ಕಾಂಗ್ರೆಸ್‌ಗೆ ಬೆಂಗಳೂರು ಉತ್ತರ ಕ್ಷೇತ್ರ: ಗೌಡರ ಘೋಷಣೆ

ನೀವೇ ನಿಲ್ಲುವುದಾದರೆ ತುಮಕೂರಿನಲ್ಲಿ ನಿಲ್ಲಿ, ಇಲ್ಲದಿದ್ದರೆ ಕಾಂಗ್ರೆಸ್‌ಗೆ ಬಿಟ್ಟುಕೊಡಿ ಎಂದಿದ್ದ ಉಪಮುಖ್ಯಮಂತ್ರಿ ಪರಮೇಶ್ವರ್‌

Team Udayavani, Mar 26, 2019, 6:05 AM IST

190325kpn32

ಹಾಸನ: ಚುನಾವಣಾ ಮೈತ್ರಿಯಲ್ಲಿ ಜೆಡಿಎಸ್‌ಗೆ ನಿಗದಿಯಾಗಿದ್ದ 8 ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರ ಹೋದರೂ ಪರವಾಗಿಲ್ಲ ಎಂದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್‌ಗೆ ಬಿಟ್ಟುಕೊಟ್ಟಿದ್ದೇನೆ ಎಂದು ಜೆಡಿಎಸ್‌ ವರಿಷ್ಠ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಸ್ಪಷ್ಟಪಡಿಸಿದರು.

ನಾಮಪತ್ರ ಸಲ್ಲಿಸಲು ತುಮಕೂರಿಗೆ ತೆರಳುವ ಮೊದಲು ಹೊಳೆನರಸೀಪುರ ತಾಲೂಕಿನ ವಿವಿಧ ದೇಗುಲಗಳಲ್ಲಿ ಪೂಜೆ ಸಲ್ಲಿಸಿ ಬಳಿಕ ಮಾತನಾಡಿ, ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ನೀವೇ ಸ್ಪರ್ಧೆ ಮಾಡಿ ಎಂದು ಕಾಂಗ್ರೆಸ್‌ ಮುಖಂಡರಿಗೆ
ಹೇಳಿದ್ದೇನೆ. ಉತ್ತರದಲ್ಲಿ ನಿಲ್ಲಲು ನನಗೂ ಒಲವಿತ್ತು. ಆದರೆ ತುಮಕೂರು ಕ್ಷೇತ್ರದಲ್ಲಿ ನೀವೇ ಸ್ಪರ್ಧಿಸಿ, ಇಲ್ಲವೇ ಕಾಂಗ್ರೆಸ್‌ಗೆ ಬಿಟ್ಟುಕೊಡಿ ಎಂದು ಡಿಸಿಎಂ ಡಾ.ಜಿ.ಪರಮೇ
ಶ್ವರ್‌ ಷರತ್ತು ಹಾಕಿದ್ದರು. ಜೆಡಿಎಸ್‌ ಮುಖಂಡರು ನೀವೇ ಸ್ಪರ್ಧಿಸಬೇಕೆಂದು ಒತ್ತಡ ಹೇರಿದರು. ಆದರೆ, ಎರಡುಕಡೆ ಸ್ಪರ್ಧೆ ಬೇಡವೆಂದು ನಿರ್ಧರಿಸಿ,ಅಂತಿಮವಾಗಿ ತುಮಕೂರು ಆಯ್ಕೆ ಮಾಡಲಾಯಿತು ಎಂದರು.

ಮುದ್ದಹನುಮೇಗೌಡ ಅವರು ತುಮಕೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ನಾಮಪತ್ರ ಸಲ್ಲಿಸುವ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ಅದು ನನಗೆ ಸಂಬಂಧಿಸದ ವಿಷಯ ನಾನು ಪ್ರತಿಕ್ರಿಯೆ ನೀಡಲ್ಲ ಎಂದರು.

ಮನೆದೇವರ ಸನ್ನಿಧಿಯಲ್ಲಿ ಬಿ ಫಾರಂಗೆ ಪೂಜೆ
ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧೆಗಿಳಿಯುತ್ತಿರುವ ಜೆಡಿಎಸ್‌ ವರಿಷ್ಠ, ಎಚ್‌.ಡಿ.ದೇವೇಗೌಡ ತಮ್ಮ ಮನೆ ದೇವರು ಹರದನಹಳ್ಳಿಯ ಶ್ರೀ ದೇವೇಶ್ವರನ ಸನ್ನಿಧಿಯಲ್ಲಿ ಬಿ ಫಾರಂಗೆ ಪೂಜೆ ಮಾಡಿ ಅಲ್ಲಿಯೇ ಸಹಿಹಾಕಿ ಗೆಲುವಿಗಾಗಿ ಪ್ರಾರ್ಥನೆ ಸಲ್ಲಿಸಿದರು.

ಪುತ್ರ ಎಚ್‌.ಡಿ.ರೇವಣ್ಣ, ಸೊಸೆ ಭವಾನಿ, ಮೊಮ್ಮಗ ಪ್ರಜ್ವಲ್‌, ಶಾಸಕ ಎಚ್‌.ಕೆ.ಕುಮಾರಸ್ವಾಮಿ ಈ ವೇಳೆ ಹಾಜರಿದ್ದರು. ಮುಂಜಾನೆ ಹೊಳೆನರಸೀಪುರದ ಶ್ರೀ ಲಕ್ಷ್ಮಿನರಸಿಂಹಸ್ವಾಮಿ,ಎದುರು ಮುಖೀ ಆಂಜನೇಯಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ದೇವೇಗೌಡರು, ಅಲ್ಲಿಂದ ಹುಟ್ಟೂರು ಹರದನಹಳ್ಳಿಗೆ ತೆರಳಿ, ಶ್ರೀ ದೇವೇಶ್ವರನಿಗೆ ಪೂಜೆ ಸಲ್ಲಿಸಿದರು. ದೇವರ ಸನ್ನಿಧಿಯಲ್ಲಿಯೇ ಬಿ ಫಾರಂಗೆ ಸಹಿ ಹಾಕಿದರು. ಅಲ್ಲಿಂದ ಮಾವಿನಕೆರೆಯ ಬೆಟ್ಟದ ಶ್ರೀ ರಂಗನಾಥಸ್ವಾಮಿಗೆ ಪೂಜೆ ನೆರವೇರಿಸಿದರು. ಅಲ್ಲಿಂದ ಹೊಳೆನರಸೀಪುರಕ್ಕೆ ತಮ್ಮ ಪುತ್ರ ರೇವಣ್ಣ ಅವರ ನಿವಾಸಕ್ಕೆ ತೆರಳಿ ಉಪಾಹಾರ ಸೇವಿಸಿ ತುಮಕೂರಿಗೆ ತೆರಳಿದರು.

ಹೆಲಿಕಾಪ್ಟರ್‌ನಲ್ಲಿ ಹೊಳೆನರಸೀಪುರಕ್ಕೆ ಬಂದು ಪೂಜಾ ಕಾರ್ಯಗಳು ಮುಗಿದ ನಂತರ ಮಂಡ್ಯಕ್ಕೆ ತೆರಳಿ ಮೊಮ್ಮಗ ನಿಖೀಲ್‌ ಕುಮಾರ ಸ್ವಾಮಿ ಅವರು ನಾಮಪತ್ರ ಸಲ್ಲಿಸುವ ಸಂದರ್ಭ ದಲ್ಲಿ ಹಾಜರಿದ್ದು ಅಲ್ಲಿಂದ ರಸ್ತೆ ಮೂಲಕವೇ ತುಮಕೂರಿಗೆ ದೇವೇಗೌಡರು ತೆರಳಿದರು.

ಪ್ರಮುಖ ನಾಯಕರ ಉಮೇದುವಾರಿ: ಕಲ್ಪತರುನಾಡಿನಲ್ಲಿ ಲೋಕಸಭಾ ಚುನಾವಣೆಗೆ ಪ್ರಮುಖ ನಾಯಕರು ಸೋಮವಾರ ನಾಮಪತ್ರ ಸಲ್ಲಿಸಿದರು.ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ದೇವೇಗೌಡ ಅಪಾರ ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ
ಬಂದು ನಾಮಪತ್ರ ಸಲ್ಲಿಸಿದರು. ಮಾಜಿ ಸಂಸದ ಜಿ.ಎಸ್‌.ಬಸವರಾಜು ಬಿಜೆಪಿಯಿಂದ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸುವ ಮೂಲಕ ಚುನಾವಣಾ ಕಣ ರಂಗೇರಿಸಿದ್ದಾರೆ.

ಟಾಪ್ ನ್ಯೂಸ್

DKS–HDD-HDK

By Election: ಚನ್ನಪಟ್ಟಣದಲ್ಲಿ ಎಚ್‌.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್‌ ಮೇಕೆದಾಟು ಜಟಾಪಟಿ

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

Paper-Reader

Golden Jubliee: ಪತ್ರಿಕೆಯ ಓದು ಪ್ರತಿಯೊಬ್ಬರಿಗೂ ಆಹಾ! ಎನಿಸುವಂತಿರಲಿ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

High-Court

High Court: ʼಅಪರಾಧಿ ಪತಿಯೊಂದಿಗೆ ನೆಲೆಸಿದ ಮಾತ್ರಕ್ಕೆ ಪತ್ನಿಯನ್ನೂ ಅಪರಾಧಿ ಮಾಡಲಾಗದುʼ

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKS–HDD-HDK

By Election: ಚನ್ನಪಟ್ಟಣದಲ್ಲಿ ಎಚ್‌.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್‌ ಮೇಕೆದಾಟು ಜಟಾಪಟಿ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

MB-Patil-Minister

Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್‌

Child-care

Child Care: ಶಿಶು ಮರಣ ತಗ್ಗಿಸಲು ಮನೆಮಟ್ಟದ ಎಳೆ ಮಕ್ಕಳ ಆರೈಕೆ!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

DKS–HDD-HDK

By Election: ಚನ್ನಪಟ್ಟಣದಲ್ಲಿ ಎಚ್‌.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್‌ ಮೇಕೆದಾಟು ಜಟಾಪಟಿ

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

Paper-Reader

Golden Jubliee: ಪತ್ರಿಕೆಯ ಓದು ಪ್ರತಿಯೊಬ್ಬರಿಗೂ ಆಹಾ! ಎನಿಸುವಂತಿರಲಿ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

High-Court

High Court: ʼಅಪರಾಧಿ ಪತಿಯೊಂದಿಗೆ ನೆಲೆಸಿದ ಮಾತ್ರಕ್ಕೆ ಪತ್ನಿಯನ್ನೂ ಅಪರಾಧಿ ಮಾಡಲಾಗದುʼ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.