ಕುಂಬ್ಳೆ, ಗೋಡೆ ಅವರಿಗೆ ಯಕ್ಷಮಂಗಳ ಪ್ರಶಸ್ತಿ ಪ್ರದಾನ
Team Udayavani, Mar 16, 2019, 12:30 AM IST
ಉಳ್ಳಾಲ: ಮಂಗಳೂರು ವಿಶ್ವವಿದ್ಯಾನಿಲಯದ ಡಾ| ಪಿ. ದಯಾನಂದ ಪೈ ಮತ್ತು ಪಿ. ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ 2018-19ನೇ ಸಾಲಿನ ಯಕ್ಷಮಂಗಳ ಪ್ರಶಸ್ತಿಯನ್ನು ತೆಂಕುತಿಟ್ಟಿನ ಹಿರಿಯ ಯಕ್ಷಗಾನ ಕಲಾವಿದ, ಅರ್ಥಧಾರಿ ಕುಂಬ್ಳೆ ಸುಂದರ ರಾವ್ ಹಾಗೂ ಬಡಗುತಿಟ್ಟಿನ ಹಿರಿಯ ವೇಷಧಾರಿ ಗೋಡೆ ನಾರಾಯಣ ಹೆಗಡೆ ಹಾಗೂ ಕೃತಿ ಪ್ರಶಸ್ತಿಯನ್ನು ವಿದ್ವಾಂಸ ಪ್ರೊ| ಜಿ.ಎಸ್. ಭಟ್ಟ ಸಾಗರ ಅವರ “ಯಕ್ಷಗಾನ ಅಂಗೋಪಾಂಗ ಸಮತೋಲನ ವಿಚಾರ’ ಕೃತಿಗೆ ನೀಡಿ ಗೌರವಿಸಲಾಯಿತು. ಮಂಗಳೂರು ವಿ.ವಿ.ಯ ಮಂಗಳ ಸಭಾಂಗಣದಲ್ಲಿ ಪ್ರಭಾರ ಕುಲಪತಿ ಪ್ರೊ| ಕಿಶೋರಿ ನಾಯಕ್ ಕೆ. ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಿತು.
ಪ್ರೊ| ಎಂ.ಎಲ್. ಸಾಮಗ ಅಭಿನಂದನ ಭಾಷಣ ಮಾಡಿದರು. ಕುಂಬ್ಳೆ ಸುಂದರ ರಾವ್ ಶಾಸಕರಾಗಿದ್ದ ಸಂದರ್ಭ ಯಕ್ಷಗಾನಕ್ಕೆ ಪ್ರತ್ಯೇಕ ಅಕಾಡೆಮಿ ಆರಂಭಗೊಂಡಿತ್ತು. ಕಲಾವಿದರಾಗಿ ಅವರದು ಮಹಾ ಸಾಧನೆಯಾಗಿದೆ. ಅವರ ಪಾತ್ರಗಳು ಪ್ರೇಕ್ಷಕರ ಮನದಲ್ಲಿ ಈಗಲೂ ಭದ್ರವಾಗಿ ನೆಲೆನಿಂತಿವೆ. ಗೋಡೆಯವರು ತನ್ನದೇ ಆದ ಪ್ರತ್ಯೇಕ ಶೈಲಿಯನ್ನು ಸ್ಥಾಪಿಸಿದವರು. ಕುಣಿತ, ನಿಲ್ಲುವ, ವಿಶಿಷ್ಟ ಅರ್ಥಗಾರಿಕೆಯ ಮೂಲಕ ಮೇರು ಕಲಾವಿದ ಅನಿಸಿಕೊಂಡವರು. ಡಾ| ಜಿ.ಎಸ್. ಭಟ್ ಅವರು ಯಕ್ಷಗಾನವನ್ನೇ ಕೇಂದ್ರವಾಗಿರಿಸಿಕೊಂಡ ವಿದ್ವಾಂಸರು ಎಂದರು.
ಡಾ| ಚಂದ್ರಶೇಖರ ದಾಮ್ಲೆ ಮುಖ್ಯ ಅತಿಥಿಯಾಗಿದ್ದರು. ಡಾ| ಧನಂಜಯ ಕುಂಬ್ಳೆ ಸ್ವಾಗತಿಸಿದರು. ಸಮ್ಮಾನ ಪತ್ರವನ್ನು ನಮಿರಾಜ್, ದಿವ್ಯಾ ಸಾಲಿಯಾನ್, ನಮಿತಾ ವಾಚಿಸಿದರು. ಡಾ| ರಾಜಶ್ರೀ ಕಾರ್ಯಕ್ರಮ ನಿರೂಪಿಸಿದರು. ಸತೀಶ್ ಕೊಣಾಜೆ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ullal: ಬಾವಿ, ಬೋರ್‌ವೆಲ್‌ನಲ್ಲಿ ತೈಲಮಿಶ್ರಿತ ನೀರು; ಸಮಸ್ಯೆ ಇರುವ ಮನೆಗಳಿಗೆ ಪೈಪ್‌ಲೈನ್
Train: ಗೋಮಟೇಶ್ವರ ಎಕ್ಸ್‌ಪ್ರೆಸ್ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು
Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ
Mangaluru: ಕರಾವಳಿಯಲ್ಲಿ ಈ ಬಾರಿ ವಾಡಿಕೆಯಂತೆ ಚಳಿ
Fraud Case: ಎಪಿಕೆ ಫೈಲ್ ಕಳುಹಿಸಿ 1.31 ಲ.ರೂ. ವಂಚನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Ullal: ಬಾವಿ, ಬೋರ್‌ವೆಲ್‌ನಲ್ಲಿ ತೈಲಮಿಶ್ರಿತ ನೀರು; ಸಮಸ್ಯೆ ಇರುವ ಮನೆಗಳಿಗೆ ಪೈಪ್‌ಲೈನ್
Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್
Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!
Sagara: ಮಿಡಿ ಮಾವು, ವಿಶ್ವವಿದ್ಯಾಲಯದ ನಡೆದಾಡುವ ವಿಶ್ವಕೋಶ ಬಿ.ವಿ.ಸುಬ್ಬರಾವ್ ಇನ್ನಿಲ್ಲ
Perla: ರಸ್ತೆ ವಿಸ್ತರಣೆ, ನೇತ್ರಾವತಿ ನದಿ ತಡೆಗೋಡೆ ದುರಸ್ತಿಗೆ ಆಗ್ರಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.