ಮಕ್ಕಳಿಗೆ ನೈತಿಕ ಶಿಕ್ಷಣ ನೀಡಿ
Team Udayavani, Mar 15, 2019, 9:35 AM IST
ಇಂಡಿ: ಪ್ರತಿಯೊಂದು ಸಾಧನೆ ಹಿಂದೆ ಶಿಕ್ಷಣವೇ ಮುಖ್ಯವಾಗಿರುತ್ತದೆ. ಅದನ್ನು ಯಾರೂ ಅಲ್ಲಗಳೆಯಬಾರದು. ಸಮಾಜದ ಬದಲಾವಣೆಗೆ ಮಕ್ಕಳಲ್ಲಿ ನೈತಿಕ ಶಿಕ್ಷಣದ ಅವಶ್ಯಕತೆಯಿದೆ. ಈ ನಿಟ್ಟಿನಲ್ಲಿ ಶಿಕ್ಷಕರ ಪಾತ್ರ ಬಹಳ ಮಹತ್ವಪೂರ್ಣವಾಗಿದೆ ಎಂದು ಮೌಲಾನಾ ಜೀಯಾವುಲ್‌ಹಕ್ಕ ಉಮರಿ ಹೇಳಿದರು.
ಪಟ್ಟಣದ ಅಲ್‌ಕಾದೀರ ಉರ್ದು ಪ್ರಾಥಮಿಕ ಶಾಲೆ ಹಾಗೂ ಎಸ್.ಜಿ.ಬಿ ಪ್ರೌಢಶಾಲೆಯ 13ನೇ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಮಾತನಾಡಿದ ಅವರು, ಪ್ರತಿಯೊಬ್ಬರಿಗೂ ಭೌತಿಕ ಮಟ್ಟದ ನೈತಿಕ ಶಿಕ್ಷಣ ನೀಡಿದಾಗ ಮಾತ್ರ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯ. ಈ ನಿಟ್ಟಿನಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಅಮೂಲ್ಯವಾಗಿದೆ ಎಂದರು.
ಸೊಲ್ಲಾಪುರದ ತೌಫಿಕ ಹತ್ತೂರೆ ಮಾತನಾಡಿ, ಶಿಕ್ಷಕರು ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಸಂಸ್ಕಾರಭರಿತ ಶಿಕ್ಷಣ ನೀಡುವುದರಿಂದ ಭವಿಷ್ಯದಲ್ಲಿ ವಿದ್ಯಾರ್ಥಿಗಳು ದೇಶವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯಲು ಸಾಧ್ಯ. ಒಂದು ಶಿಕ್ಷಣ ಸಂಸ್ಥೆ ಶೈಕ್ಷಣಿಕ, ಕ್ರೀಡೆ, ಸಾಂಸ್ಕೃತಿಕ ಹಾಗೂ ಸಾಹಿತ್ಯ ಕ್ಷೇತ್ರಗಳಲ್ಲಿ ಅಭಿವೃದ್ಧಿ ಸಾಧಿಸಬೇಕಾದರೆ ಅದು ಕ್ರಿಯಾಶೀಲ ಶಿಕ್ಷಕರಿಂದ ಮಾತ್ರ ಸಾಧ್ಯ ಎಂದರು.
ಭೀಮಾಶಂಕರ ಸಕ್ಕರೆ ಕಾರಖಾನೆಯ ನಿರ್ದೇಶಕ ಜಟ್ಟೆಪ್ಪ ರವಳಿ ಮಾತನಾಡಿ, ತಾಲೂಕಿನಲ್ಲಿ ಅಲ್ ಕಾದೀರ ಶಿಕ್ಷಣ ಸಂಸ್ಥೆ ಅಡಿಯಲ್ಲಿ ನಡೆಯುತ್ತಿರುವ ಅಲ್ ಕಾದೀರ ಉರ್ದು ಪ್ರಾಥಮಿಕ ಶಾಲೆ ಹಾಗೂ ಎಸ್.ಜಿ.ಬಿ ಪ್ರೌಢಶಾಲೆಯು ತಾಲೂಕಿನ ಪರಿಸರದಲ್ಲಿ ಶಿಕ್ಷಣ ಕ್ರಾಂತಿಯ ಮೂಲಕ ಕೋಮು ಸಾಮರಸ್ಯ ಹಾಗೂ ಸದೃಢ ಸಮಾಜ ನಿರ್ಮಾಣ ಮಾಡುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಲಿಯಾಸ ಬೋರಾಮಣಿ ಮಾತನಾಡಿ, ಇಂದು ಶಿಕ್ಷಣ ಸಂಸ್ಥೆಗಳನ್ನು ಕಟ್ಟುವುದು ಸಾಮಾನ್ಯ ಕೆಲಸವಲ್ಲ. ಹಿಂದೆ ಹಣ, ತೋಳ್ಬಲವಿದ್ದರೆ ಮಾತ್ರ ಸಾಧ್ಯ. ಸರಕಾರಗಳು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅನುದಾನ ನೀಡಿದರೆ ಅವುಗಳ ಏಳ್ಗೆ ಸಾಧ್ಯ. ಪ್ರತಿಯೊಬ್ಬ ಮಗು ವಿದ್ಯಾವಂತರಾಗಬೇಕು. ಶಿಕ್ಷಣ ಸಂಸ್ಥೆಯು ಹೆಮ್ಮರವಾಗಿ ಬೆಳೆಯಲಿ ಎಂದರು.
ಸಂಸ್ಥೆಯ ಅಧ್ಯಕ್ಷ ಅಲ್‌ಹಾಜ ಸತ್ತಾರ ಬಾಗವಾನ ಅಧ್ಯಕ್ಷತೆ ವಹಿಸಿದ್ದರು. ಇಲಿಯಾಸ ಸೇಟ ಬಾಗವಾನ, ಪುರಸಭೆ ಅಧ್ಯಕ್ಷ ಶ್ರೀಕಾಂತ ಕೂಡಿಗನೂರ, ಜೈನುದ್ದಿನ ಬಾಗವಾನ, ಜಹಾಂಗೀರ ಸೌದಾಗರ, ಅಬ್ದುಲ್ ರಜಾಕ ಬಾಗವಾನ, ಸಾಹೀರ ಅಬ್ದುಲ್ ಗಣಿ ಅಡತೆ, ರೀಯಾಜ ಬುರಾನಪುರೆ, ಇರ್ಫಾನ್ ತುಳಜಾಪುರೆ, ನಿಸಾರಹ್ಮದ ಪಠಾಣ, ಮುನ್ನಾ ಬಾಗವಾನ, ಶಾಹುಸೇನ ಮಕಾಂದಾರ, ಹಣಮಂತ ಕೊಡತೆ, ಲಿಯಾಕತ ಸಾಲಿಮಣಿ ಇದ್ದರು. ನಾಸೀರ ಇನಾಂದಾರ ನಿರೂಪಿಸಿದರು. ಹಸನ ಮುಜಾವರ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ
Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.