ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆ ಬಗೆಹರಿಸಲು ಆಗ್ರಹ
Team Udayavani, Mar 17, 2019, 11:01 AM IST
ಬೀದರ: ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸ್ಥಳೀಯ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಅಂಗನವಾಡಿ ಸಿಬ್ಬಂದಿಗೆ ಐದು ತಿಂಗಳಿಂದ ಗೌರವ ಧನ ಪಾವತಿಯಾಗಿಲ್ಲ. ಕೂಡಲೆ ಗೌರವ ಧನ ನೀಡಬೇಕು. ಗುಣಮಟ್ಟದ ಆಹಾರ ಪದಾರ್ಥ, ಸಾಮಗ್ರಿಗಳನ್ನು ಸರಿಯಾದ ಸಮಯಕ್ಕೆ ಸರಬರಾಜು ಮಾಡಬೇಕು. ಅಂಗನವಾಡಿ ಕೇಂದ್ರಗಳ ಬಾಡಿಗೆ ಕಳೆದ ವರ್ಷ ಏಪ್ರಿಲ್ ತಿಂಗಳಿಂದ ಬಾಕಿ ಇದ್ದು, ಕೂಡಲೆ ಬಾಡಿಗೆ ಪಾವತಿ ಮಾಡಬೇಕು. ಅಂಗನವಾಡಿ ಸಿಬ್ಬಂದಿಗೆ ಇತರೆ ಇಲಾಖೆಗಳ ಕೆಲಸ ನೀಡಬಾರದು.
ನಿವೃತ್ತರಾದ ಕಾರ್ಯಕರ್ತೆಯರಿಗೆ ಕೂಡಲೆ ಹಣ ಬಿಡುಗಡೆ ಮಾಡಬೇಕು. ಅಮಾನತುಗೊಳಿಸಿದ ಕಾರ್ಯಕರ್ತೆಯರನ್ನು ಮರಳಿ ಕೆಲಸಕ್ಕೆ ನೇಮಿಸಿಕೊಳ್ಳಬೇಕು. ಮಾತೃಪೂರ್ಣ ಯೋಜನೆಯಡಿ ಅಡುಗೆ ಪಾತ್ರೆಗಳು, ಪೂರ್ಣ ಪ್ರಮಾಣದ ಆಹಾರ, ತರಕಾರಿ ಮತ್ತು ಇತರೆ ಸಾಮಗ್ರಿಗಳನ್ನು ಮುಂಗಡವಾಗಿ ಕೂಡಬೇಕು. ವರ್ಷಕ್ಕೆ 8 ಸಿಲಿಂಡರ್ ನೀಡಬೇಕು ಎಂಬ ನಿಯಮ ಇದ್ದರೂ ಸಿಲಿಂಡರ್ ಸಿಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ವಿವಿಧ ಬೇಡಿಕೆಗಳಿಗೆ ಸೂಕ್ತ ಪರಿಹಾರ ಒದಗಿಸುವಂತೆ ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್
Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ
Mangaluru: ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.