ತ್ರಾಸಿ – ಹೊಸಪೇಟೆ : ತಡೆಗೋಡೆ ಕಾಮಗಾರಿ ಶುರು
Team Udayavani, Mar 21, 2019, 1:00 AM IST
ಕುಂದಾಪುರ: ತ್ರಾಸಿಯ ಹೊಸಪೇಟೆ ಸಮುದ್ರ ತೀರದಲ್ಲಿ ಉಂಟಾದ ಅಕಾಲಿಕ ಕಡಲ್ಕೊರೆತ ಉಂಟಾದ ಬಳಿಕ ಎಚ್ಚೆತ್ತ ಅಧಿಕಾರಿಗಳು, ಈಗ ತಡೆಗೋಡೆ ನಿರ್ಮಾಣ ಕಾಮಗಾರಿ ಯನ್ನು ಕೈಗೆತ್ತಿಕೊಂಡಿದ್ದಾರೆ.
ಕಳೆದ ಕೆಲ ದಿನಗಳಿಂದ ಹೊಸಪೇಟೆ ಕಡಲ ತೀರದಲ್ಲಿ ಕಾಣಿಸಿಕೊಂಡಿದ್ದ ಕಡಲ್ಕೊರೆತ ದಿನದಿಂದ ದಿನಕ್ಕೆ ಹೆಚ್ಚಾದ ಹಿನ್ನೆಲೆಯಲ್ಲಿ ಮೀನುಗಾರರಲ್ಲಿ ಆತಂಕ ಸೃಷ್ಟಿಯಾಗಿತ್ತು. ತಡೆಗೋಡೆ ನಿರ್ಮಾಣಕ್ಕೆ 2 ವರ್ಷಗಳ ಹಿಂದೆ ಶಿಲೆ ಕಲ್ಲುಗಳನ್ನು ತಂದು ಹಾಕಿದ್ದು ಕಾಮಗಾರಿ ಆರಂಭಿಸಿರಲಿಲ್ಲ. ಈ ಬಗ್ಗೆ “ಉದಯವಾಣಿ’ ವರದಿಯನ್ನು ಪ್ರಕಟಿಸಿತ್ತು.
ಇದಕ್ಕೆ ಸ್ಪಂದಿಸಿದ ಜನಪ್ರತಿನಿಧಿಗಳು, ಜಿಲ್ಲಾಡಳಿತ, ಬಂದರು ಇಲಾಖೆಯ ಅಧಿಕಾರಿಗಳು ಅಲ್ಲಿನ ಜನರಿಗೆ ತೊಂದರೆಯಾಗದಂತೆ ಮುಂಜಾಗ್ರತೆ ಕ್ರಮವಾಗಿ ತಡೆಗೋಡೆ ನಿರ್ಮಾಣಕ್ಕೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ತ್ರಾಸಿ- ಮರವಂತೆ ಕಡಲ ತೀರದಲ್ಲಿ ನಡೆಯುತ್ತಿರುವ ಸುಸ್ಥಿರ ಕಡಲ ತೀರ ನಿರ್ವಹಣೆ ಯೋಜನೆಯಿಂದ ಹೊಸಪೇಟೆ ಭಾಗದ ಸಮುದ್ರ ತೀರದಲ್ಲಿ ಕಡಲ್ಕೊರೆತ ಕಾಣಿಸಿಕೊಂಡಿದೆ ಎಂದು ಇಲ್ಲಿನ ಮೀನುಗಾರರು ಆರೋಪಿಸಿದ್ದು, ಮಳೆಗಾಲದಲ್ಲಿ ಕಡಲ್ಕೊರೆತ ತೀವ್ರತೆ ಇನ್ನಷ್ಟು ಹೆಚ್ಚಾಗುವ ಭೀತಿ ಕಾಡುತ್ತಿದೆ. ಅದಕ್ಕಾಗಿ ಮಳೆಗಾಲ ಆರಂಭಕ್ಕೂ ಮುನ್ನ ತಡೆಗೋಡೆ ಕಾಮಗಾರಿಯನ್ನು ಪೂರ್ಣ ಗೊಳಿಸುವಂತೆ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಹೊಸ ಸೇರ್ಪಡೆ
Electricity Price Hike: ಮೂರು ವರ್ಷದ ವಿದ್ಯುತ್ ದರ ಒಂದೇ ಬಾರಿ ಏರಿಕೆ?
Puttur: ಎಪ್ರಿಲ್, ಮೇ ಬಿಸಿಲ ತಾಪ: ಹಲವೆಡೆ ಅಡಿಕೆ ಮರ ಖಾಲಿ!
Karnataka: ರಾಜ್ಯದ ಎಲ್ಲ ವಿ.ವಿ.ಗಳಲ್ಲೂ ರಾಜ್ಯಪಾಲರ ಅಧಿಕಾರಕ್ಕೆ ಕತ್ತರಿ?
Mangaluru: ಜನಾಗ್ರಹವಿದ್ದರೂ ಇನ್ನೂ ದೊರೆಯದ ಪ್ರಾದೇಶಿಕ ಪಾಸ್‌ಪೋರ್ಟ್ ಕೇಂದ್ರ
E-Commerce: ಆಹಾರ ಪದಾರ್ಥ ಪ್ರತ್ಯೇಕ ಪ್ಯಾಕ್ ಕಡ್ಡಾಯ: ಪ್ರಾಧಿಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.