ನಕಲು ತಡೆಯಲು ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಿ: ಡಿಸಿ
Team Udayavani, Mar 16, 2019, 9:47 AM IST
ಬಳ್ಳಾರಿ: ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಮಾ.21 ರಿಂದ ಪ್ರಾರಂಭವಾಗಿ ಏ.4ರ ವರೆಗೆ ನಡೆಯಲಿದ್ದು, ಇದಕ್ಕೆ 16058 ಬಾಲಕರು ಹಾಗೂ 15096 ಬಾಲಕಿಯರು ಸೇರಿದಂತೆ ಒಟ್ಟು 31154 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ವಿದ್ಯಾರ್ಥಿಗಳು ಸುಸೂತ್ರವಾಗಿ ಪರೀಕ್ಷೆ ಬರೆಯುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ| ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ಮೂಲಕ ಪರೀಕ್ಷೆ ಮುಖ್ಯ ಅಧೀಕ್ಷಕರು, ತಹಶೀಲ್ದಾರರು, ಬಿಇಒ, ಉಪಖಜನಾಧಿಕಾರಿಗಳೊಂದಿಗೆ ಶುಕ್ರವಾರ ನಡೆಸಿದ ವೀಡಿಯೋ ಸಂವಾದದಲ್ಲಿ ಈ ಸೂಚನೆ ನೀಡಿದರು. ಪರೀಕ್ಷೆಗೆ ಸಂಬಂಧಿಸಿದಂತೆ ಜಿಲ್ಲಾಮಟ್ಟದ ವೀಕ್ಷಕರನ್ನು ನೇಮಿಸಲಾಗುತ್ತದೆ.
ನೇಮಕವಾದ ವೀಕ್ಷಕರು ಸರಿಯಾಗಿ ಕಾರ್ಯ ಪ್ರವೃತರಾಗಬೇಕು. ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಂತದಲ್ಲಿ ಸಂಚಾರಿ ಜಾಗೃತ ದಳವನ್ನು ಹಾಗೂ ಪರೀಕ್ಷಾ ಕೇಂದ್ರಗಳಿಗೆ ಸ್ಥಾನಿಕ ಜಾಗೃತ ದಳವನ್ನು ನೇಮಕ ಮಾಡಲಾಗಿದೆ. ಜಾಗೃತದಲ್ಲಿ ನೇಮಕವಾದವರು ಪರೀಕ್ಷಾ ಕೇಂದ್ರಗಳಿಗೆ ಆಕಸ್ಮಿಕ ಭೇಟಿ ನೀಡಿ ಪರೀಕ್ಷೆಯಲ್ಲಿ ಅಕ್ರಮವಾಗದಂತೆ ಎಚ್ಚರ ವಹಿಸಬೇಕು ಎಂದು ಸೂಚಿಸಿದರು.
ಎಸ್ಸೆಸ್ಸೆಲ್ಸಿ ಪರೀಕ್ಷೆಯು ಮಾ. 21 ರಿಂದ ಏ.04 ರವರೆಗೆ ನಡೆಯಲಿದೆ. ಜಿಲ್ಲೆಯಲ್ಲಿ ಬಳ್ಳಾರಿ ಪೂರ್ವ -14, ಹಗರಿಬೊಮ್ಮನಹಳ್ಳಿ -09, ಹೊಸಪೇಟೆ-17, ಹಡಗಲಿ-10, ಕೂಡ್ಲಿಗಿ-15, ಸಂಡೂರು-07, ಸಿರುಗುಪ್ಪ-11 ಮತ್ತು ಕುರುಗೋಡು-22 ಒಟ್ಟು 99 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಯು ನಡೆಯಲಿವೆ. ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಆವರಣವನ್ನು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷೆ ವೇಳೆ 200 ಮೀಟರ್‌ರೊಳಗಿನ ಜೆರಾಕ್ಸ್ ಸೆಂಟರ್ ಮುಚ್ಚುವಂತೆ ಸೂಚಿಸಲಾಗಿದೆ ಎಂದರು.
ಮೊಬೈಲ್ ಫೋನ್, ಬ್ಲೂಟೂತ್, ಡಿವೈಸ್, ಪೇಜರ್, ವೈರ್‌ಲೆಸ್, ಕ್ಯಾಲ್ಕುಲೇಟರ್ ಇತರೆ ಮೊದಲಾದ ಎಲೆಕ್ಟ್ರಾನಿಕ್ ಉಪಕರಣಗಳನ್ನು ಕೇಂದ್ರದಲ್ಲಿ ಪರೀಕ್ಷಿಸಿ ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿ ಕೊರತೆ ಇದ್ದಲ್ಲಿ ಅಗತ್ಯ ಸಿದ್ದತೆ ಮಾಡಬೇಕೆಂದರು.
ಜಿಪಂ ಸಿಇಒ ಕೆ.ನಿತೀಶ್ ಇದೇ ಸಂದರ್ಭದಲ್ಲಿ ಕೆಲ ಸಲಹೆ ನೀಡಿದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಶ್ರೀಧರ್, ಖಜನಾಧಿಕಾರಿ ರವಿ, ತಹಶೀಲ್ದಾರರು ಸೇರಿದಂತೆ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ
Covid Scam: ನ್ಯಾ.ಡಿ.ಕುನ್ಹಾ ವರದಿ ವಿಪಕ್ಷಗಳ ಬೆದರಿಸುವ ತಂತ್ರ: ಬಿ.ವೈ.ವಿಜಯೇಂದ್ರ
Bellary: ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.