ಮಲ್ಲಿಕಾರ್ಜುನ ಖರ್ಗೆ ಸೋಲಿಸುವುದೇ ಗುರಿ
Team Udayavani, Mar 17, 2019, 1:26 AM IST
ಬಳ್ಳಾರಿ: ಪರಿಶಿಷ್ಟ ಜಾತಿಯಲ್ಲಿನ ಒಳಪಂಗಡಗಳಿಗೆ ಒಳಮೀಸಲಾತಿ ಕಲ್ಪಿಸುವ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಗೆ ವಿರೋಧ ವ್ಯಕ್ತಪಡಿಸುತ್ತಿರುವ ಸಂಸದ ಮಲ್ಲಿಕಾರ್ಜುನ ಖರ್ಗೆ ಸೇರಿ ಇತರ ಮುಖಂಡರನ್ನು ಈ ಬಾರಿಯ ಚುನಾವಣೆಯಲ್ಲಿ ಸೋಲಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಎಚ್.ಹನುಮಂತಪ್ಪ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದಲಿತ ಸಮುದಾಯದರಾಜಕಾರಣಿಗಳು ಮೊದಲಿನಿಂದಲೂ ಸದಾಶಿವ ಆಯೋಗದ ವರದಿಯನ್ನು ಶಿಫಾರಸು ಮಾಡಬಾರದೆಂಬ ಕುತಂತ್ರ ರಾಜಕಾರಣ ಮಾಡುತ್ತಾ ಬಂದಿದ್ದಾರೆ. ಹಾಗಾಗಿ, ಕಲಬುರಗಿ ಕೇÒತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸುವುದೇ ನಮ್ಮ ಪರಮ ಗುರಿಯಾಗಿದೆ. ಅಲ್ಲದೆ, ಆಯೋಗದ ವರದಿಗೆ ಅಡ್ಡಿಪಡಿಸುತ್ತಿದ್ದಾರೆ ಎನ್ನಲಾದ ಡಾ| ಜಿ.ಪರಮೇಶ್ವರ್, ಮಾಜಿ ಸಚಿವರಾದ ನರೇಂದ್ರಸ್ವಾಮಿ, ಎಚ್.ಸಿ.ಮಹಾದೇವಪ್ಪ, ಶಿವರಾಜ್ ತಂಗಡಗಿ, ಮಾನಪ್ಪ ವಜ್ಜಲ್, ಸಚಿವ ಪಿ.ಟಿ.ಪರಮೇಶ್ವರ ನಾಯ್ಕ, ಶಾಸಕ ರಾಜುಕುಡಚಿ ಸೇರಿ ಇನ್ನಿತರರಿಗೂ ಸರಿಯಾದ ಪಾಠ ಕಲಿಸಲು ಸ್ಪಷ್ಟ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.