ರಾಷ್ಟ್ರ ರಾಜಕಾರಣ ಬೇಡ: ಸಿದ್ದರಾಮಯ್ಯ
Team Udayavani, Mar 15, 2019, 1:57 AM IST
ಬೆಂಗಳೂರು: ನಾನು ಲೋಕಸಭೆಗೆ ಸ್ಪರ್ಧಿಸುವುದಿಲ್ಲ. ನನಗೆ ರಾಷ್ಟ್ರ ರಾಜಕಾರಣ ಬೇಡ, ರಾಜ್ಯ ರಾಜಕಾರಣವೇ ಸಾಕಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಸಂಶೋಧನಾ ಘಟಕ ಹೊರತಂದಿದ್ದಕಾಂಗ್ರೆಸ್ ಕೈಪಿಡಿಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ನಾನು ಯಾವುದೇ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿಲ್ಲ ಎಂದರು.
ಈ ಬಗ್ಗೆ ಹಲವಾರು ಬಾರಿ ಸ್ಪಷ್ಟಪಡಿಸಿದ್ದೇನೆ. ಆದರೂ ಕೆಲವು ಕ್ಷೇತ್ರಗಳಿಂದ ಸ್ಪರ್ಧಿಸುವಂತೆ ಅಭಿಮಾನಿಗಳು ಒತ್ತಾಯಿಸುತ್ತಿದ್ದಾರೆ. ಆದರೆ, ನಾನು ರಾಷ್ಟ್ರ ರಾಜಕಾರಣಕ್ಕೆ ಹೋಗುವುದಿಲ್ಲ. ಇಲ್ಲಿಯೇಸಾಕಾಗಿದೆ. ಯಾ ವುದೇ ಕ್ಷೇತ್ರದಲ್ಲಿಯೂ ಸ್ಪರ್ಧೆ ಮಾಡುವುದಿಲ್ಲ ಎಂದರು. ಮೈಸೂರು ಕ್ಷೇತ್ರದಲ್ಲಿ ಅಭ್ಯರ್ಥಿ ಆಯ್ಕೆ ಕುರಿತಂತೆ ಕ್ಷೇತ್ರದ ಮುಖಂಡರೊಂದಿಗೆ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ಹೇಳಿದರು.
ಮಲ್ಲಿಕಾರ್ಜುನ ಖರ್ಗೆಯವರು ಮುಖ್ಯಮಂತ್ರಿಯಾಗಬೇಕೆಂದು ನಾನು ಒತ್ತಾಯ ಮಾಡಿದ್ದೆ, ಆದರೆ ಕಾಂಗ್ರೆಸ್ ನಾಯಕರು ಒಪ್ಪಲಿಲ್ಲ ಎಂಬ ದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯಿಸಲು ಅವರು ನಿರಾಕರಿಸಿದರು. ದೇವೇಗೌಡರು ಹಾಗೂ ಸೋನಿಯಾ ಗಾಂಧಿಯ ಮಧ್ಯೆ ಏನು ಮಾತುಕತೆ ನಡೆದಿದೆ ಎಂದು ಗೊತ್ತಿಲ್ಲ ಎಂದರು. ಇನ್ನು ಮೈತ್ರಿಯಿಂದ ಜೆಡಿಎಸ್ಗೆ ಲಾಭವಾಗಿದೆ ಎಂದು ಮಾಜಿ ಸಚಿವ ಎ. ಮಂಜು ನೀಡಿರುವ ಹೇಳಿಕೆ ಅದು ಅವರ ವೈಯಕ್ತಿಕ ವಿಚಾರ ಎಂದು ಹೇಳಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.