ಖರ್ಗೆಗೆ ಎರಡು ಕ್ಷೇತ್ರ ನೀಡಲು ಒತ್ತಡ


Team Udayavani, Mar 16, 2019, 1:58 AM IST

kharge.jpg

ಬೆಂಗಳೂರು: ಲೋಕಸಭೆಯಲ್ಲಿ ಕಾಂಗ್ರೆಸ್‌ ಸಂಸ ದೀಯ ಪಕ್ಷದ ನಾಯಕ ಹಾಗೂ ಹಿರಿಯ ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆಯವರನ್ನು ಸೋಲಿಸಲು ಬಿಜೆಪಿ ಪಣ ತೊಟ್ಟು ಕಾರ್ಯತಂತ್ರ ರೂಪಿಸುತ್ತಿದ್ದು, ಖರ್ಗೆಯವರಿಗೆ ಸೋಲಾದರೆ ಭವಿಷ್ಯದಲ್ಲಿ ಕಾಂಗ್ರೆಸ್‌ಗೆ ದಲಿತ ಮತಗಳು ಕೈಕೊಡುವ ಸಾಧ್ಯತೆ ಇದೆ ಎಂಬ ಲೆಕ್ಕಾಚಾರ ಈಗ ಆರಂಭವಾಗಿದೆ. “ಖರ್ಗೆ ಗೆಲ್ಲಿಸಿ ಕಾಂಗ್ರೆಸ್‌ ಉಳಿಸಿ’ ಎಂಬ ಬೇಡಿಕೆಯನ್ನು ಪಕ್ಷದ ಕೆಲವು ನಾಯಕರು ಹೈಕಮಾಂಡ್‌ ಮುಂದೆ ಇಟ್ಟಿದ್ದಾರೆ ಎನ್ನಲಾಗಿದೆ.

ಖರ್ಗೆಯವರಿಗೆ ಕಲಬುರಗಿ ಯಲ್ಲಿ ಬಿಜೆಪಿಯಿಂದ ಪ್ರಬಲ ಪೈಪೋಟಿ ಇರುವುದ ರಿಂದ ಅವರಿಗೆ ಸೋಲಾಗದಂತೆ ನೋಡಿಕೊಳ್ಳಲು ಎರಡು ಕಡೆ ಸ್ಪರ್ಧೆಗೆ ಅವಕಾಶ ಕಲ್ಪಿಸಬೇಕು ಎಂಬ ಬೇಡಿಕೆ ಇಡಲಾಗಿದೆ. ಹಿರಿಯ ಶಾಸಕರಾದ ರಮೇಶ್‌ ಕುಮಾರ್‌ ಸೇರಿ ಪಕ್ಷದ ಕೆಲವು ಹಿರಿಯ ನಾಯಕರು ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿಯವರನ್ನು ಭೇಟಿ ಮಾಡಿ, ಖರ್ಗೆಯವರ ಸೋಲು ಗೆಲುವಿನಿಂದ ರಾಷ್ಟ್ರ ರಾಜಕಾರಣ ಹಾಗೂ ಕಾಂಗ್ರೆಸ್‌ಗೆ ಆಗುವ ನಷ್ಟದ ಬಗ್ಗೆ ವಿವರಿಸಿದ್ದಾರೆ ಎಂದು ತಿಳಿದು ಬಂದಿದೆ.

ದಲಿತರು ವಿಮುಖರಾಗುವ ಆತಂಕ: ರಾಷ್ಟ್ರ ರಾಜ ಕಾರಣದಲ್ಲಿ ಸದ್ಯ ದಲಿತ ಸಮುದಾಯದಲ್ಲಿ ಮಲ್ಲಿ ಕಾರ್ಜುನ ಖರ್ಗೆ ಮೇಲ್ಪಂಕ್ತಿ ನಾಯಕರಾಗಿ ಗುರುತಿಸಿ ಕೊಂಡಿದ್ದಾರೆ. ಅಲ್ಲದೇ ಕಳೆದ 5 ವರ್ಷದಲ್ಲಿ ಕಾಂಗ್ರೆಸ್‌ ಸಂಸದರ ಸಂಖ್ಯೆ ಕಡಿಮೆಯಿದ್ದರೂ, ಪ್ರಧಾನಿ ಮೋದಿಯವರನ್ನು ಸಂಸತ್ತಿನಲ್ಲಿ ಎದುರಿಸಿ ತಮ್ಮ ಸಾಮರ್ಥ್ಯವನ್ನುಸಾಬೀತು ಪಡೆ ಸಿದ್ದಾರೆ.

ಈ ಬಾರಿ ರಾಷ್ಟ್ರ ರಾಜಕಾರಣದಲ್ಲಿ ಬಿಎಸ್‌ಪಿ ನಾಯಕಿ ಮಾಯಾವತಿ ಕಾಂಗ್ರೆಸ್‌ನಿಂದ ಅಂತರ ಕಾಯ್ದು ಕೊಂಡು ದಲಿತ ಅಸ್ಮಿತೆಯ ಮೇಲೆ ಪ್ರತ್ಯೇಕ ಅಸ್ತಿತ್ವ ಪಡೆದುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಇದು ಕಾಂಗ್ರೆಸ್‌ ನಂಬಿರುವ ಸಾಂಪ್ರದಾಯಿಕ ಮತ ದಾರರಾಗಿರುವ ದಲಿತ ಸಮುದಾಯದಲ್ಲಿ ಗೊಂದಲಕ್ಕೆ ಕಾರಣವಾಗಲಿದೆ. ಈ ಸಂದರ್ಭ ಖರ್ಗೆಯವರಿಗೆ ಚುನಾವಣೆಯಲ್ಲಿ ಹಿನ್ನಡೆಯಾದರೆ, ಭವಿಷ್ಯದಲ್ಲಿ ದಲಿತ ಸಮುದಾಯ ಕಾಂಗ್ರೆಸ್‌ನಿಂದ ದೂರ ಸರಿ ಯುವ ಆತಂಕವಿದೆ ಎಂದು ರಾಹುಲ್‌ ಗಾಂಧಿ ಯವರಿಗೆ ಮನವರಿಕೆ ಮಾಡುವ ಪ್ರಯತ್ನ ನಡೆಸಿದ್ದಾರೆ ಎನ್ನಲಾಗಿದೆ. ಎರಡು ಕಡೆ ಸ್ಪರ್ಧೆಗೆ ಸಲಹೆ: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಸೋಲುತ್ತಾರೆ ಎನ್ನುವ ಕಾರಣಕ್ಕೆ ಅವರಿಗೆ ಬಾದಾಮಿಯಲ್ಲಿಯೂ ಸ್ಪರ್ಧೆಗೆ ಟಿಕೆಟ್‌ ನೀಡಿ ಎರಡು ಕಡೆಯಲ್ಲಿ ಸ್ಪರ್ಧೆಗೆ ಅವಕಾಶ ಕಲ್ಪಿಸಲಾಗಿತ್ತು.

ಸಿದ್ದರಾಮಯ್ಯ ಅವರು ಬಾದಾಮಿಯಲ್ಲಿ ಗೆಲುವು ಪಡೆಯುವ ಮೂಲಕ ರಾಜಕೀಯದಲ್ಲಿ ಪುನರ್‌ ಜನ್ಮ ಪಡೆಯುವಂತಾಯಿತು. ಅವರಿಗೆ ಎರಡು ಕಡೆ ಸ್ಪರ್ಧೆಗೆ ಅವಕಾಶ ನೀಡುವುದಾದರೆ, ರಾಷ್ಟ್ರ ರಾಜಕಾರಣದ ದೃಷ್ಟಿಯಿಂದ ಹಾಗೂ ಪಕ್ಷದ ಭವಿಷ್ಯದ ಹಿತದೃಷ್ಟಿಯಿಂದ ಖರ್ಗೆಯವರಿಗೂ ಎರಡು ಕಡೆ ಸ್ಪರ್ಧೆಗೆ ಅವಕಾಶ ಕಲ್ಪಿಸುವುದರಲ್ಲಿ ತಪ್ಪಿಲ್ಲ ಎಂಬ ವಾದ ಮಂಡಿಸಿದ್ದಾರೆ ಎನ್ನಲಾಗಿದೆ.

ಕೋಲಾರ ಗೊಂದಲ: ಅದೇ ಕಾರಣಕ್ಕೆ ಕೋಲಾರ ಲೋಕಸಭಾ ಕ್ಷೇತ್ರದಿಂದಲೂ ಖರ್ಗೆಯವರಿಗೆ ಟಿಕೆಟ್‌ ನೀಡುವಂತೆ ಕೋಲಾರ ಜಿಲ್ಲಾ ಕಾಂಗ್ರೆಸ್‌ ಮುಖಂಡರು ರಾಹುಲ್‌ ಗಾಂಧಿ ಮೇಲೆ ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದೆ. ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ದಲಿತ ಬಲಗೈ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಅಲ್ಲಿ ಸ್ಪರ್ಧೆ ಮಾಡಿದರೆ ಖರ್ಗೆಯವರ ಗೆಲುವು ಸುಲಭವಾಗುತ್ತದೆ ಎಂದು ಹೇಳಿದ್ದಾರೆ ಎನ್ನಲಾಗಿದೆ.

ಅದಕ್ಕೆ ಪರ್ಯಾಯವಾಗಿ ಕೋಲಾರ ಸಂಸದ ಕೆ.ಎಚ್‌.ಮುನಿಯಪ್ಪ ಅವರಿಗೆ ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆಗೆ ಅವಕಾಶ ಕಲ್ಪಿಸಿದರೆ, ಅಲ್ಲಿ ದಲಿತ ಎಡಗೈ ಸಮುದಾಯ ಹೆಚ್ಚಿರುವುದರಿಂದ ಅವರೂ ಗೆಲ್ಲಲು ಅನುಕೂಲವಾಗುತ್ತದೆ. ಅದರೊಂದಿಗೆ ದಲಿತ ಎಡಗೈ ಸಮುದಾಯದ ಮತದಾರರು ಹೆಚ್ಚಿರುವ ಪಕ್ಕದ ದಾವಣಗೆರೆ ಹಾಗೂ ಬಳ್ಳಾರಿ ಲೋಕ ಸಭಾ ಕ್ಷೇತ್ರದಲ್ಲಿಯೂ ಮುನಿಯಪ್ಪ ಸ್ಪರ್ಧೆಯಿಂದ ಅನುಕೂಲವಾಗುತ್ತದೆ ಎಂಬ ಲೆಕ್ಕಾಚಾರವನ್ನು ರಾಹುಲ್‌ ಮುಂದಿಟ್ಟಿದ್ದಾರೆ ಎಂದು ತಿಳಿದು ಬಂದಿದೆ. ರಾಜ್ಯ ನಾಯಕರ ವಾದವನ್ನು ಖರ್ಗೆಯವರು ನಯವಾಗಿ ತಳ್ಳಿ ಹಾಕಿದ್ದಾರೆ ಎನ್ನಲಾಗಿದ್ದು, ಕಲಬುರಗಿಯಲ್ಲಿ ಮಾತ್ರ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ. ಆದರೆ, ಅಂತಿಮವಾಗಿ ಹೈಕಮಾಂಡ್‌ ಸೂಚಿಸಿದರೆ, ಅನಿವಾರ್ಯವಾಗಿ ಒಪ್ಪಿಕೊಳ್ಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಮುನಿಯಪ್ಪಗೆ ಅವಕಾಶ ತಪ್ಪಿಸಲು ತಂತ್ರ: ಆದರೆ, ಕೆಲವು ನಾಯಕರ ಈ ಪ್ರಯತ್ನಕ್ಕೆ ಕೆಲವು ಮುಖಂಡರು ಆಕ್ಷೇಪ ವ್ಯಕ್ತಪಡಿಸುತ್ತಿದ್ದು, ಕೆ.ಎಚ್‌. ಮುನಿಯಪ್ಪ ಅವರನ್ನು ಕೋಲಾರ ಕ್ಷೇತ್ರದಿಂದ ಹೊರ ಹಾಕಲು ಖರ್ಗೆಯವರ ಹೆಸರು ಬಳಕೆ ಮಾಡಿಕೊಳ್ಳಲಾಗುತ್ತಿದೆ. ಖರ್ಗೆಯವರು ಎರಡು ಕಡೆಯಲ್ಲಿ ಸ್ಪರ್ಧೆಮಾಡಿದರೆ, ತಪ್ಪು ಸಂದೇಶ ರವಾನೆಯಾಗುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಚುನಾವಣಾ ಸಮಿತಿ ಸಭೆಯಲ್ಲಿ ನಿರ್ಧಾರ

ಮಲ್ಲಿಕಾರ್ಜುನ ಖರ್ಗೆಯವರನ್ನು ಸೋಲಿಸಲು ಬಿಜೆಪಿ ರಾಷ್ಟ್ರೀಯ ನಾಯಕರು ನಡೆಸುತ್ತಿರುವ ಪ್ರಯತ್ನದ ಬಗ್ಗೆ ರಾಷ್ಟ್ರ ಮಟ್ಟದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ಈ ಬಗ್ಗೆ ಕಾಂಗ್ರೆಸ್‌ ಹೈ ಕಮಾಂಡ್‌ ನಾಯಕರು ಗಂಭೀರವಾಗಿ ಚಿಂತನೆ ನಡೆಸಿದ್ದಾರೆ ಎನ್ನಲಾಗಿದ್ದು, ಈ ಕುರಿತಂತೆ ಶನಿವಾರ ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್‌ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಆ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

 ಶಂಕರ ಪಾಗೋಜಿ

ಟಾಪ್ ನ್ಯೂಸ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

1

Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.