ಇನ್ನೊಬ್ಬರಿಗೆ ನೆರವಾದರೆ ಜೀವನದಲ್ಲಿ ನೆಮ್ಮದಿ
Team Udayavani, Mar 22, 2019, 6:38 AM IST
ದಾವಣಗೆರೆ: ಜೀವನದಲ್ಲಿ ನೆಮ್ಮದಿಯ ಬದುಕು ನಮ್ಮದಾಗಬೇಕಾದರೆ ಇನ್ನೊಬ್ಬರಿಗೆ ನೆರವಾಗಬೇಕು ಮತ್ತು ಪರರ ಕಷ್ಟಗಳಿಗೆ ಸ್ಪಂದಿಸಿ, ನಿವಾರಣೆಗೆ ಶ್ರಮಿಸಬೇಕು ಎಂದು ದಾವಣಗೆರೆ ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿ ಹೇಳಿದರು.
ಗುರುವಾರ ಮೌಲಾನ್ ಆಜಾದ್ ಸಂಸ್ಥೆ ವತಿಯಿಂದ ಅರಳಿ ಮರದ ವೃತ್ತದ ಬಳಿಯ ಸರ್ಕಾರಿ ಉರ್ದು ಶಾಲೆಯಲ್ಲಿ ದಾವಣಗೆರೆ ತಾಲೂಕಿನ 51 ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯ 5 ಸಾವಿರ ವಿದ್ಯಾರ್ಥಿಗಳಿಗೆ ಪರೀಕ್ಷಾ ಪರಿಕರಗಳ ವಿತರಣಾ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ನಿಸ್ವಾರ್ಥ ಸಮಾಜ ಸೇವೆಯಿಂದ ಜೀವನವೇ ಆನಂದದ ನಂದನವನವಾಗುತ್ತದೆ ಎಂದರು.
ಕೆಲವರು ಜೀವನದಲ್ಲಿ ಸಂತೋಷ ಅನುಭವಿಸಬೇಕು ಎಂದು ಕುಡಿತದೊಂದಿಗೆ ಮೋಜು, ಮಸ್ತಿ ಮಾಡುತ್ತಾರೆ. ಆದರೆ, ಆ ಸುಖ ಕ್ಷಣಿಕವಾದದ್ದು. ಕುಡಿತದಿಂದ ಹಣ, ಆರೋಗ್ಯ ಎರಡೂ ಹಾಳಾಗುತ್ತದೆ. ಜೊತೆಗೆ ನೆಮ್ಮದಿಯೂ ಸಿಗುವುದಿಲ್ಲ. ನಮ್ಮಲ್ಲಿರುವುದರಲ್ಲೇ ಇನ್ನೊಬ್ಬರಿಗೆ ನೆರವು ನೀಡಬೇಕು ಎಂದು ತಿಳಿಸಿದರು.
ಬಸವಣ್ಣ, ಗೌತಮ ಬುದ್ಧ, ಅಂಬೇಡ್ಕರ್ ಸೇರಿದಂತೆ ಮೊದಲಾದವರು ಸಮಾಜ ಸೇವೆಯಿಂದ ಬದುಕಿನ ಸುಖ ಕಂಡುಕೊಂಡಿದ್ದಾರೆ. ಸ್ವಾರ್ಥವನ್ನು ಬಿಟ್ಟು ನಿಸ್ವಾರ್ಥತೆಯಿಂದ ಸೇವೆ ಸಲ್ಲಿಸಿ ತ್ಯಾಗಮೂರ್ತಿಯಾಗಿ ಇಂದಿಗೂ ಲೋಕಪೂಜಿತರಾಗಿದ್ದಾರೆ ಎಂದು ಸ್ಮರಿಸಿದರು.
ನಿಸ್ವಾರ್ಥ ಸೇವೆ ನಮ್ಮದಾಗಬೇಕು. ಅನಾಥ, ಬಡವ, ಶೋಷಿತರ ಸೇವೆ ಮಾಡುವುದು ಪರಮಾನಂದ ತಂದು ಕೊಡುತ್ತದೆ. ಇಂತಹ ಕಾರ್ಯ ಮಾಡುತ್ತಿರುವ ನಸೀರ್ ಅಹ್ಮದ್ ಅವರ ಕಾರ್ಯ ಶ್ಲಾಘನೀಯವಾದದು ಎಂದರು.
ಮೌಲಾನಾ ಇಬ್ರಾಹಿಂ ಸಖಾಫಿ ಮಾತನಾಡಿ, ಶಾಲೆಯಲ್ಲಿನ ಮುಖ್ಯೋಪಾಧ್ಯಾಯರ ಕರ್ತವ್ಯ ದೊಡ್ಡದು. ಉತ್ತಮ ಸಂಸ್ಕಾರ ಇದ್ದರೆ, ಮಕ್ಕಳು ಉತ್ತಮವಾಗಿ ಕಲಿಯುತ್ತಾರೆ ಎಂಬುದನ್ನು ಅರಿತುಕೊಂಡು ನಡೆಯಬೇಕು. ಮಕ್ಕಳಿಗೆ ಒಳ್ಳೆಯ ಶಿಕ್ಷಣ ನೀಡಿ, ಅವರಲ್ಲಿ ಬಸವತತ್ವ, ಭಾವೈಕ್ಯತೆ ತತ್ವ, ನಾವೆಲ್ಲರೂ ಭಾರತೀಯರು ಎಂಬ ಭಾವನೆ ಬೆಳೆಸಬೇಕು ಎಂದು ತಿಳಿಸಿದರು.
ಸಂಸ್ಥೆಯ ಅಧ್ಯಕ್ಷ ಡಾ| ಸಿ.ಆರ್. ನಸೀರ್ ಅಹ್ಮದ್ ಅಧ್ಯಕ್ಷತೆ ವಹಿಸಿದ್ದರು. ಸ್ಮಾರ್ಟ್‌ಸಿಟಿ ಯೋಜನೆ ವ್ಯವಸ್ಥಾಪಕ ನಿರ್ದೇಶಕ ಅಸದ್ ಷರೀಫ್ ವಿದ್ಯಾರ್ಥಿಗಳಿಗೆ ಪರೀಕ್ಷಾ ಪರಿಕರಗಳನ್ನು ವಿತರಿಸಿದರು. ಡಿಡಿಪಿಐ ಸಿ.ಆರ್. ಪರಮೇಶ್ವರಪ್ಪ, ಮುಸ್ಲಿಂ ಹಾಸ್ಟೆಲ್ ಕಾರ್ಯದರ್ಶಿ ಶಮೀರ್, ಶಫಿ ಅಹಮ್ಮದ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.