಕೆ ಬಿದ್ದಿದ್ದರು.
ನಿರ್ಲಕ್ಷ್ಯ ಆರೋಪ
ಘಟನೆಗೆ ಕಾಮಗಾರಿಯ ಗುತ್ತಿಗೆದಾರರು ಮತ್ತು ಎಂಜಿನಿಯರ್ಗಳ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ಆಪಾದಿಸಿದ್ದಾರೆ. ಬೆನ್ನು ಮೂಳೆ ಮುರಿತಕ್ಕೊಳ ಗಾಗಿರುವ ಅವರನ್ನು ಉಡುಪಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊಲ್ಲಿ ರಾಷ್ಟ್ರದಲ್ಲಿ ಉದ್ಯೋಗದಲ್ಲಿದ್ದ ದಿನೇಶ್ ತನ್ನ ಗ್ರಹಪ್ರವೇಶ ಕಾರ್ಯ ಕ್ರಮಕ್ಕಾಗಿ ಇತ್ತೀಚೆಗಷ್ಟೇ ಊರಿಗೆ
ಬಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.