ಹೈಕೋರ್ಟ್ ಮೆಟ್ಟಿಲೇರಿ ಅನುದಾನ ತರಿಸಿದ ಗ್ರಾಮಸ್ಥರು
Team Udayavani, Mar 20, 2019, 1:00 AM IST
ಕಡಬ: ಮೂಲಸೌಕರ್ಯಕ್ಕಾಗಿ ಜನಪ್ರತಿನಿಧಿಗಳಿಗೆ ದುಂಬಾಲು ಬಿದ್ದು ಬೇಸತ್ತಿದ್ದ ಕಡಬ ತಾಲೂಕಿನ ಕೊಂಬಾರು ಗ್ರಾಮಸ್ಥರು ಉಚ್ಚ ನ್ಯಾಯಾಲಯದ ಮೆಟ್ಟಿಲೇರಿ ಸತತ 4 ವರ್ಷ ಕಾನೂನು ಹೋರಾಟ ನಡೆಸಿ ಕೊನೆಗೂ ಯಶ ಸಾಧಿಸಿದ್ದಾರೆ. ಕೋರ್ಟ್ ಸೂಚನೆಯಂತೆ ಸರಕಾರದಿಂದ ಅನುದಾನ ತರಿಸಿ ವಿಶೇಷ ಸಾಧನೆ ಮಾಡಿದ್ದಾರೆ.
ಕೊಂಬಾರು ಗ್ರಾಮದ ಮೆಟ್ಟುತ್ತಾರು ಸೇತುವೆ ನಿರ್ಮಾಣ ಹಾಗೂ ಕೂಡು ರಸ್ತೆ ಕಾಮಗಾರಿಗೆ 40 ಲಕ್ಷ ರೂ. ಅನುದಾನ ಮಂಜೂರು ಮಾಡಿರುವುದಾಗಿ ಸರಕಾರವು ಮಾ. 14ರಂದು ಉಚ್ಚ ನ್ಯಾಯಾಲಯಕ್ಕೆ ಉತ್ತರ ನೀಡಿದೆ.
ಕೋರ್ಟ್ ಮೆಟ್ಟಿಲೇರಿದ ಗ್ರಾಮಸ್ಥ ಕೊಂಬಾರು ಗ್ರಾಮದ ಭುವನೇಶ್ವರ ಗೌಡ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ| ಎಸ್. ಸುನಿಲ್ ದತ್ ಯಾದವ್ ಅವರಿದ್ದ ಏಕ ಸದಸ್ಯ ಪೀಠ ವಿಲೇವಾರಿ ಮಾಡಿ ಕಾಮಗಾರಿ ಕೂಡಲೇ ಪ್ರಾರಂಭಿಸುವಂತೆ ಆದೇಶ ನೀಡಿದೆ.
ಕೊಂಬಾರು ಗ್ರಾಮದ ಮೆಟ್ಟುತ್ತಾರಿನಲ್ಲಿ ಸೇತುವೆ ಹಾಗೂ ಮಣಿಭಾಂಡ, ಮೆಟ್ಟುತ್ತಾರು, ಪೆರಂದೋಡಿ ಅಮೂcರು, ತೇರೆಬೀದಿ ಸಂಪರ್ಕ ರಸ್ತೆಯ ಬಗ್ಗೆ ಸ್ಥಳೀಯ ಅಮೂcರು ನಿವಾಸಿ ಭುವನೇಶ್ವರ ಗೌಡ ಅವರು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿ, ಈ ಪ್ರದೇಶದ ಜನ ಸರ್ವ ಋತು ಸಂಪರ್ಕ ರಸ್ತೆ ಇಲ್ಲದ ಕಾರಣ ಹಲವಾರು ದಶಕಗಳಿಂದ ಅನುಭವಿಸುತ್ತಿರುವ ಸಮಸ್ಯೆಯ ಕುರಿತು ಸಂಪೂರ್ಣ ಮಾಹಿತಿ ನೀಡಿದ್ದರು.ಇವುಗಳಿಗಾಗಿ ಪ್ರಧಾನಮಂತ್ರಿಗಳಿಂದ ಹಿಡಿದು ಎಲ್ಲ ಜನಪ್ರತಿನಿಧಿಗಳ ಬಳಿ ಹಲವು ದಶಕಗಳಿಂದ ಮನವಿ ಸಲ್ಲಿಸುತ್ತಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದೂ ಅರ್ಜಿಯಲ್ಲಿ ದೂರಿಕೊಂಡಿದ್ದರು.
ಸುಪ್ರೀಂ ಕೋರ್ಟ್ ವರೆಗೂ ಹೋಗಿತ್ತು
2015ರಲ್ಲಿ ಒಮ್ಮೆ ರಿಟ್ ಅರ್ಜಿ ಪುರಸ್ಕರಿಸಿದ ಹೈಕೋರ್ಟ್ ಒಂದು ತಿಂಗಳ ಒಳಗೆ ಈ ಬಗ್ಗೆ ಅಗತ್ಯ ಕ್ರಮಕೈಗೊಳ್ಳಬೇಕೆಂದು ಸರಕಾರಕ್ಕೆ ಆದೇಶಿಸಿದ್ದರೂ ಜಿ.ಪಂ. ಆಗಲಿ ಸರಕಾರವಾಗಲಿ ಕ್ರಮ ಕೈಗೊಂಡಿರಲಿಲ್ಲ. ಈ ಕುರಿತು ಅರ್ಜಿದಾರರು ಮತ್ತೆ ಕೋರ್ಟ್‌ನ ಗಮನಸೆಳೆದಾಗ ಸರಕಾರ ಅನುದಾನದ ಕೊರತೆಯ ಕಾರಣ ನೀಡಿತ್ತು. ಈ ನಡುವೆ ಅರ್ಜಿದಾರರು ಸುಪ್ರೀಂ ಕೋರ್ಟ್‌ನ ಮೆಟ್ಟಿಲೇರಿ ನ್ಯಾಯ ಕೋರಿದ್ದರು.
ಅರ್ಜಿಯನ್ನು ಹೈಕೋರ್ಟ್‌ನಲ್ಲಿಯೇ ಬಗೆಹರಿಸಿ
ಕೊಳ್ಳುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದ ಹಿನ್ನೆಲೆಯಲ್ಲಿ 2017ರಲ್ಲಿ ಮತ್ತೂಂದು ರಿಟ್ ಅರ್ಜಿ ಸಲ್ಲಿಸಿ ಹೈಕೋರ್ಟಿನ ಕದ ತಟ್ಟಿದರು.
ಮಾ. 7ರಂದು ರಿಟ್ ಅರ್ಜಿ ವಿಚಾರಣೆ ಕೈಗೊಂಡ ಹೈಕೋರ್ಟ್ ಮಾ. 14ರಂದು ಸರಕಾರದ ಕಾರ್ಯದರ್ಶಿಗಳು ನ್ಯಾಯಾಲಯಕ್ಕೆ ಹಾಜರಾಗಿ ವಿವರಣೆ ನೀಡಬೇಕೆಂದು ಆದೇಶ ನೀಡಿತ್ತು. ಅದರಂತೆ ಮಾ. 14ರಂದು ಸರಕಾರಿ ವಕೀಲರ ಮೂಲಕ ಹಾಜರಾದ ಸರಕಾರಿ ಅಧಿಕಾರಿ ವೃಂದ ಕಾಮಗಾರಿಯನ್ನು ಚುನಾವಣೆ ನೀತಿಸಂಹಿತೆ ಮುಕ್ತಾಯದ ಬಳಿಕ ಅನುಷ್ಠಾನಕ್ಕೆ ತರಲಾಗುವುದು ಎಂದು ನ್ಯಾಯ ಪೀಠಕ್ಕೆ ತಿಳಿಸಿದೆ. ರಿಟ್ ಅರ್ಜಿದಾರರ ಪರ ವಕೀಲರಾದ ಪ್ರವೀಣ್ ಕುಮಾರ್ ಕೆ.ಎನ್. ಅವರು ವಾದ ಮಂಡಿಸಿದ್ದರು.
10 ವರ್ಷಗಳಿಂದ ನಡೆಸಿದ ಹೋರಾಟಕ್ಕೆ ಮನ್ನಣೆ ಲಭಿಸದಿದ್ದಾಗ ಹೈಕೋರ್ಟ್ ಮೆಟ್ಟಿಲೇರಿದೆವು. ಕೊನೆಗೂ ನಮಗೆ ನ್ಯಾಯ ಲಭಿಸಿರುವುದು ಬಹಳ ಸಂತೋಷದ ವಿಚಾರ ಎಂದು ಸಾಮಾಜಿಕ ಕಾರ್ಯಕರ್ತ ರಾಮಕೃಷ್ಣ ಹೊಳ್ಳಾರು ಹರ್ಷ ವ್ಯಕ್ತಪಡಿಸಿದ್ದಾರೆ.
ಜನಪ್ರತಿನಿಧಿಗಳು ಸ್ಪಂದಿಸದಿದ್ದಾಗ ಅನಿವಾರ್ಯವಾಗಿ ಕೋರ್ಟ್ ಮೆಟ್ಟಿಲೇರಬೇಕಾಯಿತು. ನಾಲ್ಕು ವರ್ಷಗಳ ಹೋರಾಟದ ಬಳಿಕ ಜಯ ಸಿಕ್ಕಿದೆ. ಕಾನೂನು ಹೋರಾಟದಲ್ಲಿ ಮೂಲತಃ ಕೊಂಬಾರು ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿರುವ ನ್ಯಾಯವಾದಿ ಪ್ರವೀಣ್ ಕುಮಾರ್ ಕೆ.ಎನ್. ಅವರು ಯಾವುದೇ ಶುಲ್ಕ ಪಡೆಯದೇ ಕಾನೂನು ನೆರವು ನೀಡಿದ್ದಾರೆ.
-ಭುವನೇಶ್ವರ ಗೌಡ, ಕೋರ್ಟ್ ಮೆಟ್ಟಿಲೇರಿದ ಗ್ರಾಮಸ್ಥ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫಲ: ವಿಜಯೇಂದ್ರ ಮೇಲೂ ಪರಿಣಾಮ?
IPL Auction 2025: ಇಂದು, ನಾಳೆ ಐಪಿಎಲ್ ಬೃಹತ್ ಹರಾಜು
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Channapatna; ಜನಾದೇಶಕ್ಕೆ ತಲೆಬಾಗುತ್ತೇನೆ, ಪಲಾಯನ ಮಾಡಲ್ಲ: ನಿಖಿಲ್
Karnataka; ಕೇಂದ್ರ ಸ್ವಾಮ್ಯದ ಸಂಸ್ಥೆಗಳಲ್ಲಿ ಕನ್ನಡಿಗರೇಕೆ ವಿರಳ? ಆಗಬೇಕಿರುವುದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.