ಜೆಡಿಎಸ್ ಕೋಟೆಯಲ್ಲಿ”ಕಮಲ ಕಂಪು’
Team Udayavani, Mar 23, 2019, 6:55 AM IST
ಕ್ಷೇತ್ರದ ವಸ್ತುಸ್ಥಿತಿ: ಮಹಾಲಕ್ಷ್ಮೀ ವಿಧಾನ ಸಭಾ ಕ್ಷೇತ್ರ ಜೆಡಿಎಸ್‌ನ ಭದ್ರಕೋಟೆ. ಒಕ್ಕಲಿಗ ಸಮುದಾಯ ಹೆಚ್ಚಿರುವ ಕ್ಷೇತ್ರದ ಮತದಾರರು ವಿಧಾನಸಭಾ ಚುನಾವಣೆಯಲ್ಲಿ ಸತತ 2 ಬಾರಿ ಜೆಡಿಎಸ್ ಬೆಂಬಲಿಸಿದ್ದಾರೆ. ಆದರೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯತ್ತ ಒಲವು ತೋರಿರುವುದನ್ನು ಅಂಕಿ-ಅಂಶಗಳು ಹೇಳುತ್ತಿವೆ.
2014ರ ಲೋಕಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಶೇ.57.1ರಷ್ಟು ಮತದಾತರು ಹಾಲಿ ಸಂಸಸದ ಸದಾನಂದಗೌಡ ಪರ ಒಲವು ತೋರಿದ್ದರು. ಆಗ ಚಲಾವಣೆಯಾಗಿದ್ದ 2,79,265 ಮತಗಳ ಪೈಕಿ 85,973 ಮತಗಳು ಬಿಜೆಪಿ ಪಾಲಾಗಿದ್ದವು. ಕಾಂಗ್ರೆಸ್‌ನ ಸಿ.ನಾರಾಯಣಸ್ವಾಮಿ 40,139 ಮತ, ಜೆಡಿಎಸ್‌ನ ಅಬ್ದುಲ್ ಅಜೀಂ 20,340 ಮತಗಳನ್ನು ಪಡೆದಿದ್ದರು.
ಈ ಬಾರಿ ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಸದಾನಂದಗೌಡರ ವಿರುದ್ಧ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕಣಕ್ಕಿಳಿಯುವ ಸಾಧ್ಯತೆಯಿದ್ದು, ಕದನ ಕಣ ಕೌತುಕ ಹುಟ್ಟು ಹಾಕಿದೆ. ಇನ್ನು ಪಾಲಿಕೆ ವಿಚಾರಕ್ಕೆ ಬಂದಾಗ ಏಳು ವಾರ್ಡ್‌ಗಳ ಪೈಕಿ 4ರಲ್ಲಿ ಜೆಡಿಎಸ್ ಪ್ರಾಬಲ್ಯ ಮೆರೆದಿದೆ.ಕಾಂಗ್ರೆಸ್ ಪಕ್ಷ 2 ಮತ್ತು ಬಿಜೆಪಿ 1 ಸ್ಥಾನ ಪಡೆದಿವೆ.ಒಕ್ಕಲಿಗ, ಹಿಂದುಳಿದ ವರ್ಗ ಮತ್ತು ಲಿಂಗಾಯಿತ ಮತಗಳು ಈ ಕ್ಷೇತ್ರದಲ್ಲಿ ನಿರ್ಣಾಯಕ ಪಾತ್ರ ವಹಿಸಲಿವೆ.
ಸಂಸದರಿಂದ ಬಂದ ಪ್ರಮುಖ ಕೊಡುಗೆಗಳು
-ನಂದಿನಿ ಲೇಔಟ್‌ನ ಕಂಠೀರವ ನಗರದಲ್ಲಿ ಬಸ್ ತಂಗುದಾಣ ನಿರ್ಮಾಣ
-ಉದ್ಯೋಗ ಮೇಳ ಹಮ್ಮಿಕೊಂಡು ಯುವ ಸಮುದಾಯಕ್ಕೆ ಉದ್ಯೋಗ
ನಿರೀಕ್ಷೆಗಳು
-ರಸ್ತೆ ಅಭಿವೃದ್ಧಿಗೆ ಮತ್ತಷ್ಟು ಅನುದಾನ
-ವಾರ್ಡ್‌ಗಳು- 7
-ಬಿಜೆಪಿ -1
-ಕಾಂಗ್ರೆಸ್ – 2
-ಜೆಡಿಎಸ್ -4
-ಜನಸಂಖ್ಯೆ -4,58,047
-ಮತದಾರರ ಸಂಖ್ಯೆ -2,79,265
-ಪುರುಷರು -1,44,219
-ಮಹಿಳೆಯರು-1,35,046
2014ರ ಚುನಾವಣೆಯಲ್ಲಿ ಚಲಾವಣೆಯಾದ ಮತಗಳು- 1,50,605 (57.1%)
-ಬಿಜೆಪಿ ಪಡೆದ ಮತಗಳು -85,973 (57.1%)
ಕಾಂಗ್ರೆಸ್ ಪಡೆದ ಮತಗಳು – 40,139 (26.7%)
–ಜೆಡಿಎಸ್ ಪಡೆದ ಮತಗಳು – 20,340 (13.5%)
2014ರ ಲೋಕಸಭೆ ಚುನಾವಣೆ ವೇಳೆ ಕ್ಷೇತ್ರದ ಚಿತ್ರಣ
-ಗೋಪಾಲಯ್ಯ ಜೆಡಿಎಸ್ ಶಾಸಕ
-ಪಾಲಿಕೆಯಲ್ಲಿ ಬಿಜೆಪಿ ಸದಸ್ಯರು-1
-ಕಾಂಗ್ರೆಸ್ ಸದಸ್ಯರು-3
-ಜೆಡಿಎಸ್-3
ಮಾಹಿತಿ: ದೇವೇಶ ಸೂರಗುಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.