ಪರ್ವೇಜ್ ಮುಷರಫ್ ದುಬಾೖ ಆಸ್ಪತ್ರೆಗೆ ದಾಖಲು
Team Udayavani, Mar 19, 2019, 12:30 AM IST
ಇಸ್ಲಾಮಾಬಾದ್: ಪಾಕಿಸ್ಥಾನದ ಮಾಜಿ ಅಧ್ಯಕ್ಷ ಜ| ಪರ್ವೇಜ್ ಮುಷರಫ್ (75) ಅವರನ್ನು ದುಬಾೖನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ದೇಹದ ನರಗಳಿಗೆ ಸಂಬಂಧಿಸಿದಂತೆ ವಿಶೇಷ ಕಾಯಿಲೆ ಬಾಧಿಸತೊಡಗಿದೆ ಎಂದು ಅವರ ಆಪ್ತ ವಲಯ ತಿಳಿಸಿದೆ. ಶನಿ ವಾರ ಅವರ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದಂತೆಯೇ ಆಸ್ಪತ್ರೆ ತುರ್ತು ಚಿಕಿತ್ಸಾ ಘಟಕಕ್ಕೆ ದಾಖಲಿಸಲಾಗಿದೆ. ವೈದ್ಯರು ಹೇಳಿದ ಪ್ರಕಾರ ಮಾಜಿ ಅಧ್ಯಕ್ಷರಿಗೆ ಪೂರ್ಣ ಪ್ರಮಾಣದಲ್ಲಿ ವಿಶ್ರಾಂತಿ ಅಗತ್ಯವಾಗಿದೆ. 2016ರ ಮಾರ್ಚ್ನಿಂದ ಅವರು ದುಬಾೖನಲ್ಲಿ ವಾಸಿಸುತ್ತಿದ್ದಾರೆ. 2007ರಲ್ಲಿ ಸಂವಿಧಾನವನ್ನು ಬದಲು ಪ್ರಯತ್ನ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ದೇಶದ್ರೋಹದ ಆರೋಪ ಹೊರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Gudibanda: ಬಸ್ಗೆ ಟಿಪ್ಪರ್ ಡಿಕ್ಕಿ; ತಪ್ಪಿದ ಭಾರಿ ಅನಾಹುತ; ಇಬ್ಬರಿಗೆ ಗಾಯ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್ಎಸ್ಎಸ್ ಕಾರಣ: ಶರದ್ ಪವಾರ್
Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.