ಅಂಗನವಾಡಿ ಕೇಂದ್ರ ಬಳಿ ಘನತ್ಯಾಜ್ಯ ಸಂಗ್ರಹ 


Team Udayavani, Mar 23, 2019, 6:11 AM IST

23-march-4.jpg

ಪುಂಜಾಲಕಟ್ಟೆ : ಅಂಗನಾಡಿ ಕೇಂದ್ರದ ಬಳಿಯಲ್ಲೇ ಕಸದ ರಾಶಿಯಿಂದ ಗಬ್ಬು ನಾರುತ್ತಿರುವ ಪರಿಸರ. ಪ್ರತಿದಿನ ಪುಟಾಣಿಗಳಿಗೆ ಮೂಗು ಮುಚ್ಚಿಕೊಂಡೇ ಊಟ, ಪಾಠ ಎನ್ನುವಂತಹ ಪರಿಸ್ಥಿತಿ. ಇದು ಬಂಟ್ವಾಳ ತಾಲೂಕಿನ ಬಿ. ಕಸಬಾ ಅಂಗನವಾಡಿ ಕೇಂದ್ರದ ದುಃಸ್ಥಿತಿ.

ಬಂಟ್ವಾಳ ಪುರಸಭಾ ಆಡಳಿತ ಕಚೇರಿ ಹಿಂಭಾಗದಲ್ಲೇ ಕಸದ ಸಂಗ್ರಹ ಮಾಡಿರುವುದರಿಂದ ಅಲ್ಲಿಯೇ ಕಾರ್ಯಾಚರಿಸುತ್ತಿರುವ ಅಂಗನವಾಡಿ ಕೇಂದ್ರಕ್ಕೆ ದುರ್ವಾಸನೆ ಸ್ವಾಗತ. ಅಂಗನವಾಡಿ ಪುಟಾಣಿ ಮಕ್ಕಳಿಗೆ ಸಾಂಕ್ರಾಮಿಕ ರೋಗದ ಭೀತಿ ಕಾಡುತ್ತಿದೆ.

ಬಂಟ್ವಾಳ ಪುರಸಭೆ ಸ್ವಚ್ಛತಾ ಅಭಿಯಾನ ಕಾರ್ಯ ಬಗ್ಗೆ ಹೆಗ್ಗಳಿಕೆ ಪಡೆದಿದೆ. ಆದರೆ, ಪುರಸಭಾ ಆಡಳಿತ ಕಚೇರಿ ಹಿಂಭಾಗದಲ್ಲಿಯೇ ಘನತ್ಯಾಜ್ಯ ಸಂಗ್ರಹ ಮಾಡುತ್ತಿದ್ದು, ಊರಿನ ತ್ಯಾಜ್ಯ ತಂದು ಸುರಿಯಲಾಗುತ್ತಿದೆ. ಅದರ ಬಳಿಯಲ್ಲೇ ಬಿ. ಕಸಬಾ ಅಂಗನವಾಡಿ ಕೇಂದ್ರವಿರುವುದರಿಂದ ತ್ಯಾಜ್ಯ ರಾಶಿಯಿಂದ ಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಸ್ಥಳಾಂತರಕ್ಕೆ ಪ್ರಯತ್ನ
ಸ್ವಚ್ಛ ಬಂಟ್ವಾಳ, ಪುರಸಭೆ ಕನಸಾಗಿದ್ದು, ಇದಕ್ಕಾಗಿ ಪೌರ ಕಾರ್ಮಿಕರನ್ನು ನಿಯೋಜಿಸಲಾಗಿದೆ. ಘನ ತ್ಯಾಜ್ಯ ಸಂಗ್ರಹ, ಸ್ಥಳಾಂತರಿಸಲು ಜಾಗ ಸಿಗುತ್ತಿಲ್ಲ.

ಪುರವಾಸಿಗಳ ಬೇಡಿಕೆಯಂತೆ, ಘಟಕಕ್ಕೆ ಸೂಕ್ತ ಜಮೀನು ಪರಿಶೀಲನೆ ಮಾಡಿ ಆದಷ್ಟು ಶೀಘ್ರ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಿಸಲಾಗುವುದು. ಜತೆಗೆ ಇಲ್ಲಿನ ಜ್ವಲಂತ ಸಮಸ್ಯೆಯಾಗಿರುವ ತ್ಯಾಜ್ಯ ವಿಲೇವಾರಿ ಘಟಕಕ್ಕೂ ಮುಕ್ತಿ ನೀಡಲು ಸಾಧ್ಯವಾಗುತ್ತದೆ ಎಂಬುವುದು ಬಂಟ್ವಾಳ ಪುರಸಭಾ ಮುಖ್ಯಾಧಿಕಾರಿ ರೇಖಾ ಜೆ. ಶೆಟ್ಟಿ ಅವರ ಅಭಿಪ್ರಾಯ.

ಆರೋಗ್ಯದ ಮೇಲೆ ದುಷ್ಪರಿಣಾಮ
ಇಲ್ಲಿನ ಅಂಗನವಾಡಿಗೆ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಬರುತ್ತಿದ್ದರು. ಸದ್ಯದ ವಾಸನೆಯಿಂದ ಹೆತ್ತವರು ಮಕ್ಕಳ ಆರೋಗ್ಯದ ಬಗ್ಗೆ ಆತಂಕ ವ್ಯಕ್ತಪಡಿಸಿ ಕಳುಹಿಸುತ್ತಿಲ್ಲ. ಈಗ ಕಡಿಮೆ ಹಾಜರಾತಿಯಿದೆ. ತ್ಯಾಜ್ಯ ಹಾಕಲು ಜಾಗವಿಲ್ಲದೆ ಅಂಗನವಾಡಿ ಬಳಿಯಲ್ಲೇ ಸುರಿಯಲಾಗುತ್ತಿದೆ. ಸೊಳ್ಳೆಗಳ ಕಾಟದಿಂದ ಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಸಾಧ್ಯತೆಯಿದ್ದು, ಎಲ್ಲರೂ ತೊಂದರೆ ಅನುಭವಿಸುವಂತಾಗಿದೆ ಎಂದು ಹೆತ್ತವರು ಆತಂಕ ವ್ಯಕ್ತಪಡಿಸಿದ್ದಾರೆ. ಸ್ಥಳೀಯ ಆಡಳಿತದ ಕಾರ್ಯವೈಖರಿಗೆ ಸಾರ್ವಜನಿಕರು ಬೇಸತ್ತಿದ್ದಾರೆ. ಕಲುಷಿತ ವಾತಾವರಣದಿಂದ ಮಕ್ಕಳನ್ನು ರಕ್ಷಿಸಬೇಕಾದ ಕೆಲಸ ಅಧಿಕಾರಿಗಳಿಂದ ಆಗಬೇಕಾಗಿದೆ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ತ್ಯಾಜ್ಯ ವಾಹನ ಸಮಯ
ಬದಲಾವಣೆ ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ತ್ಯಾಜ್ಯ ಸಂಗ್ರಹಕ್ಕಾಗಿ ಪ್ರತ್ಯೇಕ ವ್ಯವಸ್ಥೆ ಇಲ್ಲ. ಇದರಿಂದ ಪುರಸಭಾ ವ್ಯಾಪ್ತಿಯ ವಿವಿಧೆಡೆ ಸಂಗ್ರಹಿಸಿದ ತ್ಯಾಜ್ಯಗಳನ್ನು ಪುರಸಭಾ ಆಡಳಿತ ಕಚೇರಿ ಹಿಂಭಾಗದಲ್ಲಿ ತಂದು ಸಂಗ್ರಹಿಸಲಾಗುತ್ತಿದೆ. ಸಣ್ಣ ವಾಹನಗಳಿಂದ ತಂದ ತ್ಯಾಜ್ಯಗಳನ್ನು ಹಸಿ-ಒಣ ತ್ಯಾಜ್ಯ ವಿಂಗಡಣೆ ಮಾಡಿ, ಒಣ ಕಸವನ್ನು ಇಲ್ಲಿಯೇ ಅಚ್ಚುಕಟ್ಟಾಗಿ ಸಂಗ್ರಹಿಸಿ, ಹಸಿ ತ್ಯಾಜ್ಯವನ್ನು ಹೊರವಲಯದ ಡಂಪಿಂಗ್‌ ಯಾರ್ಡ್‌ಗಳಿಗೆ ಕಳುಹಿಸಲಾಗುತ್ತಿದೆ. ವಾಹನಗಳಲ್ಲಿ ಬೆಳಗ್ಗೆ ಬಂದತಹ ತ್ಯಾಜ್ಯಗಳನ್ನು ಸಂಜೆ ವೇಳೆಗೆ ವಿಲೇವಾರಿ ಮಾಡಲಾಗುತ್ತಿದೆ. ತ್ಯಾಜ್ಯ ಸಂಗ್ರಹ ವಾಹನ ಬಂದಾಗ ಮಾತ್ರ ವಾಸನೆ ಬರುತ್ತದೆ. ಇದರಿಂದ ತ್ಯಾಜ್ಯ ವಾಹನ ಬರುವಿಕೆ ಸಮಯವನ್ನು ಬದಲಾವಣೆ ಮಾಡುತ್ತೇವೆ. ಮುಂದಿನ ದಿನಗಳಲ್ಲಿ ಯಾವುದೇ ತೊಂದರೆಯಾಗದು.
ರೇಖಾ ಜೆ. ಶೆಟ್ಟಿ
ಬಂಟ್ವಾಳ ಪುರಸಭಾ ಮುಖ್ಯಾಧಿಕಾರಿ

ಸೂಕ್ತ ಜಾಗದಲ್ಲಿ ವ್ಯವಸ್ಥೆ
ಸ್ವಚ್ಛ ಬಂಟ್ವಾಳ ಪರಿಕಲ್ಪನೆಯಡಿ ಘನತ್ಯಾಜ್ಯ ವಿಂಗಡಣ ಘಟಕ ಯೋಜನೆ ರೂಪಿಸಲಾಗಿದೆ. ಇಲ್ಲಿ ತ್ಯಾಜ್ಯ ವಿಂಗಡಿಸಿ, ಸಂಸ್ಕರಣೆ ಮಾಡಿ ಗೊಬ್ಬರ ತಯಾರು ಮಾಡುವ ಚಿಂತನೆ ಇದೆ. ಇದಕ್ಕಾಗಿ ಪಾಣೆಮಂಗಳೂರಿನ ಸುಣ್ಣದ ಗೂಡು/ ಪುರಸಭಾ ವ್ಯಾಪ್ತಿಯಲ್ಲಿ ಸೂಕ್ತ ಜಾಗದಲ್ಲಿ ವ್ಯವಸ್ಥೆ ಕಲ್ಪಿಸಲಾಗುವುದು.
 ಯಾಸ್ಮಿನ್‌ ಸುಲ್ತಾನ,
 ಪರಿಸರ ಎಂಜಿನಿಯರ್ 

ಘಟಕ ಅತ್ಯವಶ್ಯ
ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ತ್ಯಾಜ್ಯ ವಿಲೇವಾರಿ ಘಟಕವೆಂಬುವುದೇ ಇಲ್ಲ. ಕಳೆದ 7 ವರ್ಷಗಳಿಂದ ತ್ಯಾಜ್ಯ ವಿಲೇವಾರಿ ಸಂಬಂಧಿತ ಸಾಮಾನ್ಯ ಸಭೆಯಲ್ಲಿ ಸಾಕಷ್ಟು ಚರ್ಚೆಗಳು ನಡೆದರೂ ಯಾವುದೂ ಕಾರ್ಯಗತಗೊಂಡಿಲ್ಲ. ಈ ನಿಟ್ಟಿನಲ್ಲಿ ಬಂಟ್ವಾಳ ಪುರಸಭೆಗೆ ತ್ಯಾಜ್ಯ ವಿಲೇವಾರಿ ಘಟಕ ಅತ್ಯವಶ್ಯವಾಗಿದೆ.
 - ಮುನೀಶ್‌ ಅಲಿ
ಬಂಟ್ವಾಳ ಪುರಸಭಾ ಸದಸ್ಯ

ಟಾಪ್ ನ್ಯೂಸ್

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.