ಗೋಣಿಕೊಪ್ಪ: ಮತದಾರರ ಜಾಗೃತಿ ಅಭಿಯಾನ
Team Udayavani, Mar 23, 2019, 12:30 AM IST
ಮಡಿಕೇರಿ: ಗೋಣಿ ಕೊಪ್ಪಲು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ವತಯಿಯಂದ ಮತದಾರರ ಜಾಗೃತಿ ಅಭಿಯಾನ ಗೋಣಿಕೊಪ್ಪದಲ್ಲಿ ನಡೆಯಿತು ಮತದಾರರ ಜಾಗೃತಿಯ ಘೋಷಣೆಯ ಫಲಕಗಳೊಂದಿಗೆ ಶಾಲೆಯ ವಿದ್ಯಾರ್ಥಿಗಳ ಹಾಗೂ ಶಿಕ್ಷಕ ರೊಂದಿಗೆ ಮೆರವಣಿಗೆಯು ಪಟ್ಟಣದ ಮುಖ್ಯ ರಸ್ತೆ ಯಲ್ಲಿ ಸಾಗಿ ನಂತರ ಗೋಣಿಕೊಪ್ಪಲುವಿನ ಬಸ್ಸು ನಿಲ್ದಾಣದಲ್ಲಿ ಎಲ್ಲಾ ವಿದ್ಯಾರ್ಥಿಗಳು ಸುತ್ತಲು ನಿಂತು ಅಲ್ಲಿಯೇ ಮತದಾನದ ಜಾಗೃತಿಯ ಕಾರ್ಯಕ್ರಮದ ವಿಚಾರವನ್ನು ಶಾಲೆಯ ದೈಹಿಕ ಶಿಕ್ಷಕರಾದ ರಮಾನಂದ ಅವರು ಸಾರ್ವಜನಿಕರಿಗೆ ತಿಳಿಯಪಡಿಸಿದರು. ಶಾಲೆಯ ವಿದ್ಯಾರ್ಥಿನಿ ಕುಮಾರಿ ಮೊನಿಕ ಮತದಾರರ ಜಾಗೃತಿ ಅಭಿಯಾನದ ಮಹತ್ವವನ್ನು ತಿಳಿಸಿದರು.
ಅದೇ ಸಂದರ್ಭ ದಲ್ಲಿ ಶಾಲೆಯ ಚಿತ್ರಕಲಾ ಶಿಕ್ಷಕರಾದ ಬಿ.ಆರ್. ಸತೀಶ್ ಜನಸಮೂಹ ಹಾಗೂ ವಿದ್ಯಾರ್ಥಿಗಳ ಮುಂದೆ ಸ್ಥಳದಲ್ಲಿಯೇ ಮತದಾನದ ಜಾಗೃತಿ ಬಿಂಬಿಸುವುದನ್ನು ಕ್ಯಾನ್ವಸ್ನ ಮೇಲೆ ಚಿತ್ರಿಸಿದರು.”ನಮ್ಮ ಮತ ನಮ್ಮ ಹಕ್ಕು” ಎಂಬ ಘೋಷಣೆಯನ್ನು ಬರೆದರು ಅಲ್ಲಿ ನೆರೆದಿದ್ದ ಜನರ ಮುಂದೆ ಶಾಲೆಯ ಮುಖ್ಯೋಪಾದ್ಯಾಯರಾದ ಕೆ.ಆರ್.ಶಶಿಕಲಾ ಅವರು ಸತೀಶ್ ಅವರು ಚಿತ್ರಿಸಿದ ಬೆರಳಿನ ಚಿತ್ರಣಕ್ಕೆ ಬಣ್ಣ ಹಚ್ಚಿ ಓಟು ಮಾಡುವುದರ ಮೂಲಕ ಮತದಾನದ ಜಾಗೃತಿ ಕಾರ್ಯ ಜನರಿಗೆ ಮನ ತಲುಪುವಂತೆ ಮಾಡಿದರು. ಅನಂತರ ಸರ್ವರು ಮತದಾನವನ್ನು ಮಾಡುವಂತೆ ತಿಳಿಯಪಡಿಸಿದರು.ಗೋಣಿಕೊಪ್ಪ ಕ್ಲಸ್ಟರಿನ ಸಂಪನ್ಮೂಲ ವ್ಯಕ್ತಿ ಜ್ಯೋತಿಶ್ವರಿ ಮಾತನಾಡಿ ಮತದಾನವು ನಮ್ಮ ಹಕ್ಕು ಪ್ರತಿಯೊಬ್ಬರೂ ಎ. 18 ರಂದು ಮತಗಟ್ಟೆಗೆ ತೆರಳಿ ಮತದಾನ ಮಾಡುವಂತಾಗಬೇಕು ಎಂದು ಕೋರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragod: ಕೊಲೆ ಯತ್ನ; ವೀಡಿಯೋ ಕಾನ್ಫರೆನ್ಸ್ ಮೂಲಕ ನಕ್ಸಲ್ ಸೋಮನ್ ವಿಚಾರಣೆ
Kasaragod: 300 ಪವನ್ ಚಿನ್ನ, 1 ಕೋಟಿ ರೂ. ಕಳವು ಕರ್ನಾಟಕ, ತಮಿಳುನಾಡಿಗೆ ತನಿಖೆ ವಿಸ್ತರಣೆ
Road Mishap: ಲಾರಿ ಹರಿದು ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು
Road Mishap: ಪೊನ್ನಂಪೇಟೆ: ಲಾರಿ ಢಿಕ್ಕಿ; ಬಾಲಕಿ ಸಾವು
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ
Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ
Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Kiccha Sudeepa: ಕ್ರಿಸ್ಮಸ್ ಗೆ ಬರುತ್ತಿದೆ ʼಮ್ಯಾಕ್ಸ್ʼ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.