ಟಿಕೆಟ್‌ ಬೆನ್ನಲ್ಲೇ ಅಪಸ್ವರ


Team Udayavani, Mar 25, 2019, 5:36 AM IST

100-a

ಬೆಂಗಳೂರು: ಕಾಂಗ್ರೆಸ್‌ ಮತ್ತು ಬಿಜೆಪಿ ಟಿಕೆಟ್‌ ಪ್ರಕಟಗೊಂಡ ಬೆನ್ನಲ್ಲೇ ಕೆಲವು ಕ್ಷೇತ್ರಗಳಲ್ಲಿ ಅಸಮಾಧಾನ ಭುಗಿಲೆದ್ದಿದೆ. ಟಿಕೆಟ್‌ ಸಿಗದೆ ನಿರಾಶರಾದ ಆಕಾಂಕ್ಷಿಗಳನ್ನು ಸಮಾಧಾನಪಡಿಸಲು ಎರಡೂ ಪಕ್ಷಗಳ ನಾಯಕರು ಪ್ರಯತ್ನಪಡುತ್ತಿದ್ದಾರೆ.

ಹಲವು ಶಾಸಕರು, ಸ್ಥಳೀಯ ಮುಖಂಡರ ವಿರೋಧದ ಹೊರತಾಗಿಯೂ ಕೋಲಾರ ಕ್ಷೇತ್ರದಲ್ಲಿ ಮಾಜಿ ಸಚಿವ ಕೆ.ಎಚ್‌.ಮುನಿಯಪ್ಪ ಅವರಿಗೆ ಟಿಕೆಟ್‌ ನೀಡಿರುವುದು ಕಾಂಗ್ರೆಸ್‌ನಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಕೊಪ್ಪಳದಲ್ಲಿ ರಾಜಶೇಖರ ಹಿಟ್ನಾಳ್‌ ಅವರಿಗೆ ಟಿಕೆಟ್‌ ನೀಡಿರುವುದು ಇತರ ಆಕಾಂಕ್ಷಿಗಳಲ್ಲಿ ಬೇಸರ ಮೂಡಿಸಿದೆ. ಧಾರವಾಡದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಆಯ್ಕೆ ಇನ್ನೂ ಕಗ್ಗಂಟಾಗಿದ್ದು, ಗೊಂದಲ ಮುಂದುವರಿದಿದೆ.

ಬಾಗಲಕೋಟೆ ಕ್ಷೇತ್ರದಲ್ಲಿ ಬಿಜೆಪಿಯಿಂದ ಪಿ.ಸಿ.ಗದ್ದಿಗೌಡರ್‌ಗೆ ಮತ್ತೆ ಮಣೆ ಹಾಕಲಾಗಿದೆ. ಇದಕ್ಕೆ ಸ್ಥಳೀಯ ನಾಯಕರು ಆಕ್ಷೇಪ ಎತ್ತಿದ್ದಾರೆ. ಕಾಂಗ್ರೆಸ್‌ನಿಂದ ವೀಣಾ ಕಾಶಪ್ಪನವರ ಅವರಿಗೆ ಟಿಕೆಟ್‌ ನೀಡಿರುವುದು ಇತರ ಆಕಾಂಕ್ಷಿಗಳನ್ನು ಕೆರಳಿಸಿದೆ. ಇಲ್ಲಿ ಸಿದ್ದರಾಮಯ್ಯ ಅವರೇ ಸಮಾಧಾನಿಸಲು ರಂಗಕ್ಕೆ ಇಳಿದಿದ್ದಾರೆ.

ಬಿಜೆಪಿಯಲ್ಲೂ ಬೇಗುದಿ
ರಾಜ್ಯದ ಎಲ್ಲ 14 ಬಿಜೆಪಿ ಸಂಸದರಿಗೆ ಟಿಕೆಟ್‌ ನೀಡಲಾಗಿದ್ದು, ಸಂಸದ ಕರಡಿ ಸಂಗಣ್ಣ ಪ್ರತಿನಿಧಿಸುತ್ತಿರುವ ಕೊಪ್ಪಳ ಕ್ಷೇತ್ರದ ಅಭ್ಯರ್ಥಿ ಇನ್ನೂ ಘೋಷಣೆಯಾಗದಿರುವುದು ಬಿಜೆಪಿಯಲ್ಲೂ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿರುವುದನ್ನು ತೋರಿಸುತ್ತದೆ. ಇಬ್ಬರು ಪ್ರಬಲ ಆಕಾಂಕ್ಷಿಗಳಿದ್ದು, ಅವರನ್ನು ಸಮಾಧಾನಪಡಿಸುವ ಕಾರ್ಯ ನಡೆದಿದೆ ಎಂದು ಬಿಜೆಪಿ ನಾಯಕರು ಹೇಳುತ್ತಾರೆ. ಚಿಕ್ಕೋಡಿ ಕ್ಷೇತ್ರದಿಂದ ರಮೇಶ್‌ ಕತ್ತಿ ಹಾಗೂ ಅಣ್ಣಾ ಸಾಹೇಬ ಜೊಲ್ಲೆ ಅವರು ಟಿಕೆಟ್‌ಗಾಗಿ ತೀವ್ರ ಲಾಬಿ ನಡೆಸಿದ್ದು, ಕಗ್ಗಂಟಾಗಿ ಪರಿಣಮಿಸಿದೆ. ಟಿಕೆಟ್‌ ಸಿಗದಿದ್ದರೆ ಕಠಿನ ನಿರ್ಧಾರ ಕೈಗೊಳ್ಳುವ ಎಚ್ಚರಿಕೆಯನ್ನೂ ರಮೇಶ್‌ ಕತ್ತಿ ನೀಡಿದ್ದಾರೆ. ಕೋಲಾರ ಕ್ಷೇತ್ರದಲ್ಲಿ ಬಿಬಿಎಂಪಿ ಸದಸ್ಯ ಮುನಿಸ್ವಾಮಿಯವರಿಗೆ ಟಿಕೆಟ್‌ ನೀಡಿರುವುದು ಸಹಜವಾಗಿಯೇ ಡಿ.ಎಸ್‌. ವೀರಯ್ಯ, ಚಲವಾದಿ ನಾರಾಯಣಸ್ವಾಮಿಯವರ ಅಸಮಾಧಾನಕ್ಕೆ ಕಾರಣವಾಗಿದೆ.

ಟಾಪ್ ನ್ಯೂಸ್

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

SUBHODH

Bantwala: ಕೆದಿಲ ಗ್ರಾಮದಲ್ಲಿ ಸಿಡಿಲು ಬಡಿದು ಬಾಲಕ ಸಾವು

Bantwala1

Bantwala: ಅಧಿಕಾರಿಗಳ ನಡೆ ವಸತಿ ನಿಲಯಗಳ ಕಡೆ; ವಿನೂತನ ಕಾರ್ಯಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

WhatsApp Image 2024-11-17 at 21.01.59

Kyiv: ಉಕ್ರೇನ್‌ ವಿದ್ಯುತ್‌ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.