ಕಾಂಗ್ರೆಸ್ ಸೇರಿಲ್ಲ; ಪ್ರಚಾರ ಕೂಡ ಮಾಡಲ್ಲ: ಕಲಾವಿದೆ ಸಪ್ನಾ ಚೌಧರಿ
Team Udayavani, Mar 25, 2019, 3:58 PM IST
ಹೊಸದಿಲ್ಲಿ : ಹರಿಯಾಣದ ಜನಪ್ರಿಯ ಕಲಾವಿದೆ ಸಪ್ನಾ ಚೌಧರಿ ತಾನು ಕಾಂಗ್ರೆಸ್ ಪಕ್ಷ ಸೇರಿದ್ದೇನೆಂಬ ಎಲ್ಲ ವರದಿಗಳು ಸುಳ್ಳೆಂದು ಹೇಳಿದ್ದಾರೆ.
ನಾನು ಕಾಂಗ್ರೆಸ್ ಪಕ್ಷ ಸೇರಿಲ್ಲ. ಯಾವುದೇ ರಾಜಕೀಯ ಪಕ್ಷದ ಪರವಾಗಿ ಪ್ರಚಾರವನ್ನೂ ನಡೆಸುವುದಿಲ್ಲ ಎಂದು 28ರ ಹರೆಯದ ಸಪ್ನಾ ಚೌಧರಿ ಹೇಳಿದ್ದಾರೆ.
ನನ್ನ ಟ್ವಿಟರ್ ಅಕೌಂಟ್ ಕೂಡ ಫೇಕ್; ನನ್ನ ಹಳೆಯ ಫೋಟೋಗಳನ್ನು ಬಳಸಿಕೊಂಡು ಸುಳ್ಳು ಸುಳ್ಳೇ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಸಪ್ನಾ ಚೌಧರಿ ಹೇಳಿದ್ದಾರೆ.
ಪ್ರಿಯಾಂಕಾ ಗಾಂಧಿ ವಾದ್ರಾ ಜತೆಗಿನ ತನ್ನ ಫೋಟೋಗಳು ವೈರಲ್ ಆಗಿರುವುದಕ್ಕೆ ಪ್ರತಿಕ್ರಿಯಿಸಿರುವ ಸಪ್ನಾ ಚೌಧರಿ, ಆ ಫೋಟೋಗಳೆಲ್ಲ ಹಳೆಯವು; ನಾನು ಕಾಂಗ್ರೆಸ್ ಸೇರಿಲ್ಲ; ಯಾವುದೇ ರಾಜಕೀಯ ಪಕ್ಷದ ಪರವಾಗಿ ಪ್ರಚಾರವನ್ನೂ ಮಾಡುವುದಿಲ್ಲ ಎಂದು ಹೇಳಿದರು.
ಮಾಧ್ಯಮದಲ್ಲಿ ಪ್ರಕಟಗೊಂಡಿದ್ದ ಕೆಲವು ವರದಿಗಳಲ್ಲಿ
ಸಪ್ನಾ ಚೌಧರಿ ಅವರು ಉ.ಪ್ರ. ಕಾಂಗ್ರೆಸ್ ಮುಖ್ಯಸ್ಥ ರಾಜ್ ಬಬ್ಬರ್ ಅವರ ನಿವಾಸದಲ್ಲಿ ಕಾಂಗ್ರೆಸ್ ಪಕ್ಷ ಸೇರಿರುವುದಾಗಿ ಪ್ರಕಟಗೊಂಡಿತ್ತು. ಮಾತ್ರವಲ್ಲದೆ ಸಪ್ನಾ ಉ.ಪ್ರ. ಮಥುರಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ, ಹಿರಿಯ ನಟಿ, ಹೇಮಾ ಮಾಲಿನಿ ವಿರುದ್ದ ಸೆಣಸಲಿದ್ದಾರೆ ಎಂದೂ ವರದಿಗಳು ಹೇಳಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Bengaluru: ಮನೆಯ ಮುಂದೆ ಕುಳಿತು ಮೊಬೈಲ್ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!
Bengaluru: ಪಾರ್ಕ್ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು
Fraud: ಸೈಟ್ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.