ಇಂದಿನಿಂದ ನಾಮಪತ್ರ ಸಲ್ಲಿಕೆ: ಕಾವೇರಲಿದೆ ಚುನಾವಣಾ ಕಣ


Team Udayavani, Mar 19, 2019, 1:00 AM IST

nomination.jpg

ಮಂಗಳೂರು/ಉಡುಪಿ: ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮಂಗಳವಾರ ಪ್ರಾರಂಭಗೊಳ್ಳಲಿದ್ದು, ಇದರೊಂದಿಗೆ ಚುನಾವಣಾ ಕಣ ಕಾವೇರಲಿದೆ. ಆದರೆ ಕರಾವಳಿಯಲ್ಲಿ ಪ್ರಮುಖ ಪಕ್ಷಗಳಾಗಿರುವ ಬಿಜೆಪಿ ಹಾಗೂ ಕಾಂಗ್ರೆಸ್‌ನಿಂದ ಅಭ್ಯರ್ಥಿಗಳ ಅಧಿಕೃತ ಘೋಷಣೆ ಇನ್ನೂ ಆಗಿಲ್ಲ. ಅವೆರಡರ ಅಭ್ಯರ್ಥಿಗಳ ಹೆಸರು ಪ್ರಕಟವಾಗುವುದರೊಂದಿಗೆ ಈ ಬಾರಿಯ ಲೋಕಸಭೆ ಚುನಾವಣಾ ಕಣ ರಂಗೇರಲಿದೆ.

ನಾಮಪತ್ರ ಸಲ್ಲಿಕೆಗೆ ಮಾ. 26 ಕೊನೆಯ ದಿನಾಂಕವಾಗಿದ್ದು ಮಾ. 27ರಂದು  ಪರಿಶೀಲನೆ ನಡೆಯಲಿದೆ. ಮಾ. 29 ನಾಮಪತ್ರ ಹಿಂದೆಗೆದುಕೊಳ್ಳಲು ಕೊನೆಯ ದಿನಾಂಕವಾಗಿದೆ.  ಎ. 18ರಂದು ಚುನಾವಣೆ, ಮೇ 23ರಂದು ಮತಎಣಿಕೆ ನಡೆಯಲಿದೆ. 

ನೀತಿ ಸಂಹಿತೆ ಬಿಸಿ
ಚುನಾವಣಾ ನೀತಿ ಸಂಹಿತೆ ಈಗಾಗಲೇ ಜಾರಿಯಲ್ಲಿದ್ದರೂ ಮಂಗಳವಾರದಿಂದ ಹೆಚ್ಚಿನ ತೀವ್ರತೆ ದೊರಕಲಿದೆ. ಸಮರ್ಪಕ ದಾಖಲೆಗಳಿಲ್ಲದೆ 50,000 ರೂ.ಗಿಂತ ಹೆಚ್ಚಿನ ನಗದು ಕೊಂಡೊಯ್ಯುವಂತಿಲ್ಲ. 10 ಲ.ರೂ.ಗಿಂತ ಹೆಚ್ಚಿನ ಮೊತ್ತ ಸಾಗಿಸಿದರೆ ಅದನ್ನು ಆದಾಯ ತೆರಿಗೆ ಅಧಿಕಾರಿಗಳು ತನಿಖೆ ನಡೆಸಲಿದ್ದಾರೆ.

ಜಾತ್ರೆ, ಯಕ್ಷಗಾನಕ್ಕೂ ನಿಯಮದ ಬಿಸಿ
ಚುನಾವಣೆ ಪ್ರಚಾರಕ್ಕೆ ಸಂಬಂಧಿಸಿ ಸಭೆ ಸಮಾರಂಭಗಳಿಗೆ ಅನುಮತಿ ಪಡೆಯಬೇಕು. ಧ್ವನಿವರ್ಧಕದ ಅನುಮತಿ
ಯನ್ನು ಪೊಲೀಸ್‌ ಇಲಾಖೆಯಿಂದ ಪಡೆಯಬೇಕು. ಧ್ವನಿವರ್ಧಕವನ್ನು ಬೆಳಗ್ಗೆ 6ರಿಂದ ರಾತ್ರಿ 10ರ ವರೆಗೆ ಮಾತ್ರ ಉಪಯೋಗಿಸಲು ಅವಕಾಶವಿದೆ. ಇದು ಯಕ್ಷಗಾನಕ್ಕೂ ಅನ್ವಯವಾಗುತ್ತದೆ. ಜಾತ್ರೆಗೆ ಚುನಾವಣಾಧಿಕಾರಿಗಳ ಅನುಮತಿ ಅಗತ್ಯವಾಗಿದೆ.

ಮಂಗಳೂರಿಗೆ ಸಿಎಪಿಎಫ್‌ ಪಡೆ
ಚುನಾವಣೆ ಪ್ರಯುಕ್ತ ಕಾನೂನು ಸುವ್ಯವಸ್ಥೆ ಕಾಪಾಡಲು ಮಂಗಳೂರು ಪೊಲೀಸ್‌ ಕಮಿಷನರೆಟ್‌ಗೆ ಕೇಂದ್ರೀಯ
ಸಶಸ್ತ್ರ ಪೊಲೀಸ್‌ ಪಡೆಯ (ಸಿಎಪಿಎಫ್‌) 91 ಮಂದಿ ಮಹಿಳಾ ಜವಾನರು ಆಗಮಿಸಿದ್ದು, ಕರ್ತವ್ಯದಲ್ಲಿ ನಿರತರಾಗಿದ್ದಾರೆ. ಮಹಿಳಾ ಜವಾನರು ಕಳೆದ ನಾಲ್ಕು ದಿನಗಳಿಂದ ಮಂಗಳೂರಿನ ವಿವಿಧ ಭಾಗಗಳಲ್ಲಿ ಪಥಸಂಚಲನ ನಡೆಸಿದ್ದಾರೆ.

ನಾಮಪತ್ರ ಸಲ್ಲಿಕೆ ಮಾ. 19ರಂದು ಆರಂಭವಾಗಲಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಜವಾನರು ಮತ್ತು ಪೊಲೀಸರು ಮಂಗಳೂರಿಗೆ ಆಗಮಿಸಲಿದ್ದಾರೆ ಎಂದು ಪೊಲೀಸ್‌ ಕಮಿಷನರ್‌ ಸಂದೀಪ್‌ ಪಾಟೀಲ್‌ ತಿಳಿಸಿದ್ದಾರೆ.

ಐದು ಮಂದಿಗೆ ಮಾತ್ರ ಅವಕಾಶ
ನಾಮಪತ್ರ ಸಲ್ಲಿಕೆ ವೇಳೆ ಅಭ್ಯರ್ಥಿ ಅಥವಾ ಸೂಚಕರು ಸೇರಿ ಒಟ್ಟು ಐವರು  ಉಪಸ್ಥಿತರಿರಬಹುದು. ಮಾಧ್ಯಮ ಪ್ರತಿನಿಧಿಗಳಿಗಳಿಗೆ ನಾಮಪತ್ರ ಸಲ್ಲಿಕೆಯ ವೀಡಿಯೋ ಹಾಗೂ ಛಾಯಾಚಿತ್ರಗಳನ್ನು ಜಿಲ್ಲಾ ಚುನಾವಣಾ ಶಾಖೆಯಿಂದಲೇ ಒದಗಿಸಿಕೊಡಲಾಗುವುದು ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.