ಎಲ್ಲೂರು ಗ್ರಾ.ಪಂ. ವ್ಯಾಪ್ತಿಯ ವಿವಿಧೆಡೆ ನೀರಿನ ತತ್ವಾರ

Team Udayavani, Mar 17, 2019, 4:28 AM IST

drinking.png

ಕಾಪು: ಎಲ್ಲೂರು ಗ್ರಾ.ಪಂ. ವ್ಯಾಪ್ತಿಯ ವಿವಿಧೆಡೆ ನೀರಿಗಾಗಿ ಪರದಾಟ ಆರಂಭವಾಗಿದೆ. ಗ್ರಾ.ಪಂ. ವ್ಯಾಪ್ತಿಯ ಎಲ್ಲೂರು, ಕುಂಜೂರು ಮತ್ತು ಕುಕ್ಕಿಕಟ್ಟೆ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಉಲ್ಬಣಗೊಂಡಿದೆ  

ಎರಡು ದಿನಕ್ಕೊಮ್ಮೆ ನೀರು ಪೂರೈಕೆ
ಎಲ್ಲೂರು ಗ್ರಾಮ ಪಂಚಾಯತ್‌ ವತಿಯಿಂದ ಸುಮಾರು 475 ಮನೆಗಳಿಗೆ ನಳ್ಳಿ ನೀರು ಪೂರೈಕೆಯಾಗುತ್ತಿದ್ದು, ಇದರಲ್ಲಿ ಎಲ್ಲೂರು, ಕುಂಜೂರು, ಕುಕ್ಕಿಕಟ್ಟೆಯ 300ಕ್ಕೂ ಅಧಿಕ ಮನೆಗಳಿಗೆ ಎರಡು ದಿನಕ್ಕೊಮ್ಮೆ ನೀರು ಬರುತ್ತಿದೆ.  
ಎಲ್ಲೆಲ್ಲಿ ನೀರಿನ ಸಮಸ್ಯೆ
ಎಲ್ಲೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಪ್ರತೀ ವರ್ಷ ಗ್ರಾ.ಪಂ. ಕಛೇರಿ ಬಳಿಯ ಆಶ್ರಯ ಕಾಲನಿ, ಎಲ್ಲೂರು ಪೆಜತ್ತಕಟ್ಟೆ, ಕಂಚುಗರ ಕೇರಿ, ಅದಮಾರು ಪರಿಶಿಷ್ಟ ಜಾತಿ ಕಾಲನಿ, ಅದಮಾರು ಭಂಡಸಾಲೆ, ಮಡಿವಾಳ ತೋಟ, ಕುಂಜೂರು ದುರ್ಗಾ ನಗರ, ಮಾಣಿಯೂರು ಮತ್ತು ಕುಕ್ಕಿಕಟ್ಟೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದೆ.
 ಎಲ್ಲೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯ ಪರಿಹಾರಕ್ಕೆ ಕಳೆದ ವರ್ಷ 13 ಲಕ್ಷ ರೂ. ವ್ಯಯಿಸಲಾಗಿದೆ. ಈ ವರ್ಷ 14 ಲಕ್ಷ ರೂ. ಅನುದಾನ ಕಾಯ್ದಿರಿಸಲಾಗಿದೆ. ನೀರಿನ ಶುಲ್ಕ ರೂಪದಲ್ಲಿ ಗ್ರಾಮಸ್ಥರಿಂದ 5.05 ಲಕ್ಷ ರೂ. ಸಂಗ್ರಹವಾಗುತ್ತಿದೆ. ಆದರೂ ಕೆಲವು ಪ್ರದೇಶಗಳಿಗೆ ನೀರು ಪೂರೈಕೆಯಾಗದೇ ಇರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ನೀರಿನ ಸಮಸ್ಯೆ ಪರಿಹರಿಸಲು ಸಮರ್ಪಕ ವ್ಯವಸ್ಥೆ
ಮಾಣಿಯೂರು, ಕುಕ್ಕಿಕಟ್ಟೆ ಮತ್ತು ಇರಂದಾಡಿಯಲ್ಲಿ ಖಾಸಗಿ ಮತ್ತು ಪಂಚಾಯತ್‌ ಅನುದಾನ ಬಳಸಿಕೊಂಡು 3 ಹೊಸ ಬೋರ್‌ವೆಲ್‌ಗ‌ಳನ್ನು ತೋಡಲಾಗಿದೆ. ಅದಮಾರು, ಎಲ್ಲೂರು ಮತ್ತು ಕುಂಜೂರಿನಲ್ಲಿ ಖಾಸಗಿ ಸಹಭಾಗಿತ‌Ìದೊಂದಿಗೆ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ತೆರೆಯಲಾಗಿದ್ದು, ಆ ಭಾಗದ ಗ್ರಾಮಸ್ಥರು ಕಾರ್ಡ್‌ ಮತ್ತು ಕಾಯಿನ್‌ ಮೂಲಕ ತಮಗೆ ಅಗತ್ಯವಿರುವಷ್ಟು ಕುಡಿಯುವ ನೀರನ್ನು ಪಡೆದುಕೊಳ್ಳಲು ವ್ಯವಸ್ಥೆ ಮಾಡಿಕೊಡಲಾಗಿದೆ ಎಂದು ಪಂಚಾಯತ್‌ ಅಧಿಕಾರಿಗಳು ತಿಳಿಸಿದ್ದಾರೆ.

ಕಾರಣವೇನು ?
ಅಂತರ್ಜಲ ಕುಸಿತವಾಗಿರುವುದು, ಬೋರ್‌ವೆಲ್‌ಗ‌ಳು ಸಮರ್ಪಕವಾಗಿ ಕಾರ್ಯ ನಿರ್ವಹಿಸದೇ ಇರುವುದು, ನೀರಿನ ಲಭ್ಯತೆ ಕಡಿಮೆಯಾಗಿರುವುದು, ಲೋ ವೋಲ್ಟೆàಜ್‌ ಸಮಸ್ಯೆಯಿಂದಾಗಿ ನೀರಿನ ಸಮಸ್ಯೆ ಬಿಗಡಾಯಿಸಿದೆ. 

ಅಗತ್ಯ ಬಿದ್ದರೆ ಟ್ಯಾಂಕರ್‌ ನೀರು
ಮೂರು ವಾರ್ಡ್‌ಗಳಲ್ಲಿ ನೀರಿನ ತತ್ವಾರ ಎದುರಾಗಿರುವುದು ನಮ್ಮ ಗಮನಕ್ಕೆ ಬಂದಿದೆ. ಅಲ್ಲಿನ ಸಮಸ್ಯೆ ಪರಿಹಾರಕ್ಕೆ ತುರ್ತಾಗಿ ಸ್ಪಂದಿಸಲು ಪ್ರಯತ್ನಿಸಲಾಗುತ್ತಿದೆ. ಅದಮಾರು ಮಡಿವಾಳ ತೋಟದ ನೀರಿನ ಸಮಸ್ಯೆ ನಿವಾರಣೆಗೆ ಟಾಸ್ಕ್ಪೋರ್ಸ್‌ನಡಿ ಅನುದಾನ ಒದಗಿಸುವಂತೆ ಶಾಸಕರಿಗೆ ಮನವಿ ಮಾಡಲಾಗಿದೆ. ಅಗತ್ಯ ಬಿದ್ದರೆ ಟ್ಯಾಂಕರ್‌ ಮೂಲಕ ನೀರು ಪೂರೈಸಲು ಯೋಜನೆ ರೂಪಿಸಲಾಗಿದೆ. 
ಮಮತಾ ಶೆಟ್ಟಿ, ಪಿ.ಡಿ.ಒ. ಎಲ್ಲೂರು ಗ್ರಾಮ ಪಂಚಾಯತ್‌

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಸಂಭ್ರಮದ ವೈಕುಂಠ ಏಕಾದಶಿ

ಕರಾವಳಿಯ ವಿವಿಧೆಡೆ ಸಂಭ್ರಮದ ವೈಕುಂಠ ಏಕಾದಶಿ

Mangaluru: ಡೊಂಗರಕೇರಿ ಶ್ರೀ ವೆಂಕಟರಮಣ ದೇಗುಲ: ಪುಷ್ಪಯಾಗ, ಅಷ್ಟಾವಧಾನ ಸೇವೆ ಸಂಪನ್ನ

Mangaluru: ಡೊಂಗರಕೇರಿ ಶ್ರೀ ವೆಂಕಟರಮಣ ದೇಗುಲ: ಪುಷ್ಪಯಾಗ, ಅಷ್ಟಾವಧಾನ ಸೇವೆ ಸಂಪನ್ನ

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು

Fraud Case ಹಣ ದ್ವಿಗುಣ ಮೆಸೇಜ್‌: 7.76 ಲಕ್ಷ ರೂ.ವಂಚನೆ

Fraud Case ಹಣ ದ್ವಿಗುಣ ಮೆಸೇಜ್‌: 7.76 ಲಕ್ಷ ರೂ.ವಂಚನೆ

Ashwin Vaishnav

Railway; 2 ವರ್ಷದಲ್ಲಿ 50 ಅಮೃತ್‌ ಭಾರತ ರೈಲು ಉತ್ಪಾದನೆ: ಅಶ್ವಿ‌ನಿ ವೈಷ್ಣವ್‌

Fraud Case: ವೈದ್ಯಕೀಯ ಸೀಟ್‌ ಕೊಡಿಸುವುದಾಗಿ ನಂಬಿಸಿ ವಂಚನೆ

Fraud Case: ವೈದ್ಯಕೀಯ ಸೀಟ್‌ ಕೊಡಿಸುವುದಾಗಿ ನಂಬಿಸಿ ವಂಚನೆ

Mangaluru: ಶ್ರೀ ಸುಧೀಂದ್ರ ಸ್ಮರಣ ಗುರು ವಂದನ ಕಾರ್ಯಕ್ರಮ, ಭಾವಚಿತ್ರ ಪಲ್ಲಕಿ ಉತ್ಸವ

Mangaluru: ಶ್ರೀ ಸುಧೀಂದ್ರ ಸ್ಮರಣ ಗುರು ವಂದನ ಕಾರ್ಯಕ್ರಮ, ಭಾವಚಿತ್ರ ಪಲ್ಲಕಿ ಉತ್ಸವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud Case: ವೈದ್ಯಕೀಯ ಸೀಟ್‌ ಕೊಡಿಸುವುದಾಗಿ ನಂಬಿಸಿ ವಂಚನೆ

Fraud Case: ವೈದ್ಯಕೀಯ ಸೀಟ್‌ ಕೊಡಿಸುವುದಾಗಿ ನಂಬಿಸಿ ವಂಚನೆ

11

Manipal: ಡಂಪಿಂಗ್‌ ಯಾರ್ಡ್‌ ಆದ ಮಣ್ಣಪಳ್ಳ!

10

Udupi: ಒಂದೇ ವೃತ್ತ; ಪೊಲೀಸ್‌ ಚೌಕಿ 5!; ಕಲ್ಸಂಕ ಜಂಕ್ಷನ್‌ನಲ್ಲಿ ಮುಗಿಯದ ಸಂಚಾರ ಸಮಸ್ಯೆ

7

Karkala: ಶಿರ್ಲಾಲು ಪರಿಸರದಲ್ಲಿ ಒಂದೇ ಟವರ್‌; ಮಾತನಾಡಲು ಮುಖ್ಯ ರಸ್ತೆಗೇ ಬರಬೇಕು!

12-protest

Trasi: ಸಾಂಪ್ರದಾಯಿಕ ‌ಮೀನುಗಾರರಿಂದ ಬೃಹತ್ ಪ್ರತಿಭಟನೆ; ಗಂಟಿಹೊಳೆ,‌ ಗೋಪಾಲ ಪೂಜಾರಿ ಭಾಗಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಸಂಭ್ರಮದ ವೈಕುಂಠ ಏಕಾದಶಿ

ಕರಾವಳಿಯ ವಿವಿಧೆಡೆ ಸಂಭ್ರಮದ ವೈಕುಂಠ ಏಕಾದಶಿ

Mangaluru: ಡೊಂಗರಕೇರಿ ಶ್ರೀ ವೆಂಕಟರಮಣ ದೇಗುಲ: ಪುಷ್ಪಯಾಗ, ಅಷ್ಟಾವಧಾನ ಸೇವೆ ಸಂಪನ್ನ

Mangaluru: ಡೊಂಗರಕೇರಿ ಶ್ರೀ ವೆಂಕಟರಮಣ ದೇಗುಲ: ಪುಷ್ಪಯಾಗ, ಅಷ್ಟಾವಧಾನ ಸೇವೆ ಸಂಪನ್ನ

Kasaragod: ರೈಲು ಪ್ರಯಾಣಿಕನ ನಗದು, ಲ್ಯಾಪ್‌ಟಾಪ್‌ ಕಳವು

Kasaragod: ರೈಲು ಪ್ರಯಾಣಿಕನ ನಗದು, ಲ್ಯಾಪ್‌ಟಾಪ್‌ ಕಳವು

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು

Fraud Case ಹಣ ದ್ವಿಗುಣ ಮೆಸೇಜ್‌: 7.76 ಲಕ್ಷ ರೂ.ವಂಚನೆ

Fraud Case ಹಣ ದ್ವಿಗುಣ ಮೆಸೇಜ್‌: 7.76 ಲಕ್ಷ ರೂ.ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.