ಮೂವತ್ತು ಸಾವಿರ ವಿಶ್ವ ಭೂಪಟಗಳನ್ನು ಚೀನಾ ನಾಶಪಡಿಸಿದ್ಯಾಕೆ ಗೊತ್ತಾ?

ಅರುಣಾಚಲಪ್ರದೇಶ ತನ್ನದೆಂದು ಮತ್ತೆ ಚೀನಾ ಕ್ಯಾತೆ...

Team Udayavani, Mar 26, 2019, 1:19 PM IST

ArunachalPradesh-26-3

ಬೀಜಿಂಗ್‌ : ವಿವಾದಿತ ಭೂಪ್ರದೇಶಗಳಾಗಿರುವ ಅರುಣಾಚಲ ಪ್ರದೇಶ ಹಾಗೂ ತೈವಾನ್‌ ಗಳನ್ನು ಚೀನಾದ ಭಾಗಗಳೆಂದು ನಮೂದಿಸದಿರುವ 30,000 ವಿಶ್ವ ಭೂಪಟಗಳನ್ನು ಚೀನಾದ ಕಸ್ಟಮ್ಸ್‌ ಅಧಿಕಾರಿಗಳು ಇತ್ತೀಚೆಗೆ ನಾಶಪಡಿಸಿದ್ದಾರೆಂದು ಚೀನಾ ಮಾಧ್ಯಮ ವರದಿಗಳಿಂದ ತಿಳಿದುಬಂದಿದೆ. ಈ ಭೂಪಟಗಳನ್ನು ಹೊರ ದೇಶಕ್ಕೆ ರಫ್ತು ಮಾಡಲು ಉದ್ದೇಶಿಸಲಾಗಿತ್ತು ಎಂಬುದಾಗಿ ಸರಕಾರಿ ಸ್ವಾಮ್ಯದ ‘ಗ್ಲೋಬಲ್‌ ಟೈಮ್ಸ್‌’ ಪತ್ರಿಕೆ ವರದಿ ಮಾಡಿದೆ.

ಭಾರತದ ಈಶಾನ್ಯ ರಾಜ್ಯಗಳಲ್ಲಿ ಒಂದಾಗಿರುವ ಅರುಣಾಚಲಪ್ರದೇಶವನ್ನು ಚೀನಾ ದಕ್ಷಿಣ ಟಿಬೆಟ್‌ ನ ಭಾಗವೆಂದು ಪ್ರತಿಪಾದಿಸುತ್ತಾ ಬಂದಿದೆ. ಮಾತ್ರವಲ್ಲದೆ ಭಾರತೀಯ ನಾಯಕರು ಈ ಭಾಗಕ್ಕೆ ಭೇಟಿ ನೀಡುವುದನ್ನು ಚೀನಾ ಪ್ರತೀಬಾರಿ ವಿರೋಧಿಸುತ್ತಲೇ ಇದೆ. ಆದರೆ ಇದಕ್ಕೆ ವ್ಯತಿರಿಕ್ತವಾಗಿ ಭಾರತವು ಅರುಣಾಚಲಪ್ರದೇಶವನ್ನು ತನ್ನದೇ ಭಾಗವೆಂದು ಸಮರ್ಥವಾಗಿ ಪ್ರತಿಪಾದಿಸುತ್ತಿದೆ ಮತ್ತು ಚೀನಾ ದೇಶದ ವಿರೋಧದ ಹೊರತಾಗಿಯೂ ಎಲ್ಲಾ ಪಕ್ಷಗಳ ರಾಜಕೀಯ ಮುಖಂಡರು ಅರುಣಾಚಲಪ್ರದೇಶಕ್ಕೆ ಆಗಾಗ್ಗೆ ಭೇಟಿ ನೀಡುತ್ತಲೇ ಇರುತ್ತಾರೆ. 3488 ಕಿಲೋ ಮೀಟರ್‌ ಉದ್ದದ ಗಡಿ ಪ್ರದೇಶವನ್ನು ಹಂಚಿಕೊಂಡಿರುವ ಭಾರತ ಮತ್ತು ಚೀನಾ ತಮ್ಮೊಳಗಿನ ಗಡಿ ವಿವಾದವನ್ನು ಪರಿಹರಿಸಿಕೊಳ್ಳಲು ಇದುವರೆಗೂ21 ಸುತ್ತಿನ ರಾಜತಾಂತ್ರಿಕ ಮಾತುಕತೆಗಳನ್ನು ನಡೆಸಿವೆ. ಇನ್ನೊಂದೆಡೆ ದ್ವೀಪರಾಷ್ಟ್ರ ತೈವಾನ್‌ ಅನ್ನು ತನ್ನದೇ ದೇಶದ ಭಾಗವೆಂದು ಚೀನಾ ಪರಿಗಣಿಸುತ್ತಿದೆ.

‘ಸಾರ್ವಭೌಮತೆ ಮತ್ತು ತನ್ನ ಭೂಭಾಗದ ಸಮಗ್ರತೆ ಯಾವುದೇ ದೇಶದ ಬಹುಮುಖ್ಯ ಅಂಶವಾಗಿರುತ್ತದೆ. ಅಂತಾರಾಷ್ಟ್ರೀಯ ಕಾನೂನಿನಡಿಯಲ್ಲಿ ತೈವಾನ್‌ ಮತ್ತು ದಕ್ಷಿಣ ಟಿಬೆಟ್‌ ಚೀನಾ ಭೂಪ್ರದೇಶದ ಅಂಗವೇ ಆಗಿರುವುದರಿಂದ ಅವುಗಳು ನಮಗೆ ಪವಿತ್ರ ಹಾಗೂ ಉಲ್ಲಂಘನಾರಹಿತ ಅಂಶಗಳಾಗಿವೆ. ಈ ಎಲ್ಲಾ ಕಾರಣಗಳಿಂದ ಸದ್ರಿ ನ್ಯೂನತೆಗಳನ್ನು ಹೊಂದಿದ್ದ ಭೂಪಟಗಳನ್ನು ನಾಶ ಮಾಡಿರುವುದು ಕಾನೂನಾತ್ಮಕವೇ ಆಗಿದೆ’ ಎಂದು ಚೀನಾದ ವಿದೇಶಾಂಗ ವ್ಯವಹಾರಗಳ ವಿಶ್ವವಿದ್ಯಾನಿಲಯದ ಅಂತಾರಾಷ್ಟ್ರೀಯ ಕಾನೂನು ವಿಭಾಗದ ಪ್ರಾಚಾರ್ಯರೊಬ್ಬರು ಅಭಿಪ್ರಾಯಪಟ್ಟಿದ್ದಾರೆ.

ಟಾಪ್ ನ್ಯೂಸ್

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Youth assaulted near Belagavi airport compound

Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp Image 2024-11-17 at 21.01.59

Kyiv: ಉಕ್ರೇನ್‌ ವಿದ್ಯುತ್‌ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

1-USAA

America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್‌

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Youth assaulted near Belagavi airport compound

Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.