ಗೇಲ್ ಕಂಪನಿಯ ಪೈಪ್ನಲ್ಲಿ ಸೋರಿಕೆ
Team Udayavani, Mar 25, 2019, 12:14 PM IST
ಬೆಂಗಳೂರು: ಪರಪ್ಪನ ಅಗ್ರಹಾರ ಸಮೀಪದ ಎಇಸಿಎಸ್ ಲೇಔಟ್ನಲ್ಲಿ ಗೇಲ್ ಕಂಪನಿಯ ಪೈಪ್ನಲ್ಲಿ ಅನಿಲ ಸೋರಿಕೆಯಾದ ಪರಿಣಾಮ ನಡು ರಸ್ತೆಯಲ್ಲೇ ಬೆಂಕಿ ಹೊತ್ತಿಕೊಂಡ ಘಟನೆ ಭಾನುವಾರ ಸಂಜೆ ನಡೆದಿದೆ.
ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸಂಜೆ 7 ಗಂಟೆ ಸುಮಾರಿಗೆ ಪೈಪ್ನಲ್ಲಿ ಅನಿಲ ಸೋರಿಕೆಯಾಗಿದ್ದು, ಇದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಕೆಲ ಹೊತ್ತು ಆತಂಕದ ವಾತಾವರಣ ಸೃಷ್ಟಿಸಿತ್ತು. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಗೇಲ್ ಕಂಪನಿ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕೆಲ ತಿಂಗಳ ಹಿಂದೆ ಪರಪ್ಪನ ಅಗ್ರಹಾರ ಸಮೀಪದ ಶಿವಾರೆಡ್ಡಿ ಲೇಔಟ್ನಲ್ಲಿಯೂ ಗೇಲ್ ಕಂಪನಿಯ ಪೈಪ್ನಿಂದ ಅನಿಲ ಸೋರಿಕೆಯಾಗಿ ಒಂದು ಮನೆ ಸಂಪೂರ್ಣ ಹಾನಿಯಾಗಿತ್ತು. ಅಲ್ಲದೆ,ನಾಲ್ಕೈದು ಮಂದಿಗೆ ಗಾಯಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ!
Bengaluru: ಇವಿ ಬೈಕ್ ಶೋರೂಮ್ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್ ಬಂಧನ, ಬಿಡುಗಡೆ
Bengaluru: ನಗರದಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ತಯಾರಿಕಾ ಘಟಕ ಬಂದ್
Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ
Arrested: ನಕಲಿ ದಾಖಲೆ ನೀಡಿ ಟಿಡಿಎಸ್ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.