12 ಗಂಟೆ ತ್ರಿಫೇಸ್‌ ವಿದ್ಯುತ್‌ ನೀಡಿ

Team Udayavani, Mar 16, 2019, 7:38 AM IST

m2-12gante.jpg

ಎಚ್‌.ಡಿ.ಕೋಟೆ: ರೈತರ ಪಂಪ್‌ಸೆಟ್‌ಗಳಿಗೆ ತ್ರಿಫೇಸ್‌ ವಿದ್ಯುತ್‌ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ತಾಲೂಕು ರೈತ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದರು. ಪಟ್ಟಣದ ಸೆಸ್ಕ್ ಉಪವಿಭಾಗದ ಕಚೇರಿ ಎದುರು ಪ್ರತಿಭಟನೆ ನಡೆಸಿದ ನೂರಕ್ಕೂ ಹೆಚ್ಚು ರೈತರು, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ರೈತ ಮುಖಂಡರಾದ ಭೀಮನಹಳ್ಳಿ ಮಹದೇವು, ಹೂ. ಕೆ.ಮಹೇಂದ್ರ, ಪಳನಿಸ್ವಾಮಿ, ಗ್ರಾಮೀಣ ಪ್ರದೇಶದಲ್ಲಿ ಹಗಲಿನ ವೇಳೆ 12 ಗಂಟೆಗಳ ಕಾಲ ತ್ರಿಫೇಸ್‌ ವಿದ್ಯುತ್‌ ನೀಡಬೇಕು, ಮೂರ್‍ನಾಲ್ಕು ಪಂಪ್‌ಸೆಟ್‌ಗಳಿಗೆ ಒಂದು ವಿದ್ಯುತ್‌ ಪರಿವರ್ತಕ ಅಳವಡಿಸಬೇಕು, ಟೀಸಿಗಳು ಕೆಟ್ಟರೆ ಮೂರ್‍ನಾಲ್ಕು ದಿನದೊಳಗೆ ಸರಿಪಡಿಸಬೇಕು, ಕ್ಯಾತನಹಳ್ಳಿ, ಹಿರೇಹಳ್ಳಿ ಮತ್ತಿತರ ಗ್ರಾಮಗಳ ಮನೆಗಳ ಮೇಲೆ ಹಾಯ್ದು ಹೋಗಿರುವ ಹೈಟೆನ್ಶನ್‌ ವಿದ್ಯುತ್‌ ತಂತಿಗಳನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿದರು.

ನಿರಂತರ ಜ್ಯೋತಿ, ಭಾಗ್ಯ ಜ್ಯೋತಿಯಡಿ ಸಂಪರ್ಕ ಪಡೆದಿರುವ ಮನೆಗಳಿಗೆ ಸರಾಸರಿ ದರ ನಿಗದಿಪಡಿಸಬೇಕು. ಬೇಕಾಬಿಟ್ಟಿಯಾಗಿ ವಸೂಲಿ ಮಾಡುವುದನ್ನು ನಿಲ್ಲಿಸಬೇಕು. ಗ್ರಾಮಾಂತರ ಪ್ರದೇಶದಲ್ಲಿ ನಿಯೋಜಿಸಿರುವ ನೌಕರರು ತ್ವರಿತವಾಗಿ ಸಮಸ್ಯೆಗಳಿಗೆ ಸ್ಪಂದಿಸಬೇಕು. ಬೇಜವಾಬ್ದಾರಿ ತೋರುವ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಬೇಕು. ಕುರಿತು ಕ್ರಮ ಕೈಗೊಳ್ಳದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಮನವಿ ಪತ್ರ ಸ್ವೀಕರಿಸಿ ಮಾತನಾಡಿದ ಸೆಸ್ಕ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಮಹೇಶ್‌, ತಮ್ಮ ವ್ಯಾಪ್ತಿಯಲ್ಲಿ ಕೈಗೊಳ್ಳಬಹುದಾದ ಕ್ರಮಕೈಗೊಂಡು, ಶೀಘ್ರ ಸರ್ಕಾರದ ಗಮನಕ್ಕೆ ತರವುದಾಗಿ ತಿಳಿಸಿದರು.

ಪ್ರತಿಭಟನೆಯಲ್ಲಿ ರೈತ ಸಂಘದ ತಾಲೂಕು ಅಧ್ಯಕ್ಷ ಜಕ್ಕಳ್ಳಿ ರವಿಕುಮಾರ್‌, ಪ್ರಗತಿಪರ ರೈತರಾದ ಸಾಹಿತಿ ಕ್ಷೀರಸಾಗರ್‌, ಮುಖಂಡರಾದ ಜೆ.ಪಿ.ನಾಗರಾಜ್‌, ಬಸವರಾಜು, ಲಿಂಗಯ್ಯ, ಮಹದೇವನಾಯ್ಕ, ಪ್ರಸಾದ್‌, ಶಿವಲಿಂಗಪ್ಪ, ಹರೋಪುರ ಮಂಜುನಾಥ್‌, ಬೋರ್‌ವೆಲ್‌ ದಯಾನಂದ್‌, ಜೆ.ಪಿ.ಸಂತೋಷ್‌, ಮಲ್ಲಪ್ಪ, ದೇವರಾಜ್‌, ನೀಲಪ್ಪ, ಬೋಪ್ಪನಹಳ್ಳಿ ಶಿವಣ್ಣ ಇತರರು ಹಾಜರಿದ್ದರು.

ಟಾಪ್ ನ್ಯೂಸ್

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.