ಆರು ಸ್ಥಾನಗಳಲ್ಲಿ ಗೆಲುವು: ಜೆಡಿಎಸ್ ಕಾರ್ಯತಂತ್ರ
Team Udayavani, Mar 15, 2019, 1:52 AM IST
ಬೆಂಗಳೂರು: ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ನೊಂದಿಗೆ ಗುದ್ದಾಡಿ ಎಂಟು ಕ್ಷೇತ್ರಗಳನ್ನು ಪಡೆದುಕೊಂಡಿರುವ ಜೆಡಿಎಸ್ 6 ಸ್ಥಾನಗಳನ್ನು ಗೆಲ್ಲುವ ಗುರಿಯೊಂದಿಗೆ ಕಾರ್ಯತಂತ್ರ ರೂಪಿಸಿದೆ. ಮಂಡ್ಯ, ಹಾಸನ, ತುಮಕೂರು, ಶಿವಮೊಗ್ಗ, ವಿಜಯಪುರ, ಬೆಂಗಳೂರು ಉತ್ತರ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜತೆಗೂಡಿ ಶ್ರಮ ಹಾಕಿ ಸಂಸತ್‌ನಲ್ಲಿ ತನ್ನ ಬಲವನ್ನು ಎರಡರಿಂದ ಆರಕ್ಕೆ ಹೆಚ್ಚಿಸಿಕೊಳ್ಳಲು ಮುಂದಾಗಿದೆ.
ಕಾಂಗ್ರೆಸ್ ಜತೆ ಮೈತ್ರಿಗೆ ಒಪ್ಪಿ ಹನ್ನೆರಡು ಕ್ಷೇತ್ರಗಳಿಗೆ ಬೇಡಿಕೆಯಿಟ್ಟು ಅಂತಿಮವಾಗಿ ಎಂಟು ಕ್ಷೇತ್ರಗಳಿಗೆ ತೃಪ್ತಿ ಹೊಂದಿರುವ ಜೆಡಿಎಸ್, ಉತ್ತರ ಕನ್ನಡ ಮತ್ತು ಉಡುಪಿ-ಚಿಕ್ಕಮಗಳೂರು ಕ್ಷೇತ್ರಗಳಲ್ಲಿ ಸಮರ್ಥ ಅಭ್ಯರ್ಥಿ ಕೊರತೆ ಇರುವುದರಿಂದ ಉಳಿದ ಆರು ಕ್ಷೇತ್ರಗಳಲ್ಲಿ ಗೆಲ್ಲುವ “ಟಾರ್ಗೆಟ್’ ಹೊಂದಿದೆ.
ಮಂಡ್ಯ, ಹಾಸನ, ಶಿವಮೊಗ್ಗ ಕ್ಷೇತ್ರಕ್ಕೆ ಈಗಾಗಲೇ ಅಭ್ಯರ್ಥಿಯೂ ಪಕ್ಕಾ ಆಗಿದ್ದು ತುಮಕೂರು ಕ್ಷೇತ್ರಕ್ಕೆ ಬಹುತೇಕ ಎಚ್.ಡಿ.ದೇವೇಗೌಡರೇ ಸ್ಪರ್ಧೆ ಮಾಡುವ ಸಾಧ್ಯತೆಯಿದೆ. ವಿಜಯಪುರ ಕ್ಷೇತ್ರ
ದಲ್ಲಿ ಮಾಜಿ ಶಾಸಕ ಎಸ್.ಕೆ.ರಾಥೋಡ್ ಪುತ್ರ ಅರ್ಜುನ್ ರಾಥೋಡ್ ಅಥವಾ ಶಾಸಕ ದೇವಾನಂದ ಚೌವ್ಹಾಣ್ ಪತ್ನಿ, ಉತ್ತರ ಕನ್ನಡ ಕ್ಷೇತ್ರದಲ್ಲಿ ಆನಂದ್ ಅಸ್ನೋಟಿಕರ್ ಅಥವಾ ಆರ್.ವಿ. ದೇಶಪಾಂಡೆ ಪುತ್ರನೇ ಜೆಡಿಎಸ್ ಅಭ್ಯರ್ಥಿ ಯಾಗಿ ಕಣಕ್ಕಿಳಿಯಬಹುದು ಎಂದು ಹೇಳಲಾಗುತ್ತಿದೆ.
ಎಚ್.ಡಿ.ದೇವೇಗೌಡ ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧೆ ಮಾಡಿದರೆ, ತುಮಕೂರು ಕ್ಷೇತ್ರದಿಂದ ರಮೇಶ್‌ಬಾಬು ಅಥವಾ ಸುರೇಶ್‌ಬಾಬು ಅಭ್ಯರ್ಥಿಯಾಗಲಿದ್ದಾರೆ ಎನ್ನಲಾಗಿದೆ. ದೇವೇಗೌಡರು ಉತ್ತರದಿಂದ ಸ್ಪರ್ಧೆ ಮಾಡಿದರೆ, ಬೆಂಗಳೂರು ಉತ್ತರ ಮತ್ತು ತುಮಕೂರು ಎರಡೂ ಕಡೆ ಗೆಲ್ಲಬಹುದು ಎಂಬ ಲೆಕ್ಕಾಚಾರವೂ ಇದೆ. ಬೆಂಗಳೂರು ಉತ್ತರ ಕ್ಷೇತ್ರಕ್ಕೆ ತುಮಕೂರಿನ ಮುದ್ದಹನುಮೇಗೌಡರನ್ನು ಜೆಡಿಎಸ್ ಅಭ್ಯರ್ಥಿ ಮಾಡಿ ಎಂಬ ಒತ್ತಡವೂ ಇದೆ.
ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ವಿಧಾನಪರಿಷತ್ ಸದಸ್ಯ ಭೋಜೇಗೌಡ, ಪರಿಷತ್ ಮಾಜಿ ಸದಸ್ಯ ವೈ.ಎಸ್.ವಿ.ದತ್ತಾ ಅವರ ಹೆಸರು ಪ್ರಸ್ತಾವವಾಗುತ್ತಿದೆ. ಉತ್ತರ ಕನ್ನಡ ಮತ್ತು ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಅಂತಿಮ ಕ್ಷಣದಲ್ಲಿ ಅಚ್ಚರಿ ಅಭ್ಯರ್ಥಿ ಕಣಕ್ಕಿಳಿಯುವ ಸಾಧ್ಯತೆಯೂ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ
ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?
Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ
Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.