ತೆಂಗಿಗೆ ತಗಲುವ ರೋಗಗಳ ಬಗ್ಗೆ ಜಾಗೃತಿ ವಹಿಸಿ

Team Udayavani, Mar 15, 2019, 7:26 AM IST

tengige.jpg

ಚಾಮರಾಜನಗರ: ರೈತರು  ತೆಂಗು ಬೆಳೆಯನ್ನು ವೈಜ್ಞಾನಿಕ ಮಾದರಿಯಲ್ಲಿ  ಸಂರಕ್ಷಣೆ ಮಾಡಿಕೊಳ್ಳುವ ಜೊತೆಗೆ ತೆಂಗಿಗೆ ತಗಲುವ ರೋಗಗಳ ಬಗ್ಗೆ ಜಾಗೃತಿ ವಹಿಸಿ, ತೆಂಗು ಅಭಿವೃದ್ಧಿ ಮಂಡಲಿಯಿಂದ ದೊರೆಯವ ಸವಲತ್ತುಗಳನ್ನು  ಪಡೆದುಕೊಳ್ಳಬೇಕು ಎಂದು ತೆಂಗು ಬೆಳೆಗಾರರ ಸಂಸ್ಕರಣ ಮತ್ತು ಮಾರಾಟ ಸಹಕಾರ ಸಂಘದ ಅಧ್ಯಕ್ಷ ಎ.ಎಂ.ಮಹೇಶ್‌ಪ್ರಭು ಹೇಳಿದರು. 

ತಾಲೂಕಿನ ಕಾಳನಹುಂಡಿ ಸಮೀಪದ ಮುಣಚನಹಳ್ಳಿಯಲ್ಲಿರುವ ತೆಂಗು ಸಂಸ್ಕರಣ ಘಟಕದಲ್ಲಿ ತೆಂಗು ಬೆಳೆಗಾರರ ಸಂಸ್ಕರಣ ಮತ್ತು ಮಾರಾಟ ಸಹಕಾರ ಸಂಘ ಹಾಗು ತೆಂಗು ಅಭಿವೃದ್ಧಿ ಮಂಡಳಿಯ ನೆರವಿನೊಂದಿಗೆ ನಡೆದ ತೆಂಗು ಪ್ರಾತ್ಯಕ್ಷಿಕ ತಾಕು ಯೋಜನೆಯ ಸದಸ್ಯ ರೈತರ ಸಭೆಯಲ್ಲಿ ಮಾತನಾಡಿದರು. 

ತೆಂಗು ಬೆಳೆಗಾರರು ಮರಗಳನ್ನು ರಕ್ಷಣೆ ಮಾಡಿಕೊಳ್ಳುವ ಜೊತೆಗೆ ಹೆಚ್ಚಿನ ಇಳುವರಿ ಪಡೆದುಕೊಳ್ಳಲು ಅನುಕೂಲವಾಗುವಂತಹ ಕ್ರಮಗಳನ್ನು ಕೈಗೊಳ್ಳಬೇಕು. ತೆಂಗಿನ ಮರಕ್ಕೆ ಅಗತ್ಯವಾದಷ್ಟು ನೀರು ಪೂರೈಕೆ ಮಾಡಬೇಕು. ಅಲ್ಲದೇ ತಾಕುಗಳನ್ನು ಆಗಾಗ ಪರೀಕ್ಷೆ ಮಾಡಿಕೊಳ್ಳುವ ಜೊತೆಗೆ ತೆಂಗು ಅಭಿವೃದ್ಧಿ ಮಂಡಳಿಯು ನೀಡುವ ಸವಲತ್ತುಗಳು ಹಾಗು ಪರಿಕರಗಳನ್ನು ಪಡೆದು ಆರ್ಥಿಕ ಲಾಭವನ್ನು ಪಡೆದುಕೊಳ್ಳಬೇಕು ಎಂದರು. 

ತೆಂಗು ಅಭಿವೃದ್ಧಿ ಮಂಡಲಿಯಿಂದ 94.33 ಹೆಕ್ಟರ್‌ ಪ್ರದೇಶದಲ್ಲಿ  ತೆಂಗು ಅಭಿವೃದ್ಧಿ ಕಾರ್ಯಕ್ರಮವನ್ನು ರೂಪಿಸಲಾಗಿದೆ.  ಆಯ್ದ ರೈತರಿಗೆ ಮೊದಲ ಹಂತದಲ್ಲಿ ಪರಿಕರಗಳನ್ನು ವಿತರಣೆ  ಮಾಡಲಾಗಿತ್ತು. ಈ ವರ್ಷ 2ನೇ ಹಂತದ ಪರಿಕರವನ್ನು ವಿತರಣೆ ಮಾಡಲಾಗುತ್ತಿದೆ. ಈ ಪರಿಕರಗಳನ್ನು ತೆಂಗಿನ ಮರಗಳಿಗೆ ಬಳಕೆ ಮಾಡಿ ಹೆಚ್ಚಿನ ಇಳುವರಿಯನ್ನು  ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ತೆಂಗು ಅಭಿವೃದ್ಧಿ ಮಂಡಲಿ ಹಿರಿಯ ಕ್ಷೇತ್ರಾಧಿಕಾರಿ ಕೆ.ಎಂ.ವಿಜಯನ್‌, ಎಂಟಿಎಸ್‌ನ  ಎನ್‌.ಮಂಜುನಾಥ ರೈತರಿಗೆ ಪರಿಕರಗಳನ್ನು ವಿತರಣೆ ಮಾಡಿದರು. ತೆಂಗಿನ ಮರಗಳಿಗೆ ಪರಿಕರವನ್ನು ಹಾಕುವ ವಿಧಾನ ಕುರಿತು  ಪ್ರಾತ್ಯಕ್ಷಿತೆಯನ್ನು ನೀಡಿದರು. ಸಂಘದ ನಿರ್ದೇಶಕರಾದ ಎಂ.ಎಸ್‌. ರವಿಶಂಕರ್‌, ವೆಂಕಟಶೇಷಯ್ಯ, ಮಹದೇವಶೆಟ್ಟಿ, ಶಿವಾನಂದ, ಎಚ್‌.ಎನ್‌. ಸ್ವಾಮಿ, ಸದಸ್ಯರಾದ ರೇಚಣ್ಣ, ಜಿ.ಎಂ.ಸುಬ್ಬಣ್ಣ, ರಾಜೇಶ್‌, ನಾಗೇಶ್‌, ಎನ್‌.ಎಂ.ಮಹೇಶ್‌ ಇತರರು ಇದ್ದರು.

ಟಾಪ್ ನ್ಯೂಸ್

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು

9-kollegala

Kollegala: ಕಲುಷಿತ ನೀರು ಸೇವಿಸಿ ನಾಲ್ವರು ಆಸ್ಪತ್ರೆಗೆ ದಾಖಲು

Elephanat-1

Chamarajanagara: ವಕ್ರದಂತ ಹೊಂದಿದ್ದ ಕಾಡಾನೆ ಸ್ವಾಭಾವಿಕ ಸಾವು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.