ಸ್ವೀಪ್‌ನಿಂದ ಮತದಾನ ಜಾಗೃತಿ

ಮಾ. 31: ಜಿಲ್ಲಾ ಮಟ್ಟದ ಮ್ಯಾರಥಾನ್‌ ಸ್ಪರ್ಧೆ

Team Udayavani, Mar 27, 2019, 6:30 AM IST

Sveep-Logo

ಮಂಗಳೂರು: ಮತದಾನದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ದ.ಕ. ಜಿಲ್ಲಾ ಸ್ವೀಪ್‌ ಸಮಿತಿ ವತಿಯಿಂದ ಜಿಲ್ಲಾಡಳಿತ, ಜಿ.ಪಂ., ಮಂಗಳೂರು ಮಹಾನಗರ ಪಾಲಿಕೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಮಾ. 31ರಂದು 18 ಕಿ.ಮೀ. ಮ್ಯಾರಥಾನ್‌ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

ಬೆಳಗ್ಗೆ 7 ಗಂಟೆಗೆ ಮಂಗಳೂರಿನ ಮಂಗಳಾ ಕ್ರೀಡಾಂಗಣದಿಂದ ಮ್ಯಾರಥಾನ್‌ ಪ್ರಾರಂಭವಾಗಲಿದೆ. 16 ವರ್ಷಕ್ಕಿಂತ ಕೆಳಗಿನವರಿಗೆ 6 ಕಿ.ಮೀ. ಹಾಗೂ 16 ವರ್ಷಕ್ಕಿಂತ ಮೇಲ್ಪಟ್ಟವರಿಗೆ 18 ಕಿ.ಮೀ. ಮ್ಯಾರಥಾನ್‌ ನಡೆಯಲಿದೆ. ಹಿರಿಯ ನಾಗರಿಗೆ ಮತ್ತು ಸಾರ್ವಜನಿಕರಿಗೆ ಮತದಾನದ ಕಡೆಗೆ ನಮ್ಮ ನಡಿಗೆ ಕೂಡ ಆಯೋಜಿಸಲಾಗಿದೆ. ಇದರಲ್ಲಿ ಜಿಲ್ಲಾ ವ್ಯಾಪ್ತಿಯ ಎಲ್ಲ ಶಾಲೆ, ಕಾಲೇಜುಗಳ ವಿದ್ಯಾರ್ಥಿಗಳು, ಸ್ವಯಂಸೇವಾ ಸಂಸ್ಥೆಗಳು ಹಾಗೂ ಸಾರ್ವಜನಿಕರು ಭಾಗವಹಿಸುವಂತೆ ಕೋರಲಾಗಿದೆ ಎಂದು ಜಿಲ್ಲಾ ಸ್ವೀಪ್‌ ಸಮಿತಿ ಅಧ್ಯಕ್ಷ ಹಾಗೂ ಜಿ.ಪಂ. ಸಿಇಒ ಡಾ| ಆರ್‌. ಸೆಲ್ವಮಣಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಮ್ಯಾರಥಾನ್‌ ದಾರಿ…
ಮನಪಾ ಆಯಕ್ತ ಮಹಮ್ಮದ್‌ ನಜೀರ್‌ ಮಾತನಾಡಿ, 16ರ ವಯೋಮಿತಿಯ ಒಳಗಿನ ಬಾಲಕ ಬಾಲಕಿಯರಿಗೆ ಮಂಗಳಾ ಕ್ರೀಡಾಂಗಣದಿಂದ ಮಣ್ಣಗುಡ್ಡೆ ರಸ್ತೆ, ನ್ಯೂಚಿತ್ರಾ, ರಥಬೀದಿ, ಮಂಗಳೂರು ಸೆಂಟ್ರಲ್‌ ಮಾರ್ಕೆಟ್‌, ಹಂಪನಕಟ್ಟೆ ರಸ್ತೆ ಮೂಲಕ ಸಾಗಿ ಪಿವಿಎಸ್‌ ವೃತ್ತ, ಬಲ್ಲಾಳ್‌ಬಾಗ್‌, ಲಾಲ್‌ಬಾಗ್‌, ದಿವ್ಯದೀಪ ಟವರ್‌ ಮುಂಭಾಗದಲ್ಲಿ ತಿರುಗಿ ಕ್ರೀಡಾಂಗಣದಲ್ಲಿ ಸಮಾಪನ ಗೊಳ್ಳಲಿದೆ ಎಂದರು.

16 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮಂಗಳಾ ಕ್ರೀಡಾಂಗಣದಿಂದ ಮಣ್ಣಗುಡ್ಡೆ ರಸ್ತೆ, ನ್ಯೂಚಿತ್ರಾ, ರಥಬೀದಿ, ಶರವು ದೇವಸ್ಥಾನ, ಕಾರ್ನಾಡ್‌ ಸದಾಶಿವ ರಾವ್‌ ರಸ್ತೆ, ನವಭಾರತ ವೃತ್ತ, ಪಿವಿಎಸ್‌ ವೃತ್ತ, ಸೆಲ್ಮಾ ಆರ್ಕೆಡ್‌, ಕದ್ರಿ ದೇವಸ್ಥಾನ ರಸ್ತೆ, ಬಿಜೈ, ಲಾಲ್‌ಬಾಗ್‌ ವೃತ್ತದಿಂದ ಯೂಟರ್ನ್ ಪಡೆದು ಪಂಚಮಿ ಕಾಂಪ್ಲೆಕ್ಸ್‌, ಕಾಪಿಕಾಡ್‌, ದಡ್ಡಲ ಕಾಡು, ಉರ್ವಾಸ್ಟೋರ್‌, ಆಶೋಕನಗರ, ಉರ್ವಾ ಮಾರ್ಕೆಟ್‌, ಲೇಡಿಹಿಲ್‌ ಮೂಲಕ ಮಂಗಳಾ ಕ್ರೀಡಾಂಗಣ ತಲುಪಲಿದೆ. ಮತದಾನದ ಕಡೆಗೆ ನಮ್ಮ ನಡಿಗೆ ಮಂಗಳಾ ಕ್ರೀಡಾಂಗಣದಿಂದ ಮಣ್ಣಗುಡ್ಡೆ, ಬಲ್ಲಾಳ್‌ಬಾಗ್‌, ಲಾಲ್‌ಬಾಗ್‌, ಲೇಡಿಹಿಲ್‌ ಮೂಲಕ ಮಂಗಳಾಕ್ರೀಡಾಂಗಣ ಸೇರಲಿರುವುದು. ವಿಜೇತರಿಗೆ ನಗದು ಬಹುಮಾನ ನೀಡಿ ಪುರಸ್ಕರಿಸಲಾಗುವುದು ಎಂದರು.

ಭಾಗವಹಿಸುವವರು ಹೆಸರು ಹಾಗೂ ವಿಳಾಸವನ್ನು ದ.ಕ. ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕರಿಗೆ ಮಾ. 29ರೊಳಗಾಗಿ ಕಳುಹಿಸಿಕೊಡುವಂತೆ ([email protected]) ಸೂಚಿಸಿದರು.

ಮನಪಾ ಅಧಿಕಾರಿ ಗಾಯತ್ರಿ, ನೆಹರೂ ಯುವಕೇಂದ್ರದ ಸಂಯೋಜಕ ರಘುವೀರ್‌ ಸೂಟರ್‌ಪೇಟೆ ಉಪಸ್ಥಿತರಿದ್ದರು.

18 ಕಿ.ಮೀ. ವಿಶೇಷ
ಎರಡು ಮುಖ್ಯ ಉದ್ದೇಶವನ್ನು ಇಟ್ಟುಕೊಂಡು ಮ್ಯಾರಥಾನ್‌ ಆಯೋಜಿಸಲಾಗಿದೆ. ಎ. 18 ಚುನಾವಣೆಯ ದಿನಾಂಕದ ಬಗ್ಗೆ ಮತದಾರರಲ್ಲಿ ಜಾಗೃತಿ ಮೂಡಿಸುವುದು ಹಾಗೂ 18 ವಯೋಮಿತಿಯ ಬಳಿಕ ಮತದಾನ ಅರ್ಹತೆಯನ್ನು ನೆನಪಿಸುವುದು 18 ಕಿ.ಮೀ. ದೂರದ ಹಿಂದಿರುವ ಅಂಶ ಎಂದು ಆಗಿದೆ ಎಂದು ಡಾ| ಆರ್‌. ಸೆಲ್ವಮಣಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Power-Cable

Bantwala: ಬಿ.ಸಿ.ರೋಡಿನಲ್ಲಿ ರೈಲ್ವೇಯ ವಿದ್ಯುತ್‌ ಕೇಬಲ್‌ ಕಳವು

Stock-liqer

Sulya: ಆರಂತೋಡು: ಚಿಕನ್‌ ಸೆಂಟರ್‌ಗೆ ದಾಳಿ; ಮದ್ಯ ಅಕ್ರಮ ದಾಸ್ತಾನು ಪತ್ತೆ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.