ವಿಜ್ಞಾನದ ವಿಸ್ಮಯ ಕಣ್ತುಂಬಿಕೊಂಡ ಜನತೆ


Team Udayavani, Mar 24, 2019, 12:38 PM IST

vijnana

ಬೆಂಗಳೂರು: ವಿಜ್ಞಾನದ ಹೊಸ ಆವಿಷ್ಕಾರದ ಪ್ರದರ್ಶನ, ಪ್ರಾತ್ಯಕ್ಷಿಕೆ ಒಂದೆಡೆಯಾದರೆ, ಇನ್ನೊಂದೆಡೆ ಮಕ್ಕಳ ಕಲರವ, ವಿದ್ಯಾರ್ಥಿಗಳ ಮಹಾ ಸಮಾಗಮ ಶನಿವಾರ ಮಲ್ಲೇಶ್ವರದ ಐಐಎಸ್ಸಿಯಲ್ಲಾಗಿದೆ.

ಭಾರತೀಯ ವಿಜ್ಞಾನ ಸಂಸ್ಥೆ(ಐಐಎಸ್ಸಿ) ಒಳಗೆ ಏನಾಗುತ್ತಿದೆ ಎಂಬುದನ್ನು ಜನ ಸಾಮಾನ್ಯರಿಗೆ ಅದರಲ್ಲೂ ಯುವಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ತಿಳಿಸುವುದಕ್ಕಾಗಿ ಪ್ರತಿ ವರ್ಷ ಮುಕ್ತ ದಿನ( ಓಪನ್‌ ಡೇ)ಆಚರಿಸಲಾಗುತ್ತದೆ. ಶನಿವಾರ ಹಮ್ಮಿಕೊಂಡಿದ್ದ ಮುಕ್ತ ದಿನದಲ್ಲಿ ಐಐಎಸ್ಸಿಯ 40 ವಿಭಾಗದಿಂದ ವಿಜ್ಞಾನದ ಹಲವು ಪ್ರಯೋಗ, ವಿಸ್ಮಯಗಳ ಜತೆಗೆ ವಸ್ತು ಪ್ರದರ್ಶಗಳನ್ನು ಸಾಮಾನ್ಯ ಜನರಿಗೆ ಮುಕ್ತವಾಗಿ ತೆರೆದಿಟ್ಟಿದ್ದರು.

ನಗರ ಯೋಜನೆ, ಸುಸ್ಥಿರ ಸಂಚಾರಿ ವ್ಯವಸ್ಥೆ ಮತ್ತು ಮೂಲಸೌಕರ್ಯ ವಿಭಾಗದಲ್ಲಿ ನಗರದಲ್ಲಿ ಉಂಟಾಗುತ್ತಿರುವ ಸಂಚಾರಿ ಸಮಸ್ಯೆಗೆ ಹೇಗೆಲ್ಲ ರಸ್ತೆಗಳನ್ನು ಅಭಿವೃದ್ಧಿ ಪಡಿಸಿದರೆ ಅನುಕೂಲವಾಗಲಿದೆ ಎಂಬುದರ ದೃಶ್ಯ ಪ್ರದರ್ಶನ ಏರ್ಪಡಿಸಲಾಗಿತ್ತು.

ಎಲೆಕ್ಟ್ರಾನಿಕ್‌ ಎಂಜಿನಿಯರಿಂಗ್‌ ವಿಭಾಗದ ಲ್ಯಾಬ್‌ನಲ್ಲಿ ಹೈ-ವೋಲ್ಟೆಜ್‌ ವಿದ್ಯುತ್‌ ಹರಿಸಿ ನಾಲ್ಕು ವಿವಿಧ ರೀತಿಯ ಪ್ರಾತ್ಯಕ್ಷಿಕೆಯನ್ನು ಪ್ರದರ್ಶಿಸಲಾಯಿತು. 10 ನಿಮಿಷದ ಪ್ರಾತ್ಯಕ್ಷಿಕೆ ರಂಜಿಸಿತು. 1.50 ಲಕ್ಷ ವೋಲ್ಟೆಜ್‌ನಿಂದ ಕೃತಕ ಸಿಡಿಲು ಸೃಷ್ಟಿ, 3 ಮಿಲಿಯನ್‌ ವೋಲ್ಟ್ನಿಂದ ವಿದ್ಯುತ್‌ ಬಾಂಬ್‌ ಸ್ಫೋಟಿಸಲಾಯಿತು.

ಡ್ರೋಣ್‌ ದರ್ಶನ: ಏರೋಸ್ಪೇಸ್‌ ಉದ್ಯಮಕ್ಕೆ ಬೇಕಾಗುವ ವಿದ್ಯುತ್‌ತ್ಛಕ್ತಿ ಸೇರಿ ಇನ್ನಿತರ ಇಂಧನಗಳನ್ನು ಗಾಳಿ ಮೂಲಕ ಉತ್ಪಾದಿಸುವ ಹೈ ಸ್ಪೀಡ್‌ವಿಂಡ್‌ ಟನಲ್‌ ಕಾಂಪ್ಲೆಕ್ಸ್‌, ವಿಮಾನಯಾನ ಕ್ಷೇತ್ರಕ್ಕೆ ಪರ್ಯಾಯ ಇಂಧನ ಆವಿಷ್ಕಾರ ಸೇರಿ ಇನ್ನಿತರ ಕಾರ್ಯಕ್ಕೆ ಬಳಕೆಯಾಗಬಲ್ಲ ಡ್ರೋಣ್‌ಗಳನ್ನು ಪ್ರದರ್ಶಿಸಲಾಯಿತು.

ರಾಕೆಟ್‌ ಉಡಾವಣೆ, ಅದರ ವೇಗ, ಸಿದ್ಧಪಡಿಸುವ ವಿಧಾನ, ಉಡಾವಣೆ ಸಂದರ್ಭ ಮಾಹಿತಿ ಒಳಗೊಂಡಿರುವ ಸೂಪರ್‌ ಸೋನಿಕ್‌ ಜೆಟ್‌ ಪ್ರಾತ್ಯಕ್ಷಿಕೆ, ನ್ಯಾನೋ ಸೈನ್ಸ್‌ ಮತ್ತು ಎಂಜಿನಿಯರಿಂಗ್‌, ಅಟೊಸ್ಪೇರ್‌ ಮತ್ತು ಓಷನ್‌ ಸೈನ್ಸ್‌, ಬಯೊ ಸಿಸ್ಟಮ್‌ ಸೈನ್ಸ್‌ ಮತ್ತು ಎಂಜಿನಿಯರಿಂಗ್‌, ಕ್ರಯೊಜಿನ್‌ಟೆಕ್ನಾಲಜಿ, ಬಯೊ ಕೆಮೆಸ್ಟ್ರಿ, ಮೂಲ ಸೌಕರ್ಯ ವಿವಿಧ ಅಭಿಯಂತರರು ಸೇರಿ ಐಐಎಸ್‌ಸಿಯ ಸ್ನಾತಕ, ಸ್ನಾತಕೋತ್ತರ ಮತ್ತು ಸಂಶೋಧನಾ ಕೇಂದ್ರದಿಂದ ವಿಜ್ಞಾನದ ಪ್ರಾತ್ಯಕ್ಷಿಕೆ ಮತ್ತು ಪ್ರದರ್ಶನ ನಡೆಯಿತು.

ಬೌದ್ಧಿಕ ಮಂಥನ: ವಿಜ್ಞಾನ ಪ್ರದರ್ಶನದ ಜತೆಗೆ ವಿಜ್ಞಾನಿಗಳು, ತಜ್ಞರು, ಗಣ್ಯರ ಮೂಲಕ ಹಲವು ವಿಷಯಗಳ ಚರ್ಚೆ, ಸಂವಾದವನ್ನು ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿಗಳಿಗೆ ವಿಜ್ಞಾನ, ತಂತ್ರಜ್ಞಾನದ ಬಗ್ಗೆ ಹೆಚ್ಚಿನ ಆಸಕ್ತಿ ಮೂಡಿಸುವ ಉದ್ದೇಶದಿಂದ ಐಐಎಸ್‌ಸಿ ವಿಭಾಗವಾರು ಕ್ವಿಜ್‌ ಸ್ಪರ್ಧೆಗಳನ್ನು ಆಯೋಜನೆ ಮಾಡಲಾಗಿತ್ತು. ಮಕ್ಕಳಲ್ಲಿ ವಿಜ್ಞಾನದ ಬಗ್ಗೆ ಆಸಕ್ತಿ ಮೂಡಿಸಲು ಡಿಕ್‌ಜೋನ್‌ ವ್ಯವಸ್ಥೆ ಮಾಡಲಾಗಿತ್ತು.

ಹರಿದು ಬಂದ ಜನ ಸಾಗರ: ಬೆಳಗ್ಗೆ 9ರಿಂದ ಸಂಜೆ 5.30ರವರೆಗೆ ಮಕ್ಕಳು, ಮಹಿಳೆಯರು, ಪುರುಷರು, ವಯಸ್ಕರು ಹೀಗೆ ಎಲ್ಲ ವಯೋಮಾನದವರು ವಿಜ್ಞಾನದ ವಿಸ್ಮಯಕಂಡು ಬೆರಗಾದರು. ಶಾಲೆಗಳಿಂದ ಗುಂಪುಗುಂಪಾಗಿ ವಿದ್ಯಾರ್ಥಿಗಳು ಶಿಕ್ಷಕರು ಬಂದಿದ್ದರು. ಶಿಕ್ಷಣ, ವಿಜ್ಞಾನಕ್ಕೆ ಸಂಬಂಧಿಸಿದ 300ಕ್ಕೂ ಹೆಚ್ಚಿನ ಸಂಸ್ಥೆಗಳ ಪ್ರತಿನಿಧಿಗಳು ಕೂಡ ಭಾಗವಹಿಸಿದ್ದರು. ಸಾರ್ವಜನಿಕರ ಅನುಕೂಲಕ್ಕಾಗಿ 15 ಸಹಾಯ ಕೇಂದ್ರ ಸ್ಥಾಪಿಸಲಾಗಿತ್ತು.

ಸೆಲ್ಫಿ…: ಕ್ಯಾಂಪಸ್‌ನಲ್ಲಿರುವ ಕ್ಯಾಂಟೀನ್‌ ಜತೆಗೆ ಐದಾರು ಕಡೆಗಳಲ್ಲಿ ಓಪನ್‌ ಡೇಗೆ ಬಂದವರಿಗಾಗಿ ಫ‌ುಡ್‌ಕೋರ್ಟ್‌ ತೆಗೆಯಲಾಗಿತ್ತು. ಒಂದೊಂದೆ ವಿಭಾಗದ ವಿಜ್ಞಾನದ ಹೊಸ ಆವಿಷ್ಕಾರ, ವಿಸ್ಮಯಗಳನ್ನು ನೋಡಿ ಬಂದವರು ಐಐಎಸ್ಸಿ ಕೇಂದ್ರ ಕಟ್ಟಡದ ಮುಂಭಾಗ ಹಾಗೂ ಹಿಂಭಾಗದಲ್ಲಿರುವ ಹುಲ್ಲುಹಾಸಿನಲ್ಲಿ ವಿಶ್ರಾಂತ ಪಡೆಯುತ್ತಾ, ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದರು.

ಟಾಪ್ ನ್ಯೂಸ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

2

Malpe: ಬೋಟಿನಲ್ಲಿದ್ದ ಮೀನುಗಾರ ನಾಪತ್ತೆ; ಪ್ರಕರಣ ದಾಖಲು

crime

Padubidri: ಸ್ಕೂಟಿಯಿಂದ ಬಿದ್ದು ಮಹಿಳೆಗೆ ತೀವ್ರ ಗಾಯ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.