ಕಡ್ಡಾಯ ಮತದಾನಕ್ಕೆ ಬನ್ನೂರಿನಲ್ಲಿ ಜಾಗೃತಿ ಜಾಥಾ
Team Udayavani, Mar 17, 2019, 7:44 AM IST
ತಿ.ನರಸೀಪುರ: ತಾಲೂಕಿನ ಬನ್ನೂರು ಪಟ್ಟಣದಲ್ಲಿ ಕಡ್ಡಾಯ ಮತದಾನ ಮಾಡುವ ಬಗ್ಗೆ ಜಾಗೃತಿ ಮೂಡಿಸಲಾಯಿತು. ಸಾರ್ವಜನಿಕ ಆಸ್ಪತ್ರೆ ಮುಂಭಾಗದಿಂದ ವಿದ್ಯಾರ್ಥಿಗಳು ಜಾಗೃತಿ ಜಾಥಾ ನಡೆಸಿ, ಮತದಾನ ಮಹತ್ವದ ಕುರಿತು ಭಿತ್ತಿಪತ್ರಗಳ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.
ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ತಾಲೂಕು ಪಂಚಾಯ್ತಿ ಕಾರ್ಯನಿರ್ವಹಕ ಅಧಿಕಾರಿ ಡಾ. ನಂಜೇಶ್, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ಹಬ್ಬದಂತಾಗಬೇಕು. ಕುಟುಂಬ ಸಮೇತ ಮತಗಟ್ಟೆಗೆ ಬಂದು ಕಡ್ಡಾಯವಾಗಿ ಮತ ಚಲಾಯಿಸಬೇಕು. ಯಾರೊಬ್ಬರೂ ಕೂಡ ಮತದಾನದಿಂದ ವಂಚಿತರಾಗಬಾರದು. ಚುನಾವಣೆಯಲ್ಲಿ ಪಕ್ಷ, ವ್ಯಕ್ತಿ ಅನ್ನುವುದಲ್ಲ ಮುಖ್ಯವಲ್ಲ.
ಮತದಾನ ನಮ್ಮ ಹಕ್ಕು ಎಂಬುದನ್ನು ಯಾರು ಮರೆಯಬಾರದು ಎಂದು ತಿಳಿಸಿದರು. ಉತ್ತಮ ಸಮಾಜಕ್ಕಾಗಿ ಯೋಗ್ಯ ಅಭ್ಯರ್ಥಿಯನ್ನು ಆರಿಸಬೇಕು. ಯಾವುದೇ ಆಸೆ, ಆಮಿಷಗಳಿಗೆ ಒಳಗಾಗಬಾರದು. ಪ್ರಾಮಾಣಿಕ ಹಾಗೂ ಪಾರದರ್ಶಕವಾಗಿ ಮತ ಚಲಾಯಿಸಬೇಕು. ಪ್ರಜಾಪ್ರಭುತ್ವ ಬಲಪಡಿಸಲು ಮತದಾನ ಅತ್ಯುತ್ತಮ ಅವಕಾಶವಾಗಿದೆ.
8 ವರ್ಷ ಪೂರ್ಣಗೊಂಡವರು ಮತದಾರರ ಪಟ್ಟಿಯಲ್ಲಿ ಹೆಸರನ್ನು ನೋಂದಾಯಿಸಿಕೊಂಡಿರುವ ಪ್ರತಿಯೊಬ್ಬರೂ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು. ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಸ್ವಾಮಿ, ಸಿಡಿಪಿಓ ಬಸವರಾಜು ಮಾತನಾಡಿದರು. ನರೇಗಾ ಸಹಾಯಕ ನಿರ್ದೇಶಕ ನಿಂಗಯ್ಯ, ಬಿಆರ್‌ಸಿ ಶಂಕರ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.