ಸುಮಲತಾ ಸ್ವತಂತ್ರ ಸ್ಪರ್ಧೆ ಜೆಡಿಎಸ್‌ಗೆ ಸವಾಲು


Team Udayavani, Mar 19, 2019, 7:15 AM IST

sumalata.jpg

ಮಂಡ್ಯ: ಕಾಂಗ್ರೆಸ್‌-ಜೆಡಿಎಸ್‌ನ ಆಂತರಿಕ ಬೆಂಬಲ ಮತ್ತು ಬಿಜೆಪಿ ಮತ್ತಿತರ ರಾಜಕೀಯ ಪಕ್ಷಗಳೂ ಹಾಗೂ ಸಂಘಟನೆಗಳ ಪೂರ್ಣ ಬಲದೊಂದಿಗೆ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್‌ ಚುನಾವಣಾ ಕದನ ಭೂಮಿ ಪ್ರವೇಶಿಸುವ ಘೋಷಣೆ ಮಾಡುತ್ತಿದ್ದಂತೆ ಮಂಡ್ಯ ಲೋಕಸಭಾ ಕ್ಷೇತ್ರ ಹೈವೋಲ್ಟೆàಜ್‌ ಕ್ಷೇತ್ರವಾಗಿ ಮಾರ್ಪಟ್ಟಿದೆ.

ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್‌ ರಾಜಕೀಯ ಪಟ್ಟಾಭಿಷೇಕದ ವೇದಿಕೆಯಾಗಿದ್ದ ಮಂಡ್ಯ ಕ್ಷೇತ್ರದಿಂದ ಸುಮಲತಾ ಅಂಬರೀಶ್‌ ಸ್ವತಂತ್ರ ಅಭ್ಯರ್ಥಿಯಾಗಿ ಘೋಷಣೆಯಾಗುತ್ತಿದ್ದಂತೆ ಜಿಲ್ಲೆಯ ಚುನಾವಣಾ ರಾಜಕಾರಣದಲ್ಲಿ ಸಂಚಲನ ಉಂಟಾಗಿದೆ. 

ಸುಮಲತಾ ಅಂಬರೀಶ್‌ ಮಂಡ್ಯ ರಾಜಕೀಯ ಪ್ರವೇಶಿಸಿದ ದಿನದಿಂದಲೂ ಪ್ರತಿ ಹಂತದಲ್ಲೂ ಕುತೂಹಲವನ್ನೇ ಕಾಯ್ದುಕೊಂಡು ಎದುರಾಳಿಗಳ ಟೀಕೆಗಳಿಗೆ ಸಂಯಮದಿಂದಲೇ ತಿರುಗೇಟು ನೀಡುತ್ತಾ ಜಾಣ್ಮೆಯ ಹೆಜ್ಜೆ ಇಡುತ್ತಿದ್ದ ಅವರು, ಇದೀಗ ಪಕ್ಷೇತರ ಸ್ಪರ್ಧೆ ಘೋಷಣೆಯ ಮೂಲಕ ಜಿಲ್ಲೆಯ ಎಲ್ಲ ಪಕ್ಷಗಳು ಹಾಗೂ ಸಂಘಟನೆಗಳ ವಿಶ್ವಾಸ ಗಳಿಸಲು ಪ್ರಾಮಾಣಿಕ ಪ್ರಯತ್ನ ನಡೆಸಿದ್ದಾರೆ ಎನ್ನಲಾಗಿದೆ.

ಪಕ್ಷೇತರಾದರೆ ಹೆಚ್ಚು ಲಾಭ: ಮಾ.18ರಂದು ತಮ್ಮ ಚುನಾವಣಾ ನಿಲುವನ್ನು ಘೋಷಿಸುವುದಾಗಿ ಹೇಳಿಕೊಂಡು ಬಂದಿದ್ದ ಸುಮಲತಾ ಅಂಬರೀಶ್‌ ಸುತ್ತಲೂ ಬಿಜೆಪಿ ಸೇರ್ಪಡೆ ಹಾಗೂ ಚುನಾವಣಾ ಕಣದಿಂದ ಹಿಂದೆ ಸರಿಯುವ ಅಪಪ್ರಚಾರ ವ್ಯವಸ್ಥಿತವಾಗಿ ಮಾಡಲಾಗಿತ್ತು. ಆದರೆ, ಅದೆಲ್ಲವನ್ನೂ ಹುಸಿಗೊಳಿಸಿ ತಮ್ಮ ನಿಲುವನ್ನು ಸ್ಪಷ್ಟಪಡಿಸಿರುವ ಸುಮಲತಾ, ಬಿಜೆಪಿ ಸೇರ್ಪಡೆಗಿಂತಲೂ ಪಕ್ಷೇತರ ಸ್ಪರ್ಧೆಯಲ್ಲೇ ಹೆಚ್ಚಿನ ಲಾಭ ಇರುವುದನ್ನು ಮನಗಂಡು ಸ್ವತಂತ್ರ ಸ್ಪರ್ಧೆಗೆ ಮುಂದಾಗಿದ್ದಾರೆ ಎನ್ನಲಾಗಿದೆ.

ನಿಖಿಲ್‌ ಸ್ಪರ್ಧೆ ವದಂತಿ ಬೆನ್ನಲ್ಲೇ ಸ್ಥಳೀಯ ನಾಯಕತ್ವದ ಕೂಗೆದ್ದಿತ್ತು. ಈ ವೇಳೆ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣರನ್ನು ಭೇಟಿ ಮಾಡಿದ್ದರು. ಬಿಜೆಪಿಯ ಹಲವು ನಾಯಕರು ಮುಖ್ಯಮಂತ್ರಿ ಕುಮಾರಸ್ವಾಮಿ ನಿರ್ದೇಶನದ ಮೇರೆಗೆ ಬಿಜೆಪಿಯಿಂದ ಸ್ಪರ್ಧಿಸುವಂತೆ ಕೆಲ ನಾಯಕರು ಒತ್ತಡ ಹೇರಿದ್ದರು. ಆದರೆ, ಈ ಎಲ್ಲಾ ಬೆಳವಣಿಗೆಯನ್ನು ಅಳೆದು ತೂಗಿ ಪಕ್ಷದೊಳಗಿನ ಚುನಾವಣೆಗಿಂತ ಪಕ್ಷೇತರ ಹಾದಿಯೇ ಸುಗಮವೆಂದು ಭಾವಿಸಿ ಸ್ವತಂತ್ರ ಚುನಾವಣಾ ಹೋರಾಟಕ್ಕೆ ಇಳಿದಿದ್ದಾರೆ.

ಪ್ರಭಾವಿ ನಾಯಕರ ಬೆಂಬಲ: ಕಳೆದ ಲೋಕಸಭಾ ಉಪ ಚುನಾವಣೆಯಲ್ಲಿ ಎರಡೂವರೆ ಲಕ್ಷಕ್ಕೂ ಅಧಿಕ ಮತಗಳನ್ನು ಪಡೆದಿದ್ದ ಬಿಜೆಪಿ, ತನ್ನ ವೋಟ್‌ ಬ್ಯಾಂಕ್‌ನ್ನು ಇನ್ನಷ್ಟು ವೃದ್ಧಿಗೊಳಿಸುವ ಮತ್ತು ಮಂಡ್ಯದ ನೆಲದಲ್ಲಿ ಕಮಲ ಅರಳಿಸುವ ಮಹತ್ವಾಕಾಂಕ್ಷೆಯಿಂದ ಸುಮಲತಾರನ್ನು ಪಕ್ಷಕ್ಕೆ ಸೆಳೆಯುವ ಪ್ರಯತ್ನ ನಡೆಸಿತ್ತು. ಆದರೆ, ಕಾಂಗ್ರೆಸ್‌ನ ಪ್ರಭಾವಿ ನಾಯಕರ ನಿರ್ದೇಶನದ ಮೇರೆಗೆ ಬಿಜೆಪಿ ಬೆಂಬಲ ಪಡೆಯಲು ನಿರ್ಧರಿಸಿದ ಸುಮಲತಾ,

-ಪಕ್ಷೇತರವಾಗಿ ಕಣಕ್ಕಿಳಿಯುವುದರಿಂದ ಅಂಬರೀಶ್‌ ಅಭಿಮಾನಿಗಳು, ಕನ್ನಡ ಚಿತ್ರರಂಗದ ಸ್ಟಾರ್‌ ನಟರು, ರೈತಸಂಘ ಹಾಗೂ ಬಿಎಸ್ಪಿ ಮುಖಂಡರ ಬೆಂಬಲ ಸಿಗುವುದರ ಜೊತೆಗೆ ಕಾಂಗ್ರೆಸ್‌ನ ಜೆಡಿಎಸ್‌ ವಿರೋಧಿ ಸಮೂಹ ಹಾಗೂ ಜೆಡಿಎಸ್‌ ಒಳಗಿನ ವಂಶರಾಜಕಾರಣ ಪ್ರತಿಭಟಿಸುವ ಮತದಾರರೂ ತಮ್ಮನ್ನು ಬೆಂಬಲಿಸುವರೆಂಬ ಲೆಕ್ಕಾಚಾರ ಸುಮಲತಾ ಅವರ ಸ್ವತಂತ್ರ ಸ್ಪರ್ಧೆಯ ಹಿಂದೆ ಅಡಗಿದೆ.

ಈಗಾಗಲೇ ಬಿಜೆಪಿ ಸುಮಲತಾ ಅಂಬರೀಶ್‌ ಜೊತೆ ಹಲವು ಸುತ್ತಿನ ಮಾತುಕತೆ ನಡೆಸಿದೆ. ಜಿಲ್ಲಾ ಕಾಂಗ್ರೆಸ್‌ನ ಪ್ರಭಾವಿ ನಾಯಕರು ಸುಮಲತಾ ಚುನಾವಣಾ ಪ್ರಕ್ರಿಯೆಗೆ ಬೆಂಬಲವಾಗಿ ನಿಂತಿದ್ದಾರೆ. ಜನಸಾಮಾನ್ಯರ ನಾಯಕತ್ವದಲ್ಲೇ ಇಡೀ ಚುನಾವಣೆಯನ್ನು ನಡೆಸಲು ತೀರ್ಮಾನಿಸಿರುವ ಕಾಂಗ್ರೆಸ್‌ನ ಹಳೇ ಹುಲಿಗಳು ತಾವೆಲ್ಲೂ ಕಾಣಿಸಿಕೊಳ್ಳದಿದ್ದರೂ ಭೂಗತವಾಗಿದ್ದುಕೊಂಡೇ ಸುಮಲತಾ ಗೆಲುವಿಗೆ ಬೆಂಬಲಿಸುವ ನಿರ್ಧಾರ ಕೈಗೊಂಡಿದ್ದಾರೆ.

ಬಿಜೆಪಿ ನಡೆ ಏನು?: ಬಹುಕಾಲದಿಂದ ಮಂಡ್ಯ ರಾಜಕೀಯ ನೆಲದಲ್ಲಿ ಅಸ್ತಿತ್ವಕ್ಕಾಗಿ ಹೋರಾಟ ನಡೆಸುತ್ತಿರುವ ಬಿಜೆಪಿ ಈ ಚುನಾವಣೆಯಲ್ಲಿ ಪಕ್ಷದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸುವುದೋ ಅಥವಾ ಸುಮಲತಾ ಅವರಿಗೆ ಪರೋಕ್ಷ ಬೆಂಬಲ ನೀಡುವುದೋ ಎನ್ನುವುದು ಪ್ರಶ್ನೆಯಾಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಎರಡೂವರೆ ಲಕ್ಷಕ್ಕೂ ಹೆಚ್ಚು ಮತಗಳು ಬಂದಿದ್ದು, ಈ ಚುನಾವಣೆಯಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಅಷ್ಟೇ ಪ್ರಮಾಣದ ಮತಗಳು ಬರುವ ಸಾಧ್ಯತೆಗಳಿಲ್ಲ.

ಅಂದು ದೋಸ್ತಿ ಸರ್ಕಾರದ ವಿರುದ್ಧ ಪರಿವರ್ತನೆಯಾದ ಮತಗಳೇ ಬಿಜೆಪಿ ಮತಗಳಾಗಿ ಕಂಡುಬಂದಿತ್ತು. ಆದರೆ, ಈಗ ಆ ಪರಿಸ್ಥಿತಿ ಇಲ್ಲ. ಒಮ್ಮೆ ಬಿಜೆಪಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಮತದಾನದ ಪ್ರಮಾಣ ಗಣನೀಯವಾಗಿ ಕಡಿಮೆಯಾದರೆ ಜಿಲ್ಲೆಯಲ್ಲಿ ತನ್ನ ಅಸ್ತಿತ್ವ ಇನ್ನಷ್ಟು ದುರ್ಬಲಗೊಳ್ಳುವುದೆಂಬ ಲೆಕ್ಕಾಚಾರದಲ್ಲಿದೆ.

ದೇವೇಗೌಡರ ಕುಟುಂಬ ರಾಜಕಾರಣದ ವಿರೋಧಿ ಅಲೆ ಮತ್ತು ಹೊರಗಿನ ಅಭ್ಯರ್ಥಿಯ ಹೇರಿಕೆಯಿಂದ ಸುಮಲತಾ ಪರವಾದ ಅಲೆ ಸೃಷ್ಟಿಯಾಗಿದ್ದು, ಅವರಿಗೇ ಬೆಂಬಲ ನೀಡಿ ತನ್ನ ಅಸ್ತಿತ್ವ ಉಳಿಸಿಕೊಳ್ಳುವುದು ಸೂಕ್ತ ಎಂಬ ಭಾವನೆ ಬಿಜೆಪಿ ಹೊಂದಿದೆ. ಈ ನಡುವೆ ಬಿಜೆಪಿಯಲ್ಲಿರುವ ಸಿಎಂ ಕುಮಾರಸ್ವಾಮಿಯವರ ಆಪ್ತ ನಾಯಕರು ಬಿಜೆಪಿಯಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಮತಗಳನ್ನು ವಿಭಜಿಸಿ ನಿಖಿಲ್‌ಗೆ ಅನುಕೂಲ ಮಾಡಿಕೊಡುವ ತಂತ್ರಗಾರಿಕೆಯನ್ನೂ ನಡೆಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಮೂಲತಃ ಮಂಡ್ಯ ಜಿಲ್ಲೆಯವರೇ ಆಗಿದ್ದು, ಅಂಬರೀಶ್‌ ಜೊತೆ ಉತ್ತಮ ರಾಜಕೀಯ ಒಡನಾಟ ಹೊಂದಿರುವ ಕಾರಣ ಸುಮಲತಾ ಪರವಾದ ನಿರ್ಣಯ ಕೈಗೊಳ್ಳುವ ಸಾಧ್ಯತೆಗಳು ಹೆಚ್ಚಾಗಿವೆ. ಈಗಾಗಲೇ ಬಿಜೆಪಿಯ ಹಲವಾರು ಕಾರ್ಯಕರ್ತರನ್ನು ಸುಮಲತಾ ಭೇಟಿ ಮಾಡಿದ ಸಂದರ್ಭದಲ್ಲಿ ಬಹುತೇಕರು ತಮ್ಮ ಬೆಂಬಲ ವ್ಯಕ್ತಪಡಿಸಿರುವುದರಿಂದ ಬಿಜೆಪಿ ಸುಮಲತಾ ಅವರನ್ನು ಬೆಂಬಲಿಸಿದರೆ ಬಿಜೆಪಿಗೆ ಹೆಚ್ಚಿನ ಲಾಭವಾಗಲಿದೆ ಎಂಬ ಮಾತುಗಳೂ ಕೇಳಿಬರುತ್ತಿವೆ.

* ಮಂಡ್ಯ ಮಂಜುನಾಥ್‌

ಟಾಪ್ ನ್ಯೂಸ್

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.