ಬಿಜೆಪಿ ಅಭ್ಯರ್ಥಿ ಆಯ್ಕೆಗೆ “ಸಪ್ತ ಮೂಲ’ ನಿರ್ಣಾಯಕ
Team Udayavani, Mar 15, 2019, 6:15 AM IST
ಬೆಂಗಳೂರು: ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಕಸರತ್ತು ನಡೆದಿದ್ದು, ಕಾರ್ಯಕರ್ತರಿಂದ ವರಿಷ್ಠರವರೆಗಿನ “ಸಪ್ತ ಮೂಲ’ಗಳ ವರದಿಗಳ ಅಂತಿಮವಾಗಿ ಅಭ್ಯರ್ಥಿಗಳ ಆಯ್ಕೆಗೆ ನಿರ್ಣಾಯಕವೆನಿಸಲಿವೆ.
ಸಾಮಾನ್ಯ ಕಾರ್ಯಕರ್ತರ ಅಭಿಪ್ರಾಯವೂ ಸೇರಿದಂತೆ ವರಿಷ್ಠರು ನಾನಾ ಮೂಲಗಳು, ಸಮೀಕ್ಷೆಗಳಿಂದ ಪಡೆಯುವ ಮಾಹಿತಿ ಆಧರಿಸಿ ಪಕ್ಷದ ಕೇಂದ್ರ ಚುನಾವಣಾ ಸಮಿತಿಯು ವಿಸ್ತೃತ ಚರ್ಚೆ ನಡೆಸಿದ ಬಳಿಕವಷ್ಟೇ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸುತ್ತದೆ. ಈ ಇಡೀ ಪ್ರಕ್ರಿಯೆಯಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿಯ ಪಾತ್ರ ಶೇ.30ರಷ್ಟು ಮಾತ್ರ ಎಂಬುದು ವಿಶೇಷ.
ಮಾ.15ಕ್ಕೆ ಕೋರ್ ಕಮಿಟಿ ಸಭೆ ನಡೆಯಲಿದ್ದು, ಪ್ರತಿ ಲೋಕಸಭಾ ಕ್ಷೇತ್ರಕ್ಕೆ ಒಂದು ಇಲ್ಲವೇ ಒಂದಕ್ಕಿಂತ ಹೆಚ್ಚು ಸಂಭಾವ್ಯ ಅಭ್ಯರ್ಥಿಗಳ ಹೆಸರನ್ನು ಶಿಫಾರಸು ಮಾಡಲು ಸಿದ್ಧತೆ ನಡೆಸಿದೆ. ಕೋರ್ ಕಮಿಟಿ ಸಲ್ಲಿಸುವ ಶಿಫಾರಸು ಕುರಿತು ಕೇಂದ್ರ ಚುನಾವಣಾ ಸಮಿತಿಯಲ್ಲಿ ಸಮಗ್ರ ಚರ್ಚೆ ಬಳಿಕ ಅಂತಿಮವಾಗಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ರಾಜ್ಯ ನಾಯಕರ ಪಾತ್ರ ಶೇ.30: ಹಿಂದೆಲ್ಲಾ ಕೋರ್ ಕಮಿಟಿಯಿಂದ ಶಿಫಾರಸ್ಸಾಗುವ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನೇ ಪರಿಶೀಲಿಸಿ ಚರ್ಚಿಸಿದ ನಂತರ ವರಿಷ್ಠರು ಅಂತಿಮಗೊಳಿಸುತ್ತಿದ್ದರು. ಬಹುತೇಕ ಸಂದರ್ಭದಲ್ಲಿ ಒಂದೇ ಹೆಸರು ಶಿಫಾರಸು ಆಗಿ ಅದೇ ಅಂತಿಮವಾಗುತ್ತಿತ್ತು. ಆದರೆ ಈಗ ಆಯ್ಕೆ ಪ್ರಕ್ರಿಯೆಯಲ್ಲಿ ಸಾಕಷ್ಟು ಬದಲಾವಣೆಯಾಗಿದೆ.
ರಾಜ್ಯ ಕೋರ್ ಕಮಿಟಿಯಲ್ಲಿ ಶಿಫಾರಸು ಮಾಡಲಾದ ಹೆಸರುಗಳ ಜತೆಗೆ ವರಿಷ್ಠರು ತಮ್ಮದೇ ಮೂಲಗಳ ಮಾಹಿತಿ ಆಧರಿಸಿ ಎಲ್ಲವನ್ನೂ ತಾಳೆ ಹಾಕಿ ಅರ್ಹ ಅಭ್ಯರ್ಥಿಯ ಹೆಸರನ್ನು ಅಂತಿಮಗೊಳಿಸಲಿದ್ದಾರೆ. ಹಾಗಾಗಿ ಅಭ್ಯರ್ಥಿಗಳ ಆಯ್ಕೆಯಲ್ಲಿ ಕೋರ್ ಕಮಿಟಿಯ ಪಾತ್ರ ಶೇ.30 ಮಾತ್ರ ಎಂದರೆ ತಪ್ಪಾಗಲಾರದು ಎಂದು ಮೂಲಗಳು ಹೇಳಿವೆ.
ಒಟ್ಟಾರೆ ಲೋಕಸಭಾ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ರಾಷ್ಟ್ರೀಯ ನಾಯಕರು ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಗೆ ವಿಶೇಷ ಒತ್ತು ನೀಡಿದ್ದಾರೆ. ಎಲ್ಲ ಮೂಲಗಳ ಮಾಹಿತಿಯಲ್ಲೂ ಶಿಫಾರಸುಗೊಂಡಿರುವ ಹೆಸರುಗಳನ್ನೇ ಕ್ರೋಢೀಕರಿಸಿ ಸಾಧಕ- ಬಾಧಕ ಪರಿಶೀಲಿಸಿ ಸೂಕ್ತವೆಂದು ಮನವರಿಕೆಯಾದರಷ್ಟೇ ಅಂತಿಮಗೊಳಿಸುವ ವ್ಯವಸ್ಥೆ ರೂಪುಗೊಂಡಿದೆ. ಸಮರ್ಥ ಅಭ್ಯರ್ಥಿ ಆಯ್ಕೆಯಾದರೆ ಗೆಲುವಿಗೂ ಸಹಕಾರಿಯಾಗುವ ಉದ್ದೇಶದಿಂದ ಈ ವ್ಯವಸ್ಥೆ ಉಪಯುಕ್ತವಾಗಿದೆ ಎಂದು ರಾಜ್ಯ ಬಿಜೆಪಿಯ ಹಿರಿಯ ನಾಯಕರೊಬ್ಬರು ತಿಳಿಸಿದರು.
ಪಕ್ಷಪಾತಕ್ಕೆ ಅವಕಾಶವಿಲ್ಲ: ನಾನಾ ಪ್ರಭಾವ, ಒತ್ತಡ, ಸ್ವಹಿತಾಸಕ್ತಿ ಇತರೆ ಕಾರಣಗಳಿಗೆ ಅರ್ಹ ಅಭ್ಯರ್ಥಿಗಳು, ಆಕಾಂಕ್ಷಿಗಳಿದ್ದರೂ ಅವರನ್ನು ಕಡೆಗಣಿಸಿ ಪಕ್ಷಪಾತ ತೋರಲು ಈಗಿನ ವ್ಯವಸ್ಥೆಯಲ್ಲಿ ಅವಕಾಶವೇ ಇಲ್ಲ. ಏಕೆಂದರೆ ಕಾರ್ಯಕರ್ತರು, ನಾನಾ ಆ್ಯಪ್‌ಗ್ಳಲ್ಲಿ ಸಲ್ಲಿಕೆಯಾದ ಮಾಹಿತಿ, ಸಮೀಕ್ಷಾ ವರದಿ, ಸಂಘ ಪರಿವಾರ ಮೂಲದ ಮಾಹಿತಿ ಪ್ರಕಾರ ಗೆಲ್ಲುವ ಸಾಧ್ಯತೆ ಇರುವ, ವರ್ಚಸ್ಸು ಹೊಂದಿರುವ ಅಭ್ಯರ್ಥಿಗಳ ಬಗ್ಗೆ ಮಾಹಿತಿಯನ್ನು ವರಿಷ್ಠರು ಇಟ್ಟುಕೊಂಡಿರುತ್ತಾರೆ.
ಒಂದೊಮ್ಮೆ ಕೋರ್ ಕಮಿಟಿಯಿಂದ ಶಿಫಾರಸುಗೊಂಡ ಪಟ್ಟಿಯಲ್ಲಿ ಇಲ್ಲದ ಸಂಭಾವ್ಯ ಅಭ್ಯರ್ಥಿ ಹೆಸರು ವರಿಷ್ಠರು ಪಡೆದ ಇತರೆ ಮೂಲಗಳ ಮಾಹಿತಿಯಲ್ಲಿ ಉಲ್ಲೇಖವಾಗಿದ್ದರೆ ಆ ಬಗ್ಗೆ ಪ್ರಶ್ನೆ ಮಾಡುವ ಸಾಧ್ಯತೆ ಇರುತ್ತದೆ. ಹಾಗಾಗಿ ಸಾಕಷ್ಟು ಎಚ್ಚರಿಕೆ, ಸಮಗ್ರ ಚರ್ಚೆ ನಡೆಸಿದ ಬಳಿಕವಷ್ಟೇ ಶಿಫಾರಸು ಮಾಡುವುದು ಅನಿವಾರ್ಯ ಎಂದು ಮೂಲಗಳು ತಿಳಿಸಿವೆ.
ಇತ್ತೀಚೆಗೆ ರಾಜ್ಯವೊಂದರಲ್ಲಿ ಲೋಕಸಭಾ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಚರ್ಚೆ ನಡೆಯುವಾಗ ಶಿಫಾರಸುಗೊಂಡ ಸಂಭಾವ್ಯ ಪಟ್ಟಿಯಲ್ಲಿ ಉಲ್ಲೇಖವಾಗದ ಅಭ್ಯರ್ಥಿಯ ಹೆಸರನ್ನು ಸ್ವತಃ ವರಿಷ್ಠರೇ ಪ್ರಸ್ತಾಪಿಸಿ ಈ ಅಭ್ಯರ್ಥಿ ಹೆಸರು ಏಕಿಲ್ಲ ಎಂದು ಪ್ರಶ್ನಿಸಿದ್ದಾರೆ. ಸಮಗ್ರ ಚರ್ಚೆಯ ಬಳಿಕ ಕೆಲ ಕ್ಷೇತ್ರಗಳ ಅಭ್ಯರ್ಥಿಗಳ ಬದಲಾವಣೆ ನಿರ್ಣಯ ಕೈಗೊಂಡ ಪ್ರಸಂಗವೂ ನಡೆದಿದೆ ಎನ್ನಲಾಗಿದೆ.
“ಸಪ್ತ ಮೂಲ’ ವರದಿ: ಪಕ್ಷದ ವರಿಷ್ಠರು ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಪಟ್ಟಂತೆ ಏಳು ಮೂಲಗಳ ವರದಿಗಳನ್ನು ಪ್ರಧಾನವಾಗಿ ಪರಿಗಣಿಸಲಿದ್ದಾರೆ. ಕಾರ್ಯಕರ್ತರು, ಬೂತ್‌ಮಟ್ಟದ ಸಮಿತಿ, ಶಕ್ತಿ ಕೇಂದ್ರ ಪ್ರಮುಖರು ಸೇರಿದಂತೆ ತಳಹಂತದಿಂದ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯೊಂದು ಕೇಂದ್ರ ಚುನಾವಣಾ ಸಮಿತಿಗೆ ಸಲ್ಲಿಕೆಯಾಗುತ್ತದೆ.
ಬಳಿಕ ರಾಜ್ಯ ಬಿಜೆಪಿ ಕೋರ್ ಕಮಿಟಿಯು ಸಂಭಾವ್ಯರ ಪಟ್ಟಿಯನ್ನು ಶಿಫಾರಸು ಮಾಡಲಿದ್ದು, ಪ್ರಮುಖ ಮೂಲ ಎನಿಸಿದೆ. “ನಮೋ ಆ್ಯಪ್’ ಸೇರಿದಂತೆ ಇತರೆ ಸಾಮಾಜಿಕ ಜಾಲತಾಣ ಮೂಲಗಳಿಂದ ಪಡೆಯುವ ಪ್ರತಿಕ್ರಿಯೆ, ಅಭಿಪ್ರಾಯವನ್ನೂ ಸಮಿತಿ ಗಂಭೀರವಾಗಿಯೇ ಪರಿಗಣಿಸಲಿದೆ.
ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರು ಸಾಮಾಜಿಕ ಜಾಲತಾಣವನ್ನು ಪರಿಣಾಮಕಾರಿಯಾಗಿ ಬಳಸುತ್ತಿದ್ದು, ಈ ಮೂಲಗಳ ಮಾಹಿತಿಗೂ ವಿಶೇಷ ಒತ್ತು ನೀಡಲಾಗುತ್ತದೆ. ಜತೆಗೆ ವರಿಷ್ಠರು ಮೂರು ಪ್ರತ್ಯೇಕ ಸಂಸ್ಥೆಗಳ ಮೂಲಕ ಪ್ರತ್ಯೇಕವಾಗಿ ಸಮೀಕ್ಷೆಗಳನ್ನು ನಡೆಸಿ ಆ ವರದಿಯನ್ನೂ ಪರಿಶೀಲಿಸಲಿದ್ದಾರೆ. ಜತೆಗೆ ಸಂಘ ಪರಿವಾರದ ಮೂಲದಿಂದಲೂ ಸಂಭಾವ್ಯ ಅಭ್ಯರ್ಥಿಗಳ ಮಾಹಿತಿ ಪಡೆಯಲಾಗುತ್ತದೆ ಎಂದು ಉನ್ನತ ಮೂಲಗಳು ತಿಳಿಸಿವೆ.
* ಎಂ.ಕೀರ್ತಿಪ್ರಸಾದ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.