ಜಿಲ್ಲಾದ್ಯಂತ 30 ಸಾವಿರ ವಿಶೇಷ ಮತದಾರರು: ಡಿಸಿ
Team Udayavani, Mar 16, 2019, 10:29 AM IST
ಚಿತ್ರದುರ್ಗ: ಲೋಕಸಭಾ ಚುನಾವಣೆಗೆ ಪ್ರತಿಯೊಬ್ಬರು ಹಬ್ಬದ ರೀತಿಯಲ್ಲಿ ಭಾಗವಹಿಸಿ ತಮ್ಮ ಹಕ್ಕನ್ನು ಚಲಾಯಿಸಿ ಭವ್ಯ ಭಾರತ ನಿರ್ಮಾಣ ಮಾಡುವಂತೆ ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಹೇಳಿದರು.
ನಗರದ ಜಿಲ್ಲಾಪಂಚಾಯಿತಿ ಸಭಾಂಗಣದಲ್ಲಿ ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಅಂಗವಿಕಲರ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಸಾರ್ವತ್ರಿಕ ಲೋಕಸಭಾ ಚುನಾವಣೆ ಅಂಗವಾಗಿ ಅಂಗವಿಕಲರು ಮತ್ತು ವಿಶೇಷ ಮತದಾರರಿಗೆ ಶುಕ್ರವಾರ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಮತ್ತು ವಿದ್ಯುನ್ಮಾನ ಮತಯಂತ್ರ ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಾಮನ್ಯ ಜನರು ಚುನಾವಣೆಯಲ್ಲಿ ಯಾವುದೇ ತೊಂದರೆ ಇಲ್ಲದೆ ಭಾಗವಹಿಸಬೇಕು. ಜಿಲ್ಲಾದ್ಯಂತ 30 ಸಾವಿರ ವಿಶೇಷ ಮತದಾರರಿದ್ದು ಅದರಲ್ಲಿ 15 ಸಾವಿರ ಜನರನ್ನು ಗುರುತಿಸಿ ಮತದಾನಕ್ಕೆ ಒಳಪಡಿಸಿದ್ದೇವೆ. 18 ವರ್ಷ ಮೇಲ್ಪಟ್ಟ ಎಲ್ಲರೂ ಮತದಾನದಲ್ಲಿ ಭಾಗವಹಿಸಬೇಕು. ಬೇರೆಯವರ ಸಹಕಾರವಿಲ್ಲದೆ ಮತದಾನ ಮಾಡಬೇಕು. ಅದಕ್ಕಾಗಿ ಕೇಲವು ಸ್ಥಳಗಳನ್ನು ಗುರುತಿಸಲಾಗಿದೆ ಎಂದರು.
ಅಂಗವಿಲಕರು ಇದ್ದು ಅಂತವರಿಗೆ ಮಾಹಿತಿ ನೀಡಿದರೆ ಅವರಿಗೆ ಮತದಾನ ಮಾಡಲು ವಾಹನಗಳ ವ್ಯವಸ್ಥೆ ಮಾಡಲಾಗುವುದು. ಚುನಾವಣಾ ಆಯೋಗಕ್ಕೆ ವಾಹನಗಳ ವ್ಯವಸ್ಥೆ ಮಾಡಲು ಪತ್ರ ಬರೆಯಲಾಗಿದೆ. ಆಶಾ ಕಾರ್ಯಕರ್ತರನ್ನು ಬಳಸಿಕೊಳ್ಳಲು ಯೋಚನೆ ಮಾಡುತ್ತಿದ್ದೇವೆ. ಕಣ್ಣಿನ ತೊಂದರೆ ಇರುವವರಿಗೆ ಆದಷ್ಟು ಸಹಾಯ ಮಾಡಲಾಗುತ್ತದೆ. ಗ್ರಾಮೀಣ ಭಾಗದ ಎಲ್ಲ ಜನರು ಮತದಾನ ಮಾಡಬೇಕು. ಕಳೆದ ಬಾರಿಗಿಂತ ಹೆಚ್ಚು ಮತ ಪ್ರಮಾಣ ಹೆಚ್ಚಿಸಬೇಕು. ಮತದಾನ ಪ್ರತಿಯೊಬ್ಬರ ಹಕ್ಕು
ಅದನ್ನು ಚಲಾಯಿಸಬೇಕು. ಅಂಗವಿಕಲರಿಗೆ ಬೇಕಾಗುವ ವ್ಯವಸ್ಥೆ ಮಾಡಲು ಮಾಹಿತಿ ನೀಡಬೇಕು ಎಂದು ಮನವಿ ಮಾಡಿದರು.
ಜಿಪಂ ಸಿಇಒ ಸಿ. ಸತ್ಯಭಾಮ ಮಾತನಾಡಿ, 2011ರ ಜನಗಣತಿ ಪ್ರಕಾರ 30 ಸಾವಿರಗಿಂತ ಹೆಚ್ಚು ವಿಶೇಷ ಮತರಾರರಿದ್ದಾರೆ. ಆದರೆ ಕೇವಲ 15, 436 ಜನರು ಮಾತ್ರ ಮತದಾನ ಪತ್ರದಲ್ಲಿ ಹೆಸರು ನೋಂದಣಿ ಮಾಡಿ ಕೊಂಡಿದ್ದಾರೆ. ಉಳಿದವರನ್ನು ಪತ್ತೆ ಮಾಡಲಾಗುತ್ತಿದೆ ಎಂದರು.
ಅಂಗವಿಕಲ ಇಲಾಖೆ, ಗ್ರಾಮ ಪಂಚಾಯತ್ ಸೇರಿದಂತೆ ಮತ್ತಿತರರು ತಮ್ಮ ವ್ಯಾಪ್ತಿಯಲ್ಲಿ ಬರುವಂತ ಅಂಗವಿಕಲರನ್ನು ಪತ್ತೆ ಹಚ್ಚುವ ಕಾರ್ಯ ಮಾಡಬೇಕು. ಬುದ್ಧಿಮಾಂದ್ಯರನ್ನು ಸಹ ಮತದಾನಕ್ಕೆ ಒಳಪಡಿಸಬೇಕು. ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಅಂಗವಿಕಲರನ್ನು ಹುಡಕಬೇಕು. ಒಬ್ಬ ಅಂಗವಿಕಲನು ಸಹ ಮತದಾನದಿಂದ ಹೊರ ಉಳಿಯಬಾರದು ಎಂಬ ಮೂಲ ಉದ್ದೇಶ ಚುನಾವಣಾ ಆಯೋಗದ ಧ್ಯೇಯವಾಗಿದೆ ಎಂದು. ಸಹಾಯಕರು ಸಹ ಒಂದ ಪಕ್ಷದ ಪರವಾಗಿ ಮತ ಹಾಕಲು ಪ್ರಚೋದನೆ ಮಾಡಬಾರದು.
ಆಸೆ-ಆಕಾಂಕ್ಷೆಗಳಿಗೆ ಒಳಗಾಗದೆ ಮತ ಚಲಾಯಿಸಬೇಕು. ಚುನಾವಣೆ ಸಮಯ ಹತ್ತಿರವಿದ್ದು, ಬಿಟ್ಟು ಹೋಗಿರುವವರನ್ನು
ಮತದಾರರ ಪಟ್ಟಿಯಲ್ಲಿ ಆದಷ್ಟು ಬೇಗ ಸೇರಿಸಲು ಶ್ರಮ ವಹಿಸಬೇಕು. ಪ್ರಜಾಪ್ರಭುತ್ವದಲ್ಲಿ ಅಂಗವಿಕಲರಿಗೆ ಹೆಚ್ಚಿನ ವ್ಯವಸ್ಥೆ ಮಾಡಿ ಮುನ್ನಲೆಗೆ ತರುವ ಕೆಲಸ ಮಾಡಲಾಗುತ್ತಿದೆ. ಹಿರಿಯ ನಾಗರಿಕರು ಮತ ಪರಿಶೀಲಿಸಿಕೊಳ್ಳಬೇಕು. 1950 ಉಚಿತ ಸಹಾಯವಾಣಿ ಮೂಲಕ ಮಾಹಿತಿ ಪಡೆಯಬಹುದು ಎಂದರು. ಜಿಲ್ಲಾ ಅಂಗವಿಕಲರ ಇಲಾಖೆಯ ಮತ್ತು ಸ್ವೀಪ್ ಸಮಿತಿ ನೋಡಲ್ ಅಧಿ ಕಾರಿ ಜೆ. ವೈಶಾಲಿ, ತಾಪಂ ಇಒ ಕೃಷ್ಣನಾಯ್ಕ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ
ತೋಟದ ಮನೆಗಳಿಗೆ ಹಗಲು ತ್ರಿಫೇಸ್, ರಾತ್ರಿ ಸಿಂಗಲ್ ಫೇಸ್ ವಿದ್ಯುತ್: ಸಚಿವ ಜಾರ್ಜ್
ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Election: ಆಪ್ ಸೋಲಿಸಲು ಬಿಜೆಪಿ ಜತೆ ಕಾಂಗ್ರೆಸ್ ಮೈತ್ರಿ: ಕೇಜ್ರಿವಾಲ್
ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ
Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.