ಉತ್ತರ ಕನ್ನಡದಲ್ಲಿ “ದೋಸ್ತಿ ಆಪತ್ತು’
Team Udayavani, Mar 17, 2019, 1:42 AM IST
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ರಾಜಕೀಯ ಚಿತ್ರಣ ಬದಲಾಗಿ ಸಂಸತ್ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟು ಕೊಟ್ಟಿರುವುದು ಬಿಜೆಪಿಗೆ ವರವಾಗಿ ಪರಿಣಮಿಸಿದೆ. ಮೊದಲಿನಿಂದಲೂ ಉತ್ತರ ಕನ್ನಡ ಕಾಂಗ್ರೆಸ್ ಭದ್ರಕೋಟೆಯಾಗಿತ್ತು. ಕೆಲವು ವಿಧಾನಸಭಾ ಕ್ಷೇತ್ರದಲ್ಲಿ ಪ್ರಜಾ ಸೋಷಲಿಸ್ಟ್ ಪಕ್ಷ, ಜನತಾ ಪಕ್ಷ, ಕ್ರಾಂತಿರಂಗ, ಜನತಾ ದಳ, ಪಕ್ಷೇತರರು ಗೆಲುವು ಸಾಧಿಸಿದ್ದನ್ನು ಬಿಟ್ಟರೆ ಬಹುತೇಕ ಕಾಂಗ್ರೆಸ್ ಗೆಲುವು ಸಾಧಿಸಿದ್ದೇ ಹೆಚ್ಚು. ಕಳೆದ ಮೂರು ದಶಕಗಳಿಂದ ಬಿಜೆಪಿ ಜಿಲ್ಲೆಯಲ್ಲಿ ನೆಲೆ ಕಂಡುಕೊಂಡಿದ್ದು ಗಟ್ಟಿಗೊಳ್ಳುತ್ತಲೇ ಹೋಗಿದೆ. ಸತತ ಐದು ಬಾರಿ ಸಂಸದರಾಗಿ ಆಯ್ಕೆಯಾಗುತ್ತಲೇ ಇರುವ ಅನಂತಕುಮಾರ ಹೆಗಡೆ ಅವರಿಗೆ ಈ ಬಾರಿ ಗೆಲುವನ್ನು “ಕಾಂಗ್ರೆಸ್-ಜೆಡಿಎಸ್ ದೋಸ್ತಿ’ ಬಕ್ಷಿಸು ಕೊಟ್ಟಂತಾಗಿದೆ.
ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಅನಂತಕುಮಾರ್ ಹೆಗಡೆಗೆ ಭಾರೀ ಪೈಪೋಟಿ ನೀಡಿದ್ದ ಪ್ರಶಾಂತ ದೇಶಪಾಂಡೆ ಕೊನೆಯ ಕ್ಷಣದಲ್ಲಿ ಮೋದಿ ಅಲೆಯಲ್ಲಿ ಸೋಲನುಭವಿಸಬೇಕಾಯಿತು. ಅಂದು ಹೆಗಡೆಗೆ ಮೋದಿ ಅಲೆ ಗೆಲುವು ತಂದುಕೊಟ್ಟಿದ್ದರೆ, ಇಂದು ಮೋದಿ ಅಲೆಗಿಂತಲೂ ಹೆಚ್ಚಿನ ಪ್ರಭಾವ ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ಹೊಂದಾಣಿಕೆಯಿಂದ ದೊರೆತಂತಾಗಿದೆ. ಈಗಾಗಲೇ ಕಾಂಗ್ರೆಸ್ ಸಂಸತ್ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟು ಕೊಟ್ಟಿರುವುದನ್ನು ಜೀರ್ಣಿಸಿಕೊಳ್ಳದ ಸ್ಥಿತಿಯಲ್ಲಿದೆ. ಎಲ್ಲ ಕಡೆಗಳಲ್ಲಿಯೂ ಅಸಮಾಧಾನ ಭುಗಿಲೆದ್ದಿದ್ದರೆ, ಈ ಹಿಂದೆ ಕಾಂಗ್ರೆಸ್ ಪಕ್ಷದಿಂದ ಗೆದ್ದು ಬಂದು ಪಕ್ಷಕ್ಕೆ ದ್ರೋಹ ಬಗೆದು ಕೇವಲ ಮೂರೇ ತಿಂಗಳಲ್ಲಿ ಮಂತ್ರಿಗಿರಿಯ ಆಸೆಗಾಗಿ ಬಿಜೆಪಿ ಸೇರಿದ್ದ ಆನಂದ ಅಸ್ನೋಟಿಕರ್ ಈಗ ಜೆಡಿಎಸ್
ಅಭ್ಯರ್ಥಿಯಾದರೆ ಅವರಿಗೆ ನಾವು ಮತ ಚಲಾಯಿಸುವುದ ಹೇಗೆ ಎನ್ನುವ ಪ್ರಶ್ನೆಯೂ ಎದುರಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.