‘ಮೀನಿನ ಲಾರಿಗಳ ಗಲೀಜು ನೀರು ರಸ್ತೆಗೆ; ಶಾಶ್ವತ ಪರಿಹಾರಕ್ಕೆ ಕ್ರಮ`


Team Udayavani, Mar 16, 2019, 6:10 AM IST

16-march-7.jpg

ಮಹಾನಗರ : ಮೀನಿನ ಲಾರಿಗಳಿಂದ ರಸ್ತೆಯಲ್ಲಿ ನೀರು ಬಿದ್ದು ಸಮಸ್ಯೆ ಆಗುತ್ತಿರುವುದನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ಈ ಬಗ್ಗೆ ಶಾಶ್ವತ ಪರಿಹಾರ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಮಂಗಳೂರು ಪೊಲೀಸ್‌ ಕಮಿಷನರ್‌ ಸಂದೀಪ್‌ ಪಾಟೀಲ್‌ ತಿಳಿಸಿದ್ದಾರೆ. ಶುಕ್ರವಾರ ತಮ್ಮ ಕಚೇರಿಯಲ್ಲಿ ನಡೆದ ಫೋನ್‌ಇನ್‌ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಅಹವಾಲುಗಳಿಗೆ ಸ್ಪಂದಿಸಿ ಮಾತನಾಡಿದರು.

‘ನೋ ಸ್ಮಾಕಿಂಗ್‌’ ಬೋರ್ಡ್‌ ಬಹುತೇಕ ಎಲ್ಲ ಸಾರ್ವಜನಿಕ ಸ್ಥಳಗಳಲ್ಲಿ ಇದೆ. ಆದರೆ ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡಿದರೆ ದೂರು ಕೊಡ ಬೇಕಾದ ಫೋನ್‌ ನಂಬರ್‌ ಇಲ್ಲ. ಯಾರಿಗೆ ದೂರು ನೀಡಬೇಕು ? ಹೆಸರು, ಫೋನ್‌ ನಂಬರ್‌ ನೀಡಿದರೆ ಉತ್ತಮ ಎಂದು ನಾಗರಿಕರೊಬ್ಬರು ಸಲಹೆ ಮಾಡಿದರು.

2ನೇ ಟೋಯಿಂಗ್‌ವಾಹನ ಸೇರ್ಪಡೆ
ನೋ ಪಾರ್ಕಿಂಗ್‌ ಏರಿಯಾ ಮತ್ತು ಎಲ್ಲೆಂದರಲ್ಲಿ ನಿಲುಗಡೆ ಮಾಡುವ ವಾಹನಗಳನ್ನು ಮೇಲೆತ್ತಿ ಸಾಗಿಸಲು ಈಗಾಗಲೇ ಒಂದು ಟೋಯಿಂಗ್‌ ವಾಹನ ಇದ್ದು, ಒಂದು ವಾರದಲ್ಲಿ 41 ವಾಹನಗಳನ್ನು ಎತ್ತಂಗಡಿ ಮಾಡಲಾಗಿದೆ. ಇದೀಗ ಇನ್ನೊಂದು ವಾಹನ ಬಂದಿದೆ. ಅದು ಇಂದಿನಿಂದ ಕಾರ್ಯ ನಿರ್ವಹಿಸಲಿದೆ. ಇನ್ನೂ ಎರಡು ಟೋಯಿಂಗ್‌ ವಾಹನಗಳು ಬರಲಿವೆ ಎಂದು ಕಮಿಷನರ್‌ ಸಾರ್ವಜನಿಕರ ದೂರಿಗೆ ಉತ್ತರಿಸುತ್ತಾ ತಿಳಿಸಿದರು. 

3 ದಿನಗಳಲ್ಲಿ 103 ಕೇಸು
ವಾಹನಗಳ ಕರ್ಕಶ ಹಾರ್ನ್ ವಿರುದ್ಧ ಕಾರ್ಯಾಚರಣೆ ಮುಂದುವರಿಸಬೇಕು ಎಂದು ಸಾರ್ವಜನಿಕರೊಬ್ಬರು ಸಲಹೆ ನೀಡಿದರು. ಉತ್ತರಿಸಿದ ಸಂದೀಪ್‌ ಪಾಟೀಲ್‌, ಮೂರು ದಿನ ನಡೆಸಿದ ಕಾರ್ಯಾಚರಣೆಯಲ್ಲಿ 103 ವಾಹನಗಳ ವಿರುದ್ಧ ಕ್ರಮಕೈಗೊಳ್ಳಲಾಗಿದೆ. ಇದನ್ನು ಮುಂದುವರಿಸಲಾಗುವುದು ಎಂದರು. ಲಾರಿ, ಇತರ ಗೂಡ್ಸ್‌ ವಾಹನಗಳಲ್ಲಿ ಮರಳು ಮತ್ತು ಮಣ್ಣು ಸಾಗಿಸುವಾಗ ಮೇಲ್ಗಡೆ ಟರ್ಪಾಲಿನ್‌ ಮುಚ್ಚದೆ ಕಾರ್ಯಾಚರಣೆ ಮಾಡುತ್ತಿದ್ದ ಬಗ್ಗೆ ಕಳೆದ ವಾರದಲ್ಲಿ 41 ಪ್ರಕರಣ ದಾಖಲಿಸಲಾಗಿದೆ. ವಾಹನಗಳ ಮಾಲಕರನ್ನು ಕರೆಸಿ ತಿಳಿವಳಿಕೆ ನೀಡ ಲಾಗಿದೆ ಎಂದು ಕಮಿಷನರ್‌ ತಿಳಿಸಿದರು. 

ಇದು 109ನೇ ಫೋನ್‌ ಇನ್‌ ಕಾರ್ಯಕ್ರಮವಾಗಿದ್ದು, ಒಟ್ಟು 32 ಕರೆಗಳು ಬಂದವು. ಡಿಸಿಪಿಗಳಾದ ಹನುಮಂತರಾಯ, ಉಮಾ ಪ್ರಶಾಂತ್‌, ಎಸಿಪಿಗಳಾದ ಮಂಜುನಾಥ್‌ ಶೆಟ್ಟಿ , ವಿನಯ್‌ ಎ. ಗಾಂವ್‌ಕರ್‌, ಇನ್‌ಸ್ಪೆಕ್ಟರ್‌ ಗಳಾದ ಹರೀಶ್‌ ಕೆ. ಪಟೇಲ್‌, ಅಶೋಕ್‌ ಕುಮಾರ್‌, ಎಎಸ್‌ಐ ಯೋಗೇಶ್ವರನ್‌, ಹೆಡ್‌ಕಾನ್‌ಸ್ಟೆಬಲ್‌ ಪುರುಷೋತ್ತಮ, ಕೆನರಾ ಬಸ್‌ ಮಾಲಕರ ಸಂಘದ ಅಧ್ಯಕ್ಷ ರಾಜವರ್ಮ ಬಲ್ಲಾಳ್‌, ದ.ಕ. ಬಸ್‌ ಮಾಲಕರ ಸಂಘದ ಅಧ್ಯಕ್ಷ ದಿಲ್‌ರಾಜ್‌ ಆಳ್ವ ಉಪಸ್ಥಿತರಿದ್ದರು.

ಇತರ ದೂರುಗಳು 
 ಗುರುಪುರ ಕೈಕಂಬದಲ್ಲಿ ನೋ ಪಾರ್ಕಿಂಗ್‌ನಲ್ಲಿ ವಾಹನ ನಿಲ್ಲಿಸುತ್ತಾರೆ.
 ಬಜಪೆ ಪೇಟೆಯಲ್ಲಿ 2018ರಲ್ಲಿ 8 ಕಡೆ ರಸ್ತೆಯ ಝೀಬ್ರಾ ಕ್ರಾಸಿಂಗ್‌ಗೆ ಹಾಕಿದ್ದ ಬಣ್ಣ ಕಳಚಿ ಹೋಗಿದೆ.
 ದೇರಳಕಟ್ಟೆ ಸಮೀಪದ ಕುತ್ತಾರ್‌ ಪದವಿನ ಬಹು ಮಹಡಿ ಕಟ್ಟಡದ ಗಲೀಜು ನೀರನ್ನು ತರೆದ ಚರಂಡಿ, ರಸ್ತೆಗೆ ಬಿಡಲಾಗುತ್ತಿದೆ. 

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.