ಕೆರೆ ತುಂಬಿಸದಿದ್ದರೆ ಜೈಲ್‌ ಭರೋ


Team Udayavani, Mar 16, 2019, 10:55 AM IST

16-march-19.jpg

ಬ್ಯಾಡಗಿ: ಆಣೂರು ಕೆರೆ ತುಂಬಿಸುವ ಯೋಜನೆಗೆ ಹಣ ಬಿಡುಗಡೆ ಮಾಡುವ ಮೂಲಕ ತಾಲೂಕಿನ 36 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಹಣ ಬಿಡುಗಡೆಗೊಳಿಸುವಂತೆ ಆಗ್ರಹಿಸಿ, ಪ್ರತಿಭಟನೆ ನಡೆಸಿದ ಆಣೂರು ಗ್ರಾಮಸ್ಥರು ಸಾಮೂಹಿಕವಾಗಿ ಮತದಾನ ಬಹಿಷ್ಕಾರಕ್ಕೆ ನಿರ್ಧರಿಸಿ ಶುಕ್ರವಾರ ತಹಶೀಲ್ದಾರ್‌ ಗುರು ಬಸವರಾಜ ಅವರಿಗೆ ಮನವಿ ಸಲ್ಲಿಸಿದರು.

ರೈತ ಮುಖಂಡ ಮಲ್ಲಿಕಾರ್ಜುನ ಬಳ್ಳಾರಿ ಮಾತನಾಡಿ, ಹಾವೇರಿಯಲ್ಲಿ ಗೊಬ್ಬರ ಕೇಳಿದವನ ಮೇಲೆ ಗುಂಡು ಹಾರಿಸಿದರು, ಇದೀಗ ನೀರು ಕೇಳಿದವರನ್ನು ಜೈಲಿಗಟ್ಟಿದರು. ಹಾಗಿದ್ದರೇ ರಾಜ್ಯದಲ್ಲಿ ನಡೆಯುತ್ತಿರುವುದು ಪ್ರಜಾಪ್ರಭುತ್ವ ತಳಹದಿ ಸರ್ಕಾರವೇ ಅಥವಾ ತುಘಲಕ್‌ ದರ್ಬಾರ್‌ ಎಂಬ ಅನುಮಾನ ಕಾಡುತ್ತಿವೆ. ಆಣೂರು ಕೆರೆಗೆ ನೀರು ಪೂರೈಸುವ ಯೋಜನೆಗೆ ಹಣ ನೀಡದಿದ್ದರೆ ಚುನಾವಣೆ ಬಹಿಷ್ಕಾರ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದರು.

ಮತದಾನ ನಮ್ಮ ಸಾಂವಿಧಾನಿಕಬದ್ಧ ಹಕ್ಕು. ಆದರೆ, ಎಲ್ಲ ಪಕ್ಷದಲ್ಲಿಯೂ ರೈತ ವಿರೋಧ ನಿಲುವುಗಳನ್ನೇ ತಳೆಯಲಾಗುತ್ತಿದೆ. ಇಂತಹ ಸಂದರ್ಭಗಳಲ್ಲಿ ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸಿದ ರೈತರ ವಿರುದ್ಧ ಪೊಲೀಸ್‌ ಕ್ರಮಕ್ಕೆ ಮುಂದಾಗುತ್ತಿರುವುದು ಎಷ್ಟರಮಟ್ಟಿಗೆ ಸರಿ? ಈ ಯೋಜನೆ ದೀರ್ಘಾವ ಧಿಯಾಗಿದ್ದರೂ ನೀರಿಗಾಗಿ ನಮ್ಮ ಹೋರಾಟ 40 ವರ್ಷಗಳಿಂದ ನಿರಂತರವಾಗಿ ನಡೆಯುತ್ತ ಬಂದಿದೆ. ಇಂತಹ ಸಂದರ್ಭದಲ್ಲಿ ಎದುರಾಗಿರುವ ಚುನಾವಣೆ ಯಾವ ಪುರುಷಾರ್ಥಕ್ಕೆ ಎಂದು ಪ್ರಶ್ನಿಸಿದ ಅವರು, ನೀರು ಕೊಡಿ ಮತ ಹಾಕುತ್ತೇವೆ ಎಂದರು.

ಬಸವರಾಜ ಹಲಗೇರಿ ಮಾತನಾಡಿ, ಸುಳ್ಳು ಹೇಳಿಕೊಂಡು ತಿರುಗಾಡುತ್ತಿರುವ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್‌ಅಹ್ಮದ್‌ ಕಳಂಕಿತ ಸಚಿವರಲ್ಲೊಬ್ಬರು. ಅವರ ವರ್ತನೆಯಿಂದ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲಿನ ನಂಬಿಕೆಯನ್ನು ರೈತರು ಕಳೆದುಕೊಳ್ಳುವಂತಾಗಿದೆ. ಈ ಯೋಜನೆಗೆ 212 ಕೋಟಿ ರೂ. ಬಿಡುಗಡೆಗೊಳಿಸಿರುವುದಾಗಿ ಸುಳ್ಳು ಹೇಳಿ ರೈತರಿಗೆ ಮೋಸವೆಸಗುತ್ತಿರುವ ಜಮೀರ್‌ ವಿರುದ್ಧ ಪೊಲೀಸ್‌ ಇಲಾಖೆ ವಂಚನೆ ಪ್ರಕರಣ ದಾಖಲಿಸಬೇಕು. ಕೂಡಲೇ ಇಂತಹ ಸುಳ್ಳು ಹೇಳಿಕೆ ನೀಡುವುದನ್ನು ಸಚಿವ ಜಮೀರ್‌ ನಿಲ್ಲಿಸಬೇಕು ಎಂದು ಆಕ್ರೋಶ ಹೊರಹಾಕಿದರು.

ಶಿವಯೋಗಿ ಶಿರೂರು ಮಾತನಾಡಿ, ಹಲವು ವರ್ಷಗಳಿಂದ ನ್ಯಾಯ ಸಮ್ಮತ ಮತ್ತು ಸಾಮೂಹಿಕ ಸಮಸ್ಯೆಗಳಿಗಷ್ಟೇ ಹೋರಾಟ ನಡೆಸುತ್ತ ಬಂದಿದ್ದೇವೆ. ಸಾವಿರಾರು ಪ್ರತಿಭಟನೆಗಳು ನಡೆದಿದ್ದರೂ ಎಲ್ಲಿಯೂ ಗುಂಡಾವರ್ತನೆ ಅಸಂಬದ್ಧ ನಡುವಳಿಕೆಗಳಿಂದ ವರ್ತಿಸಿದ ಉದಾಹರಣೆಗಳಿಲ್ಲ. ಜಿಲ್ಲಾ ಉಸ್ತುವಾರಿ ಸಚಿವ ಜಮೀರ್‌ಅಹ್ಮದ್‌ ಅವರ ಸುಳ್ಳು ಹೇಳಿಕೆಗಳ ವಿರುದ್ಧ ನಮ್ಮ ಹೋರಾಟ  ನಿರಂತರವಾಗಿರಲಿದೆ. ಈಗಿನ ಚುನಾವಣಾ ಬಹಿಷ್ಕಾರವೂ ಸಹ ಅದರ ವಿರುದ್ಧ ಮುಂದುವರೆದ ಭಾಗವಾಗಿದೆ. ಆಣೂರು ಕೆರೆ ತುಂಬಿಸುವ ವಿಚಾರದಲ್ಲಿ ಯಾರೇ ಮಾತನಾಡಿದರೂ ದಾಖಲೆಗಳ ಸಮೇತ ಹೇಳಿಕೆಗಳನ್ನು ನೀಡಬೇಕು. ಇಲ್ಲದೇ ಹೋದಲ್ಲಿ ರೈತರ ಪ್ರತಿರೋಧ ಎದುರಿಸಲು ಸಜ್ಜಾಗುವಂತೆ ಎಚ್ಚರಿಸಿದರು.

ಕರಬಸಪ್ಪ ಬಡ್ಡಿ, ಮಹದೇವಪ್ಪ ಶಿಡೇನೂರ, ಪ್ರವೀಣ ಹೊಸಗೌಡ್ರ, ಚಿದಾನಂದ ಬಡ್ಡಿಯವರ, ಸಂತೋಷ್‌, ಬಸಪ್ಪ ಎಲಿ, ಈಶ್ವರ ನೇಶ್ವಿ‌, ಸೋಮಪ್ಪ ಕಾಯಕದ, ಬಸಲಿಂಗಪ್ಪ ಬ್ಯಾಡಗಿ, ಮಲ್ಲಪ್ಪ ಕೊಪ್ಪದ, ಪ್ರಕಾಶ ಬಣಕಾರ, ರುದ್ರಪ್ಪ ಪೂಜಾರ, ಬಸವರಾಜ ಕುಡಪಲಿ, ಮಂಜು ಕೋಟಿ, ಗಾಣಿಗೇರ, ಕಾಂತೇಶಗೌಡ ಪಾಟೀಲ, ಮಂಜಪ್ಪ ರಿತ್ತಿ ಕರಬಸಪ್ಪ ಆಲದಕಟ್ಟಿ ಸೇರಿದಂತೆ ನೂರಾರು ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಅಸುಂಡಿ ಜಲಾನಯದ ಮೂಲ ನೀಲ ನಕ್ಷೆಯಂತೆ ತಾಲೂಕಿನ 36 ಕೆರೆಗಳನ್ನು ತುಂಬಿಸುವ ಆಣೂರು ಯೋಜನೆಗೆ ಶೀಘ್ರದಲ್ಲೇ ಹಣ ಬಿಡಗಡೆಗೆ ಸರ್ಕಾರ ನಿರ್ಧರಿಸದಿದ್ದರೆ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ತಾಲೂಕಿನ ಎಲ್ಲ ರೈತರು ಜೈಲ್‌ ಭರೋ ಹೋರಾಟ ನಡೆಸಲಿದ್ದಾರೆ.
ಕಿರಣ ಗಡಿಗೋಳ, ರೈತ ಮುಖಂಡ

ಟಾಪ್ ನ್ಯೂಸ್

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

Jarkahnad–CM-Soren

Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ನ.28ಕ್ಕೆ ಪದಗ್ರಹಣ

120

Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

Maharashtra Elections: 22 ಮಹಿಳೆ ಆಯ್ಕೆ, ವಿಪಕ್ಷದಿಂದ ಒಬ್ಬರೇ!

Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.