ರಫೇಲ್ ತನಿಖೆಯಾದರೆ ಪ್ರಧಾನಿ, ಅಂಬಾನಿ ಜೈಲಿಗೆ
Team Udayavani, Mar 19, 2019, 6:29 AM IST
ಬೆಂಗಳೂರು: ರಫೇಲ್ ಹಗರಣದ ಬಗ್ಗೆ ಸೂಕ್ತ ತನಿಖೆಯಾದರೆ, ಪ್ರಧಾನಿ ನರೇಂದ್ರ ಮೋದಿ ಹಾಗೂ ರಿಲಯನ್ಸ್ ಕಂಪನಿ ಮುಖ್ಯಸ್ಥ ಅನಿಲ್ ಅಂಬಾನಿ ಜೈಲಿಗೆ ಹೋಗಬೇಕಾಗುತ್ತದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ನಗರದ ಮಾನ್ಯತಾ ಟೆಕ್ ಪಾರ್ಕ್‌ನಲ್ಲಿ ಸೋಮವಾರ ನಡೆದ ನವೋದ್ಯಮಿಳಗೊಂದಿಗಿನ ಸಂವಾದದಲ್ಲಿ ಮಾತನಾಡಿದ ರಾಹುಲ್, ರಫೇಲ್ ಯುದ್ಧ ವಿಮಾನ ಖರೀದಿ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ಕಚೇರಿ ನೇರವಾಗಿ ಫ್ರಾನ್ಸ್ ಸರ್ಕಾರದೊಂದಿಗೆ ಪರ್ಯಾಯ ಮಾತುಕತೆ ನಡೆಸಿರುವುದು ಬಹಿರಂಗಗೊಂಡಿದೆ.
ಪ್ರಧಾನಿ ನೇರವಾಗಿಯೇ ಅನಿಲ್ ಅಂಬಾನಿ ಪರವಾಗಿ ವ್ಯವಹಾರ ಮಾಡಿರುವುದರಿಂದ ಈ ಬಗ್ಗೆ ಸೂಕ್ತ ತನಿಖೆ ನಡೆದರೆ, ಅನಿಲ್ ಅಂಬಾನಿ ಹಾಗೂ ಪ್ರಧಾನಿ ಇಬ್ಬರೂ ಜೈಲಿಗೆ ಹೋಗಬೇಕಾಗುತ್ತದೆ. ಅದೇ ಕಾರಣಕ್ಕೆ ಪ್ರಧಾನಿ ನರೇಂದ್ರ ಮೋದಿ ರಫೆಲ್ ಹಗರಣದ ತನಿಖೆಗೆ ಹಿಂದೇಟು ಹಾಕುತ್ತಿದ್ದಾರೆ ಎಂದು ಹೇಳಿದ್ದಾರೆ.
ಸಂವಾದದಲ್ಲಿ ಕಾಜಲ್ ಎನ್ನುವವರು “ಚೌಕಿದಾರ ಚೋರ್ ಹೈ ಎಂದು ಏಕೆ ಹೇಳುತ್ತಿದ್ದೀರಿ?’ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಫೇಲ್ ಯುದ್ಧ ವಿಮಾನ ಖರೀದಿ ಜಗತ್ತಿಲ್ಲಿಯೇ ಅತ್ಯಂತ ದೊಡ್ಡ ರಕ್ಷಣಾ ವ್ಯವಹಾರವಾಗಿದ್ದು, ಯುಪಿಎ ಸರ್ಕಾರ ಎಂಟು ವರ್ಷಗಳ ಕಾಲ ಈ ಬಗ್ಗೆ ಚರ್ಚೆ ನಡೆಸಿ ತೀರ್ಮಾನ ಮಾಡಿತ್ತು.
ಯುಪಿಎ ಅವಧಿಯಲ್ಲಿ 526 ಕೋಟಿ ರೂ.ಗೆ ಯುದ್ಧ ವಿಮಾನ ಖರೀದಿ ಮಾಡಿ, ಎಚ್‌ಎಎಲ್‌ನಲ್ಲಿಯೇ ಉತ್ಪಾದನೆ ಮಾಡಲು ತೀರ್ಮಾನಿಸಲಾಗಿತ್ತು. ಆದರೆ, ಕೇಂದ್ರದಲ್ಲಿ ಸರ್ಕಾರ ಬದಲಾವಣೆಯಾದ ನಂತರ ಪ್ರಧಾನಿ ನರೇಂದ್ರ ಮೋದಿ, ವಿಮಾನ ಉತ್ಪಾದನೆಯಲ್ಲಿ ಯಾವುದೇ ಅನುಭವ ಇಲ್ಲದ ಅನಿಲ್ ಅಂಬಾನಿಯನ್ನು ಫ್ರಾನ್ಸ್‌ಗೆ ಕರೆದುಕೊಂಡು ಹೋಗಿ ರಕ್ಷಣಾ ಸಚಿವರಿಗೆ ಗೊತ್ತಿಲ್ಲದಂತೆಯೇ ಪರ್ಯಾಯ ಮಾತುಕತೆ ನಡೆಸಿದ್ದಾರೆ.
ಇದು ಕ್ರಿಮಿನಲ್ ಅಪರಾಧವಾಗಿದ್ದು, ಈ ಬಗ್ಗೆ ಜಂಟಿ ಸದನ ಸಮಿತಿ ರಚನೆ ಮಾಡುವಂತೆ ಸಂಸತ್ತಿನಲ್ಲಿ ಒತ್ತಾಯ ಮಾಡಿದರೂ, ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದರು. ರಫೇಲ್ ಹರಗಣದ ಬಗ್ಗೆ ಸಿಬಿಐ ತನಿಖೆ ನಡೆಸಲು ಮುಂದಾದಾಗ ಸಿಬಿಐ ನಿರ್ದೇಶಕರನ್ನೇ ವಜಾ ಮಾಡಲಾಯಿತು. ನಂತರ ಸುಪ್ರೀಂ ಕೋರ್ಟ್ ಅವರನ್ನು ಮರಳಿ ಹುದ್ದೆಗೆ ತರುವಂತಾಯಿತು.
ಚೌಕಿದಾರ್ ಎಂದು ಹೇಳಿಕೊಳ್ಳುವವರು ತನಿಖೆಗೆ ಏಕೆ ಹೆದರುತ್ತಿದ್ದಾರೆ. ರಫೇಲ್ ಖರೀದಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಅನಿಲ್ ಅಂಬಾನಿಗೆ 30 ಸಾವಿರ ಕೋಟಿ ರೂ. ಹಣ ನೀಡಿರುವುದರಿಂದ ಚೌಕಿದಾರ್ ಚೋರ್ ಹೈ ಎಂದು ಎಲ್ಲರೂ ಹೇಳುತ್ತಿದ್ದಾರೆ ಎಂದರು. ನವೋದ್ಯಮಗಳ ಕುರಿತು ಮಾತನಾಡಿದ ರಾಹುಲ್ ಗಾಂಧಿ, ಸ್ಟಾರ್ಟ್‌ಅಪ್ ಕಂಪನಿಗಳೇ ಸಧ್ಯದ ಉದ್ಯೋಗದಾತರು. ಮುಂದೆ ಯುಪಿಎ ಸರ್ಕಾರ ಅಧಿಕಾರಕ್ಕೆ ಬಂದರೆ ಜಿಎಸ್‌ಟಿ ಸರಳಗೊಳಿಸಿ, ಸ್ಟಾರ್ಟ್‌ಅಪ್‌ಗ್ಳಿಗೆ ಉತ್ತೇಜನ ನೀಡಲಾಗುವುದು ಎಂದು ಹೇಳಿದರು.
ದಲಿತ ನವೋದ್ಯಮಿಗಳಿಗೆ ಆರ್ಥಿಕ ಸಹಕಾರ ನೀಡಲು ಬ್ಯಾಂಕ್‌ಗಳು ಹಿಂದೇಟು ಹಾಕುತ್ತಿವೆ. ದಲಿತರ ಉದ್ಯಮ ಬೆಳವಣಿಗೆಗೆ ಏನು ಕ್ರಮ ಕೈಗೊಳ್ಳುತ್ತೀರಿ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ದೇಶದಲ್ಲಿ ಬ್ಯಾಂಕಿಂಗ್ ಉದ್ಯಮ ಕೆಲವೇ ಕೆಲವರ ಹಿಡಿತದಲ್ಲಿದೆ. ಅದು ವಿಕೇಂದ್ರಿಕರಣ ಆಗಬೇಕು. ದಲಿತ ಉದ್ಯಮಿಗಳಿಗೂ ನೇರವಾಗಿ ಹಣಕಾಸಿನ ನೆರವು ದೊರೆಯಲು ಜಿಲ್ಲಾ ಕೇಂದ್ರಗಳಲ್ಲಿ ಅಗತ್ಯ ವ್ಯವಸ್ಥೆ ಜಾರಿಗೆ ತರುತ್ತೇವೆ ಎಂದು ಹೇಳಿದರು.
ಮೋದಿ ಘೋಷಣೆ – ಲಾಠಿ ಚಾರ್ಜ್: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮಾನ್ಯತಾ ಟೆಕ್ ಪಾರ್ಕ್‌ಗೆ ಆಗಮಿಸುತ್ತಿದ್ದಾಗ ಕೆಲ ಯುವಕರು ಮೋದಿ… ಮೋದಿ ಎಂದು ಘೋಷಣೆ ಕೂಗಿದರು. ಈ ವೇಳೆ ರಾಜ್ಯ ಎನ್‌ಎಸ್‌ಯುಐ ಘಟಕದ ಅಧ್ಯಕ್ಷ ಮಂಜುನಾಥ್ ಹಾಗೂ ಮೋದಿ ಪರ ಘೋಷಣೆ ಕೂಗಿದವರ ನಡುವೆ ಮಾತಿನ ಚಕಮಕಿ ನಡೆಯುತು. ಕೆ.ಆರ್.ಪುರ ಶಾಸಕ ಬೈರತಿ ಬಸವರಾಜ್ ಮಧ್ಯೆ ಪ್ರವೇಶಿಸಿ, “ಅನಗತ್ಯ ಘೋಷಣೆ ಕೂಗುವವರನ್ನು ನೋಡಿಕೊಂಡು ಸುಮ್ಮನಿಲ್ಲೀರಲ್ಲಾ, ಅವರನ್ನು ವಾಪಸ್ ಕಳುಹಿಸಿ’ ಎಂದು ಪೊಲೀಸರಿಗೆ ಸೂಚಿಸಿದ ನಂತರ ಪೊಲೀಸರು ಮೋದಿ ಪರ ಘೋಷಣೆ ಕೂಗುತ್ತಿದ್ದ ಗುಂಪು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಿದರು.
ರಾಜ್ಯ ನಾಯಕರ ಮೇಲೆ ರಾಹುಲ್ ಗರಂ: ಯುವಕರ ಗುಂಪೊಂದು ಮೋದಿ ಪರ ಘೋಷಣೆ ಕೂಗಿ ಮುಜುಗರ ಉಂಟುಮಾಡಿದ್ದಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ರಾಜ್ಯ ಕಾಂಗ್ರೆಸ್ ನಾಯಕರ ಮೇಲೆ ಗರಂ ಆಗಿದ್ದಾರೆ ಎಂದು ತಿಳಿದು ಬಂದಿದೆ. ಮಾನ್ಯತಾ ಟೆಕ್ ಪಾರ್ಕ್‌ನಲ್ಲಿ ಏರ್ಪಡಿಸಿದ್ದ ಸಂವಾದಕ್ಕೆ ರಾಹುಲ್ ಆಗಮಿಸುತ್ತಿದ್ದಂತೆ ಕಾರ್ಯಕ್ರಮ ಸ್ಥಳದ ಎದುರು ನಿಂತಿದ್ದ ನೂರಾರು ಯುವಕರು, “ಮತ್ತೂಮ್ಮೆ ಮೋದಿ’, “ರಾಹುಲ್ ಗೋ ಬ್ಯಾಕ್’ ಮತ್ತಿತರ ಘೋಷಣೆಯುಳ್ಳ ಫಲಕಗಳನ್ನು ಪ್ರದರ್ಶಿಸಿ, ಮೋದಿ, ಮೋದಿ ಎಂದು ಘೋಷಣೆ ಕೂಗಿದರು.
ಈ ವೇಳೆ ಪೊಲೀಸರು ಮೌನವಾಗಿ ನಿಂತಿದ್ದರ ಬಗ್ಗೆಯೂ ರಾಹುಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಘೋಷಣೆ ಕೂಗುವವರು ಹಾಗೂ ಎನ್‌ಎಸ್‌ಯುಐ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆದಿದ್ದು, ಪೊಲೀಸರು ಎನ್‌ಎಸ್‌ಯುಐ ವಿದ್ಯಾರ್ಥಿಗಳ ಮೇಲೇ ಹಲ್ಲೆ ಮಾಡಿದ್ದಾರೆ. ಪೊಲೀಸರು ಯಾರ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ರಾಹುಲ್ ಪ್ರಶ್ನಿಸಿದ್ದಾರೆ ಎಂದು ತಿಳಿದು ಬಂದಿದೆ.
ಸಚಿವ ಪರಿಷತ್ ಸದಸ್ಯರ ವಿರುದ್ಧ ಆಕ್ರೋಶ: ವಿರೋಧ ಇರುವ ಪ್ರದೇಶದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಿದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ರಾಹುಲ್, ಕಾರ್ಯಕ್ರಮದ ಜವಾಬ್ದಾರಿ ವಹಿಸಿಕೊಂಡಿದ್ದ ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ಹಾಗೂ ವಿಧಾನ ಪರಿಷತ್ ಸದಸ್ಯ ರಿಜ್ವಾನ್ ಅರ್ಷದ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.
“ಅಲ್ಲದೆ, ಕರ್ನಾಟಕ ಪ್ರವಾಸದ ವೇಳೆ ಇಷ್ಟೊಂದು ಮುಜುಗರ ನನಗೆಂದೂ ಆಗಿರಲಿಲ್ಲ. ಕಾರ್ಯಕ್ರಮ ಆಯೋಜಿಸುವಾಗ ಎಲ್ಲ ಅಂಶಗಳನ್ನೂ ಗಮನದಲ್ಲಿಟ್ಟುಕೊಳ್ಳಬೇಕು. ವಿರೋಧವಿರುವ ಪ್ರದೇಶ ಬಿಟ್ಟು ಬೇರೆಡೆ ಕಾರ್ಯಕ್ರಮ ಆಯೋಜಿಸಬಹುದಿತ್ತು,’ ಎಂದು ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಎದುರು ರಾಹುಲ್ ಅಸಮಾಧಾನ ಹೊರ ಹಾಕಿದ್ದಾರೆ ಎಂದು ತಿಳಿದು ಬಂದಿದೆ.
ನವೋದ್ಯಮಿಗಳ ಜತೆಗಿನ ಸಂವಾದದ ಯಶಸ್ಸು ಕಂಡು ಬಿಜೆಪಿಯವರು ಕಾರ್ಯಕರ್ತರನ್ನು ಬಿಟ್ಟು ಅಡಚಣೆ ಉಂಟು ಮಾಡುವ ಮೂಲಕ ತಮ್ಮ ಹತಾಶ ಮನೋಭಾವ ಪ್ರದರ್ಶಿಸಿದ್ದಾರೆ. ವಿರೋಧ ಪಕ್ಷಗಳ ನಾಯಕರನ್ನು ಗೌರವಿಸುವ ಕನಿಷ್ಠ ಸೌಜನ್ಯ ಕೂಡ ಬಿಜೆಪಿಯವರಿಗೆ ಇಲ್ಲ.
-ದಿನೇಶ್ ಗುಂಡೂರಾವ್, ಕೆಪಿಸಿಸಿ ಅಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!
Puttur: ಅತ್ಯಾ*ಚಾರ ಪ್ರಕರಣ: ಆರೋಪಿಗೆ ಜಾಮೀನು
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್ ಕ್ಲಾಸ್ ಫ್ಯಾಮಿಲಿ: ರಿಲೀಸ್ ದಿನಾಂಕ ಬಂತು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.