“ಮೋದಿ ಕೈ ಬಲಪಡಿಸಲು ಹೋರಾಟ

Team Udayavani, Mar 23, 2019, 12:30 AM IST

shobha.jpg

ಉಡುಪಿ: ಮೋದಿ ಯವರು ಮತ್ತು ನಾನು ಐದು ವರ್ಷಗಳಲ್ಲಿ ಮಾಡಿರುವ ಸಾಧನೆ, ರಾಜ್ಯದ ಸಮ್ಮಿಶ್ರ ಸರಕಾರದ ವೈಫ‌ಲ್ಯ ವನ್ನು ಮುಂದಿಟ್ಟುಕೊಂಡು ಉಡುಪಿ- ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರ ಸೈನ್ಯ ಮತ ಯಾಚನೆ ಆರಂಭಿಸಿದೆ ಎಂದು ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಅವರು ಪತ್ರಿಕಾಗೋಷ್ಠಿ ಯನ್ನುದ್ದೇಶಿಸಿ ಮಾತನಾಡಿದರು. ಮೋದಿಯವರು ಮತ್ತೂಮ್ಮೆ ಪ್ರಧಾನಿ ಯಾಗುವುದು ಖಚಿತ. ಉಡುಪಿ- ಚಿಕ್ಕಮಗಳೂರು ಜನತೆ ಕೂಡ ಮೋದಿ ಯವರ ಕೈಗಳನ್ನು ಬಲಪಡಿಸುತ್ತಾರೆ ಎಂಬ ವಿಶ್ವಾಸವಿದೆ. ನಾನು ಐದು ವರ್ಷಗಳಲ್ಲಿ ಕೇಂದ್ರ ಸರಕಾರದಿಂದ ಅನೇಕ ಯೋಜನೆಗಳನ್ನು ಎರಡೂ ಜಿಲ್ಲೆಗಳಿಗೆ ತರಿಸಿ ಅಭಿವೃದ್ಧಿಗಾಗಿ ಪ್ರಾಮಾಣಿಕ ಪ್ರಯತ್ನ ನಡೆಸಿದ್ದೇನೆ. ಇನ್ನೂ ಹಲವು ಕೆಲಸಗಳು ಬಾಕಿ ಇವೆ. ಅಡಿಕೆ, ಕಾಫಿ ಬೆಳೆಗಾರರ ಸಮಸ್ಯೆಗಳ ನಿವಾರಣೆಗೆ ಮತ್ತಷ್ಟು ಪ್ರಯತ್ನಿಸ ಬೇಕಿದೆ. ಕೇಂದ್ರ- ರಾಜ್ಯದ ನಾಯಕರು ವಿಶ್ವಾಸವಿಟ್ಟು ಮತ್ತೂಮ್ಮೆ ಅವಕಾಶ ನೀಡಿದ್ದಾರೆ ಎಂದರು.

ಮೈತ್ರಿ ವೈಫ‌ಲ್ಯಕ್ಕೆ ರಾಜ್ಯ ಸಾಕ್ಷಿ
ದೇಶದಲ್ಲಿ ಈ ಬಾರಿ ಮಹಾಘಟ ಬಂಧನ್‌ ರಚಿಸಲಾಗಿದೆ. ಅದರ ಮುಖಂಡರು ಕರ್ನಾಟಕದಲ್ಲಿಯೇ ಒಂದಾಗಿ ಸಂದೇಶ ನೀಡಿದ್ದರು. ಆದರೆ ರಾಜ್ಯದಲ್ಲಿ ಜೆಡಿಎಸ್‌ ಮತ್ತು ಕಾಂಗ್ರೆಸ್‌ ಲೋಕಸಭಾ ಸೀಟಿಗಾಗಿ ಕಿತ್ತಾಡುವ ಮೂಲಕ ಘಟ ಬಂಧನ್‌ ವಿಫ‌ಲ ವಾಗಿರುವುದನ್ನು ತೋರಿಸಿ ಕೊಟ್ಟಿದ್ದಾರೆ ಎಂದರು.ಪ್ರಶ್ನೆಯೊಂದಕ್ಕೆ ಉತ್ತರಿಸಿ, ಟಿಕೆಟ್‌ ಆಕಾಂಕ್ಷಿಗಳಾಗಿದ್ದವರು ಅಭ್ಯರ್ಥಿಯ ಘೋಷಣೆಯಾದ ಬಳಿಕ ಒಂದಾಗಿ ಕೆಲಸ ಮಾಡುವುದು ಬಿಜೆಪಿ ಪದ್ಧತಿ. ಅದರಂತೆ ಇಲ್ಲಿಯೂ ಕೆಲಸ ನಡೆಯು ತ್ತಿದೆ ದುಪ್ಪಟ್ಟು ಅಂತರದಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದರು.

ಮಾ.26: ನಾಮಪತ್ರ
ಮಾ.22ರಂದು ಶುಭ ಮುಹೂರ್ತವೆಂದು ನಾಮಪತ್ರ ಸಲ್ಲಿಸಿದ್ದೇನೆ. ಸಾರ್ವಜನಿಕವಾಗಿ ಮಾ.26ರಂದು ಸಲ್ಲಿಸಲಿದ್ದೇನೆ. ಅಂದು ಬೆಳಗ್ಗೆ 10ಕ್ಕೆ ಉಡುಪಿ ಚಿತ್ತರಂಜನ್‌ ಸರ್ಕಲ್‌ನಲ್ಲಿ ನಡೆಯುವ ಸಮಾವೇಶದಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಪಾಲ್ಗೊಳ್ಳಲಿದ್ದು, ಮೀನುಗಾರರ ಜತೆ ಸಭೆ ನಡೆಸಲಿದ್ದಾರೆ ಎಂದರು. ಪಕ್ಷದ ಭಾರತಿ ಶೆಟ್ಟಿ, ಮಟ್ಟಾರು ರತ್ನಾಕರ ಹೆಗ್ಡೆ, ಜೀವರಾಜ್‌, ಸಾಣೂರು ನರಸಿಂಹ ಕಾಮತ್‌, ಗುರ್ಮೆ ಸುರೇಶ್‌ ಶೆಟ್ಟಿ, ಗೀತಾಂಜಲಿ ಸುವರ್ಣ, ಕುಯಿಲಾಡಿ ಸುರೇಶ್‌ ನಾಯಕ್‌, ಕುತ್ಯಾರು ನವೀನ್‌ ಶೆಟ್ಟಿ, ಪ್ರಭಾಕರ ಪೂಜಾರಿ, ಸಂಧ್ಯಾ ರಮೇಶ್‌ ಉಪಸ್ಥಿತರಿದ್ದರು. 

“ನೋಟಾ’ ಅಭಿಯಾನ ಕಾಂಗ್ರೆಸ್‌ನವರಿಗೆ 
ನಿಮ್ಮ ವಿರುದ್ಧ ನೋಟಾ ಚಲಾಯಿಸುವ ಬಗ್ಗೆ ಮಾತುಗಳು ಕೇಳಿಬರುತ್ತಿವೆಯಲ್ಲವೆ? ಎಂದು ಪತ್ರಕರ್ತರು ಪ್ರಶ್ನಿಸಿದಾಗ, ಇಂದಿರಾ ಗಾಂಧಿಯವರಿಗೆ ರಾಜಕೀಯ ಪುನರ್ಜನ್ಮ ನೀಡಿದ್ದ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಈ ಬಾರಿ ಕೈ ಚಿಹ್ನೆಯನ್ನೇ ನೋಡದಂಥ ಸ್ಥಿತಿ ಉಂಟಾಗಿದೆ. ಸ್ಪರ್ಧೆಗೆ ಅವಕಾಶ ಇಲ್ಲದಿರುವುದರಿಂದ ಹತಾಶ ಸ್ಥಿತಿ ತಲುಪಿರುವ ಕಾಂಗ್ರೆಸ್‌ ನೋಟಾ ಅಭಿಯಾನದ ಷಡ್ಯಂತ್ರ ರೂಪಿಸಿದೆ ಎಂದು ಶೋಭಾ ಪ್ರತ್ರಿಕ್ರಿಯಿಸಿದರು.

ಪ್ರಮೋದ್‌ ಸ್ಪರ್ಧೆ ವೈಯಕ್ತಿಕ ವಿಚಾರ
ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ಅವರು ಜೆಡಿಎಸ್‌ ಅಭ್ಯರ್ಥಿಯಾಗಿರುವ ಕುರಿತು ಪ್ರಶ್ನಿಸಿದಾಗ, ಈ ಬಗ್ಗೆ ಹೆಚ್ಚು ಮಾತನಾಡಲಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರೂ ಸ್ಪರ್ಧಿಸಬಹುದು. ಪ್ರಮೋದ್‌ ಅವರದ್ದು ವೈಯಕ್ತಿಕ ನಿರ್ಧಾರ. ನಮ್ಮ ಎದುರು ಪಕ್ಷದಲ್ಲಿ ಯಾರಿದ್ದರೂ ಸೋಲಿಸುವುದು ನಮ್ಮ ಗುರಿ. ಜನರು ಕೆಲಸ ಮಾಡುವವರಿಗೆ ಮತ ಹಾಕುತ್ತಾರೆಯೇ ವಿನಾಕುಟುಂಬ ರಾಜಕಾರಣ ಮಾಡುವ ಪಕ್ಷದವರಿಗೆ ಮತ ಹಾಕಲಾರರು ಎಂದು ಶೋಭಾ ಪ್ರತಿಕ್ರಿಯಿಸಿದರು.  

ಟಾಪ್ ನ್ಯೂಸ್

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Udupi: ಗೀತಾರ್ಥ ಚಿಂತನೆ-94: ದುಗುಡಗಳನ್ನು ಕೇಳುವುದೂ ಚಿಕಿತ್ಸೆ

Udupi: ಗೀತಾರ್ಥ ಚಿಂತನೆ-94: ದುಗುಡಗಳನ್ನು ಕೇಳುವುದೂ ಚಿಕಿತ್ಸೆ

4

Udupi: ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡು ವ್ಯಕ್ತಿ ಸಾವು

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.