ಚುನಾವಣೆ: ಪೊಲೀಸರಿಂದ ರೌಡಿಗಳ ಪರೇಡ್
Team Udayavani, Mar 18, 2019, 6:35 AM IST
ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರೌಡಿಗಳು, ವಾರೆಂಟ್ ಜಾರಿಯಾಗಿರುವ ಆರೋಪಿಗಳು, ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿಗಳು ಸೇರಿ 800ಕ್ಕೂ ಹೆಚ್ಚು ಮಂದಿಯ ಮನೆಗಳ ಮೇಲೆ ಉತ್ತರ ವಿಭಾಗದ ಪೊಲೀಸರು ಭಾನುವಾರ ನಸುಕಿನಲ್ಲಿ ದಾಳಿ ನಡೆಸಿದರು.
ಉತ್ತರ ವಿಭಾಗದ ಡಿಸಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ ಯಶವಂತಪುರ, ಜಾಲಹಳ್ಳಿ, ಮಲ್ಲೇಶ್ವರ, ಶ್ರೀರಾಮಪುರ, ಆರ್‌ಎಂಸಿ ಯಾರ್ಡ್, ಪೀಣ್ಯ, ಗಂಗಮ್ಮನಗುಡಿ, ಹೆಬ್ಟಾಳ, ವಿದ್ಯಾರಣ್ಯಪುರ, ರಾಜಾಜಿನಗರ, ಸುಬ್ರಹ್ಮಣ್ಯಪುರ ಸೇರಿ ಉತ್ತರ ವಿಭಾಗದ 18 ಠಾಣೆಗಳ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ 11 ಗಂಟೆಯಿಂದ ಭಾನುವಾರ ಮುಂಜಾನೆ ಐದು ಗಂಟೆವರೆಗೂ ಎಲ್ಲ ರೌಡಿಗಳ ಮನೆಗಳ ಮೇಲೆ ದಾಳಿ ನಡೆಸಲಾಯಿತು. ಬಳಿಕ ಜಾಲಹಳ್ಳಿ ಠಾಣಾ ವ್ಯಾಪ್ತಿಯ ಬಿಇಎಲ್ ಮೈದಾನದಲ್ಲಿ ಎಲ್ಲ ರೌಡಿಗಳ ಪರೇಡ್ ನಡೆಸಲಾಯಿತು.
ಈ ವೇಳೆ ಮುಂಬರುವ ಚುನಾವಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಯಲ್ಲಿ ತೊಡಗಬಾರದು. ಮತದಾರರಿಗೆ ಬೆದರಿಕೆ ಹಾಕುವುದು, ಮತದಾನದ ದಿನ ಮತದಾರರ ಮೇಲೆ ದಬ್ಟಾಳಿಕೆ ನಡೆಸುವುದು, ಅಕ್ರಮ ಕೃತ್ಯಗಳಲ್ಲಿ ತೊಡಗಿದರೆ ಕಠಿಣ ಕಾನೂನು ಕ್ರಮಕೈಗೊಳ್ಳಬೇಕಾಗುತ್ತದೆ ಎಂದು ಶಶಿಕುಮಾರ್ ಎಚ್ಚರಿಕೆ ನೀಡಿದರು. ಬಳಿಕ ಮುಚ್ಚಳಿಕೆ ಪತ್ರ ಬರೆಸಿಕೊಳ್ಳಲಾಯಿತು.
ಅಲ್ಲದೆ, ಪರೇಡ್‌ನಲ್ಲಿ ಭಾಗಿಯಾದ ಎಲ್ಲ ಆರೋಪಿಗಳ ಮೊಬೈಲ್ ನಂಬರ್, ವಿಳಾಸ, ಸಂಬಂಧಿಕರ ವಿವರ ಹಾಗೂ ಇತರೆ ಮಾಹಿತಿಗಳನ್ನು ಪಡೆದುಕೊಳ್ಳಲಾಯಿತು. ಒಂದು ವೇಳೆ ಚುನಾವಣೆ ವೇಳೆ ಕಾನೂನು ಬಾಹಿರ ಕೃತ್ಯಗಳಲ್ಲಿ ತೊಡಗಿದರೆ, ಜಾಮೀನು ರಹಿತ ವಾರೆಂಟ್‌ನಡಿ ಬಂಧಿಸುವುದಲ್ಲದೆ, ಗೂಂಡಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಬೇಕಾಗುತ್ತದೆ.
ಇದೇ ವೇಳೆ ರೌಡಿಗಳ ಉದ್ದುದ್ದ ಗಡ್ಡ, ಮೀಸೆ, ಕೂದಲಿಗೆ ಸ್ಥಳದಲ್ಲಿ ಕತ್ತರಿ ಹಾಕಲಾಯಿತು. ಅಕ್ರಮ ಚಟುವಟಿಕೆಗಳಲ್ಲಿ ತೊಡಗದೆ ಉತ್ತಮ ಜೀವನ ನಡೆಸುತ್ತಿರುವ ರೌಡಿಗಳನ್ನು ರೌಡಿಪಟ್ಟಿಯಿಂದ ಕೈಬಿಡುವ ಕುರಿತು ಚಿಂತನೆ ನಡೆಸಲಾಗಿದೆ ಎಂದು ಡಿಸಿಪಿ ಎನ್.ಶಶಿಕುಮಾರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
Road Mishap: 2 ಲಾರಿಗಳ ಮಧ್ಯೆ ಸಿಲುಕಿ ಚಾಲಕ ಸಾವು; ಕೇಸ್
Fraud Case: ಟೆಕಿಗೆ ವಂಚನೆ ಕೇಸ್; ಆರೋಪಿ ಪತ್ತೆಗೆ ತಂಡ ರಚನೆ
New Year: ಹೊಸ ವರ್ಷಾಚರಣೆಗೆ 7ಲಕ್ಷ ಜನ ಭಾಗಿ ನಿರೀಕ್ಷೆ; ಪರಂ
Fraud case: ಚಿನ್ನಾಭರಣ ವಂಚನೆ ಕೇಸ್; ವಿಚಾರಣೆಗೆ ಬಾರದ ವರ್ತೂರ್‌ಗೆ 3ನೇ ನೋಟಿಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jasprit Bumrah ಬೌಲಿಂಗ್ ಶೈಲಿಯನ್ನೇ ಶಂಕಿಸಿದ ಆಸೀಸ್ ಮಾಧ್ಯಮಗಳು!
Mangaluru: ಎರಡು ಸೈಬರ್ ವಂಚನೆ ಪ್ರಕರಣ: ಸೆನ್ ಪೊಲೀಸರಿಂದ ಇಬ್ಬರ ಬಂಧನ
High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್
Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ
Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್.ಷಡಾಕ್ಷರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.