ನಿಖಿಲ್‌ ಬೆಂಬಲಿಗರ ಕಾರಿಗೆ ಬಿತ್ತು ಕಲ್ಲು

Team Udayavani, Mar 23, 2019, 12:21 AM IST

2-aaa.jpg

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನಿಖಿಲ್‌ ಕುಮಾರಸ್ವಾಮಿಯವರು ಶುಕ್ರವಾರ ಚುನಾವಣಾ ಪ್ರಚಾರ ಕೈಗೊಂಡಿದ್ದಾಗ, ಕಾರೊಂದರ ಮೇಲೆ ಕಲ್ಲು ತೂರಲಾಗಿದೆ.

ಕೆ.ಆರ್‌.ಪೇಟೆ ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಜಾನಕೀರಾಂ ಕಾರಿನ ಮೇಲೆ ಉದ್ರಿಕ್ತರು ಕಲ್ಲು ತೂರಾಟ ನಡೆಸಿದ್ದು, ಇದರಿಂದ ಕಾರಿನ ಒಂದು ಭಾಗದ ಗಾಜು ಪುಡಿಯಾಗಿದೆ. ಕಟ್ಟೆಕ್ಯಾತನಹಳ್ಳಿ ಸಮೀಪ ನಿಖಿಲ್‌  ಚುನಾವಣಾ ಪ್ರಚಾರ ಮುಗಿಸಿ ಅಕ್ಕಿಹೆಬ್ಟಾಳು ಕಡೆಗೆ ಹೋಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಮಧ್ಯೆ, ತಾಲೂಕಿನ ಹುಲಿವಾನ ಗ್ರಾಮದ ಬಳಿ ಚುನಾವಣಾ ಪ್ರಚಾರದ ವೇಳೆ ಮತದಾರರು ನಿಖಿಲ್‌ ರನ್ನು ತರಾಟೆಗೆತೆಗೆದುಕೊಂಡರು. ಭಾಷಣ ಮಾಡಿದ ನಿಖೀಲ್‌, ಮುಖ್ಯಮಂತ್ರಿ ಕುಮಾರಸ್ವಾಮಿಯವರು ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ 8 ಸಾವಿರ ಕೋಟಿ ರೂ.ಗೂ ಅಧಿಕ ಅನುದಾನ ನೀಡಿದ್ದಾರೆ. ಅವೆಲ್ಲವೂ ಅನುಷ್ಠಾನಕ್ಕೆ ಬರಬೇಕಾದರೆ…ಎಂದು ಹೇಳುತ್ತಿದ್ದಂತೆ ಅವರ ಮಾತಿಗೆ ಬ್ರೇಕ್‌ ಹಾಕಿದ ಮತದಾರರು, ಮುಂದೆ ಮಾತನಾಡುವುದಕ್ಕೆ ಅವಕಾಶ ನೀಡಲೇ ಇಲ್ಲ. ತಕ್ಷಣ ಅವರು ಅಲ್ಲಿಂದ ನಿರ್ಗಮಿಸಿದರು.

ಈ ಮಧ್ಯೆ, ತಾಲೂಕಿನ ಚಿಕ್ಕೋನಹಳ್ಳಿ ಗ್ರಾಮದಲ್ಲಿ ನಿಖಿಲ್‌  ಪರ ಪ್ರಚಾರಕ್ಕೆ ತೆರಳಿದ್ದ ನಾಗಮಂಗಲ ಕ್ಷೇತ್ರದ ಶಾಸಕ ಕೆ.ಸುರೇಶ್‌ಗೌಡ, ವಿಧಾನಪರಿಷತ್‌ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಸೇರಿದಂತೆ ಹಲವು ಮುಖಂಡರನ್ನು ರೈತರು ತರಾಟೆ ತೆಗೆದುಕೊಂಡು, ಸುಮಲತಾ ಪರ ಘೋಷಣೆ ಕೂಗಿದರು. ರೈತರ ಸಮಸ್ಯೆಗೆ ಪರಿಹಾರ ಹುಡುಕಲು ಸಾಧ್ಯವಾಗದ ನೀವು, ಈಗ ನಿಮ್ಮ ಪಕ್ಷದ ಅಭ್ಯರ್ಥಿ ಪರ ಮತ ಕೇಳಲು ಬಂದಿದ್ದಿರಿ. ನಿ ಮಗೆ ನೈತಿಕತೆ ಇದೆಯೇ ಎಂದು ಶಾಸಕ ಸುರೇಶ್‌ಗೌಡ ಹಾಗೂಕೆ.ಟಿ.ಶ್ರೀಕಂಠೇಗೌಡರನ್ನು ಪ್ರಶ್ನಿಸಿದರು. ಬಳಿಕ, ಸುಮಲತಾ ಪರ ಘೋಷಣೆ ಕೂಗಿದರು. ರೈತರನ್ನು ಸಮಾಧಾನಪಡಿಸಿದ ಶಾಸಕರು ಚುನಾವಣೆ ಬಳಿಕ ರೈತರ ಸಮಸ್ಯೆಗಳಿಗೆ ಪರಿಹಾರ ಸೂಚಿಸುವ ಸಬೂಬು ಹೇಳಿ ಅಲ್ಲಿಂದ ನಿರ್ಗಮಿಸಿದರು.

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.