ನೀತಿ ಸಂಹಿತೆ ಜಾರಿಗೆ ಆಯೋಗದ “ಭದ್ರ ಜಾಲ


Team Udayavani, Mar 15, 2019, 2:10 AM IST

86.jpg

ಬೆಂಗಳೂರು: ಲೋಕಸಭೆ ಚುನಾವಣೆಗೆ ಈಗಾಗಲೇ ರಾಜ್ಯಾದ್ಯಂತ “ಮಾದರಿ ನೀತಿ ಸಂಹಿತೆ’ ಜಾರಿಗೆ ಬಂದಿದ್ದು, ಅದರ ಅನುಷ್ಠಾನಕ್ಕಾಗಿ ಚುನಾವಣಾ ಆಯೋಗವು ವಿವಿಧ ತಂಡಗಳ “ಭದ್ರ ಜಾಲ’ ಹೆಣೆದಿದೆ.

ರಾಜ್ಯದಲ್ಲಿ ಏಪ್ರಿಲ್‌ 18 ಹಾಗೂ 23ಕ್ಕೆ 2 ಹಂತಗಳಲ್ಲಿ  ಮತದಾನ ನಡೆಯಲಿದ್ದು, ಈಗಾಗಲೇ ಮಾ.10ರಿಂದಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿದೆ. ಈ ಮಾದರಿ ನೀತಿ ಸಂಹಿತೆಯ ಅನುಷ್ಠಾನಕ್ಕೆ ಆದಾಯ ತೆರಿಗೆ, ಅಬಕಾರಿ, ಕಂದಾಯ ಹಾಗೂ ಪೊಲೀಸ್‌ ಇಲಾಖೆಗಳನ್ನೊಳಗೊಂಡ ವಿವಿಧ ಇಲಾಖೆಗಳ ತಂಡಗಳನ್ನು ರಚಿಸಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ ಕುಮಾರ್‌ ತಿಳಿಸಿದ್ದಾರೆ.

ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ನೀತಿ ಸಂಹಿತೆ ಜಾರಿಗೆ 1,512 ಫ್ಲೈಯಿಂಗ್‌ ಸ್ಕ್ವಾಡ್‌, 1,837 ಸ್ಟಾಟಿಕ್‌ ಸರ್ವೆಲೆನ್ಸ್‌ ತಂಡಗಳನ್ನು ರಚಿಸಲಾಗಿದ್ದು, 232 ಸಹಾಯಕ ಚುನಾವಣಾ ವೆಚ್ಚ ವೀಕ್ಷಕರು, 257 ಅಕೌಂಟಿಂಗ್‌ ತಂಡಗಳು ನೇಮಕ ಮಾಡಲಾಗಿದೆ. 726 ಪೊಲೀಸ್‌ ನಾಕಾಗಳು, 331 ವಿವಿಟಿ ತಂಡಗಳು ಹಾಗೂ 694 ವಿಎಸ್‌ಟಿ ತಂಡಗಳನ್ನು ರಚಿಸಲಾಗಿದೆ. ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದ ದಿನದಿಂದ ಇಲ್ಲಿವರೆಗೆ ಸಾರ್ವಜನಿಕ ಆಸ್ತಿಗಳ ಮೇಲಿನ 23, 854 ಗೋಡೆಬರಹ, 89,688 ಪೋಸ್ಟರ್‌, 52,704 ಬ್ಯಾನರ್‌, 26 ಸಾವಿರ ಇತರೆ ವಸ್ತುಗಳ ಸೇರಿ 1..92 ಲಕ್ಷ ವಸ್ತುಗಳನ್ನು ತೆರವುಗೊಳಿಸಲಾಗಿದ್ದು, 2 ದೂರುಗಳನ್ನು ದಾಖಲಿಸಿಕೊಳ್ಳಲಾಗಿದೆ. ಅದೇ ರೀತಿ ಖಾಸಗಿ ಆಸ್ತಿಗಳ ಮೇಲಿನ 8,372 ಗೋಡೆ ಬರಹ, 38,325 ಪೋಸ್ಟರ್‌, 19,409 ಬ್ಯಾನರ್‌, 9 ಸಾವಿರ ಇತರೆ ವಸ್ತುಗಳ ಸೇರಿ 75,552 ವಸ್ತುಗಳನ್ನು ತೆರವುಗೊಳಿಸಲಾಗಿದೆ. 30.10 ಲಕ್ಷ ನಗದು ಮತ್ತು 4 ಕೋಟಿ ಮೌಲ್ಯದ 73 ಸಾವಿರ ಲೀಟರ್‌ ಮದ್ಯ ಜಪ್ತಿ ಮಾಡಲಾಗಿದೆ ಎಂದರು.

42 ಸಾವಿರ  ಶಸ್ತ್ರಾಸ್ತ್ರಗಳ ಠೇವಣಿ

ಚುನಾವಣೆ ಹಿನ್ನೆಲೆಯಲ್ಲಿ ಪರವಾನಗಿ ಹೊಂದಿದ ಶಸ್ತ್ರಾಸ್ತ್ರಗಳನ್ನು ಠೇವಣಿಇರಿಸಿಕೊಳ್ಳುವ (ಡಿಪಾಸಿಟ್‌) ಕಾರ್ಯವನ್ನು ಜನವರಿ ತಿಂಗಳಿಂದ ಆರಂಭಿಸಲಾಗಿದ್ದು, ಇಲ್ಲಿತನಕ 42,498 ಶಸ್ತ್ರಾಸ್ತ್ರಗಳನ್ನು ಠೇವಣಿ ಇರಿಸಿಕೊಳ್ಳಲಾಗಿದೆ.

ಸಿಆರ್‌ಪಿಸಿ ಅಡಿಯಲ್ಲಿ 28,380 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು,16,462 ಮುಚ್ಚಳಿಕೆಗಳನ್ನು ಬರೆಸಿಕೊಳ್ಳಲಾಗಿದೆ. 6,378 ಜಾಮೀನು ತಹಿತ ವಾರಂಟ್‌ಗಳನ್ನು ಹೊರಡಿಸಲಾಗಿದ್ದು, ಚುನಾವಣೆ ಸಂದರ್ಭದಲ್ಲಿ ತೊಂದರೆ ಕೊಡಬಹುದು ಎಂಬಂಥ 34,679 ಮಂದಿಯನ್ನು ಗುರುತಿಸಲಾಗಿದ್ದು, ಆ ಪೈಕಿ ‌ 21 ಸಾವಿರ ಮಂದಿಯನ್ನು ಬಂಧಿಸಲಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿ ಮಾಹಿತಿ ನೀಡಿದರು.

ಹೊಸ ಯೋಜನೆ ಘೋಷಿಸುವಂತಿಲ್ಲ

ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲಿ ಯಾರೇ ಆಗಲಿ ಸರ್ಕಾರದ ಪರವಾಗಿ ಹೊಸ ಯೋಜನೆಗಳನ್ನು ಘೋಷಿಸುವಂತಿಲ್ಲ, ನೀತಿ ನಿರೂಪಕ ವಿಚಾರಗಳ ಬಗ್ಗೆ ಭರವಸೆ ನೀಡುವಂತಿಲ್ಲ. ಯಾರಾದರೂ ಆ ರೀತಿ ಮಾಡಿದರೆ ಅದನ್ನು ಆಯೋಗ ಗಂಭೀರವಾಗಿ ಪರಿಗಣಿಸಲಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ ಕುಮಾರ್‌ ಹೇಳಿದ್ದಾರೆ.

ಸುದ್ದಿಗೋಷ್ಠಿ ವೇಳೆ “ಮಂಡ್ಯದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಿಎಂ ಕುಮಾರಸ್ವಾಮಿ ಜೂನ್‌ ತಿಂಗಳಲ್ಲಿ ಇಲ್ಲಿಗೆ ಬಂದು ಯೋಜನೆ ಉದ್ಘಾಟಿಸುತ್ತೇನೆ ಎಂದು ಘೋಷಣೆ ಮಾಡಿದ್ದಾರೆ’ ಇದು ನೀತಿಸಂಹಿತೆ ಉಲ್ಲಂಘ ನೆ ಆಗುವುದಿಲ್ಲವೇ ಎಂದು ಕೇಳಿದ ಪ್ರಶ್ನೆಗೆ, ಈ ಬಗ್ಗೆ ಮಾಹಿತಿ ಪಡೆದುಕೊಳ್ಳಲಾಗುವುದು ಎಂದರು.

ಟಾಪ್ ನ್ಯೂಸ್

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

High-Court

Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್‌

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ban

Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.