ಸೆನ್ಸೆಕ್ಸ್ ಭರ್ಜರಿ 425 ಅಂಕ ಜಿಗಿತ, ನಿಫ್ಟಿ 11,483, ರೂಪಾಯಿ ಬಲವರ್ಧನೆ
Team Udayavani, Mar 26, 2019, 4:33 PM IST
ಮುಂಬಯಿ : ಎರಡು ದಿನಗಳ ನಿರಂತರ ಸೋಲಿನ ಬಳಿಕ ಇಂದು ಮಂಗಳವಾರ ಲಾಭದ ಹಾದಿ ಹಿಡಿದ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ, ದಿನದ ವಹಿವಾಟನ್ನು 425 ಅಂಕಗಳ ಭರ್ಜರಿ ಜಿಗಿತದೊಂದಿಗೆ 38,000 ಅಂಕಗಳ ಮನೋ ಪ್ರಾಬಲ್ಯದ ಗಡಿ ದಾಟಿ ವಿಜೃಂಭಿಸುವಲ್ಲಿ ಸಫಲವಾಯಿತು.
ಇದೇ ರೀತಿ 11,500 ಅಂಕಗಳ ಗಡಿ ದಾಟುವಲ್ಲಿ ಸಫಲವಾದ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 129 ಅಂಕಗಳ ಏರಿಕೆಯೊಂದಿಗೆ ದಿನದ ವಹಿವಾಟನ್ನು 11,483.25 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಮುಂಬಯಿ ಶೇರು ಕಳೆದೆರಡು ದಿನಗಳ ವಹಿವಾಟಿನಲ್ಲಿ 575 ಅಂಕಗಳ ನಷ್ಟಕ್ಕೆ ಗುರಿಯಾಗಿತ್ತು. ಡಾಲರ್ ಎದುರು ರೂಪಾಯಿ ಇಂದು 19 ಪೈಸೆಗಳಷ್ಟು ಬಲಗೊಂಡು 68.77 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.
ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,858 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 1,407 ಶೇರುಗಳು ಮುನ್ನಡೆ ಸಾಧಿಸಿದವು; 1,288 ಶೇರುಗಳು ಹಿನ್ನಡೆಗೆ ಗುರಿಯಾದವು; 163 ಶೇರುಗಳ ಧಾರಣೆ ಯಾವುದೇ ಬದಲಾವಣೆ ಕಾಣಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.