ಬರದ ನಾಡಿನಲ್ಲಿ 7ಅಡಿಯಲ್ಲೇ ನೀರು

ಇದು-ಮಳೆ-ನೀರ-ಕೊಯ್ಲಿನ-ಕಮಾಲ

Team Udayavani, Mar 27, 2019, 6:57 AM IST

60

ಬೆಂಗಳೂರು: ಭೂಮಿಯನ್ನು ಸಾವಿರ ಅಡಿ ಬಗೆದರೂ ಬೊಗಸೆ ನೀರು ಸಿಗದ ಊರಲ್ಲಿರುವ ಪ್ರದೇಶ ಅದು. ಬಹುತೇಕ ಪ್ರತಿ ವರ್ಷ ರಾಜ್ಯದ ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಅದೂ ಬರುತ್ತದೆ. ಆದರೆ, ಆ ನಿರ್ದಿಷ್ಟ ಪ್ರದೇಶದಲ್ಲಿ ಮಾತ್ರ ಕೇವಲ ಆಳು ಅಡಿಯಷ್ಟು ಭೂಮಿ ಕೊರೆದರೂ ನೀರು ಚಿಮ್ಮುತ್ತದೆ! – ಇದು ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ “ಭಗೀರಥನ ಕತೆ’.

ಒಂದೂವರೆ ದಶಕದ ಹಿಂದಿನ ಮಾತು. ಆಗಷ್ಟೇ ಸರ್ಕಾರದಿಂದ ವಿಮಾನ ನಿಲ್ದಾಣಕ್ಕಾಗಿ ಸುಮಾರು ನಾಲ್ಕುಸಾವಿರ ಎಕರೆ ಭೂಮಿಯನ್ನು ಹಸ್ತಾಂತರ ಮಾಡಿದಾಗ, ಅಲ್ಲಿ ಒಂದೇ ಒಂದು ಕೆರೆ ಇರಲಿಲ್ಲ. ಭೂಮಿಯಲ್ಲೂ ಆಗಲೇ ನೀರು ಪಾತಾಳಕ್ಕೆ ಕುಸಿಯುತ್ತಿತ್ತು. ಆದರೆ, ಈಗ ಅದೇ ನಿಲ್ದಾಣದ ವ್ಯಾಪ್ತಿಯಲ್ಲಿ ಬೇಸಿಗೆಯಲ್ಲೂ 70 ಎಕರೆ ಜಾಗದಲ್ಲಿ ತಲೆಯೆತ್ತಿದ ಬೃಹದಾಕಾರದ ನಾಲ್ಕೂ ಕೆರೆಗಳು ತುಂಬಿ ತುಳುಕುತ್ತಿವೆ. ಭೂಮಿಯನ್ನು ಮೂರ್‍ನಾಲ್ಕು ಮೀಟರ್‌ನಷ್ಟು ಬಗೆದರೂ ಸಾಕು, ನೀರು ಜಿನುಗುತ್ತದೆ. ಇದರಿಂದ ನಿತ್ಯ ಬಂದುಹೋಗುವ ಲಕ್ಷಾಂತರ ಪ್ರಯಾಣಿಕರ ದಾಹ ಇಂಗಿಸುತ್ತಿದೆ. ಇದು ಅಲ್ಲಿ ನಿರ್ಮಿಸಿದ ಇಂಗು ಗುಂಡಿಗಳು ಮತ್ತು ಮಳೆ ನೀರು ಕೊಯ್ಲಿನ ಚಮತ್ಕಾರ.

ಸ್ವತಃ ಉದ್ಯಾನ ನಗರಿಯ ಹೃದಯಭಾಗದಲ್ಲೇ ಸಾವಿರ ಅಡಿ ಆಳಕ್ಕಿಳಿದರೂ ನೀರೂ ಬರುತ್ತಿಲ್ಲ. ಬೇಸಿಗೆ  ಯಲ್ಲಿ ಇರುವ ಬಾವಿಗಳೂ ಬತ್ತುತ್ತಿವೆ ಹಾಗೂ ನೀರಿನ ಇಳುವರಿಯೂ ಕುಸಿಯುತ್ತಿದೆ. ಆದರೆ, ನಿಲ್ದಾಣದಾದ್ಯಂತ ನಿರ್ಮಿಸಿದ 316 ಇಂಗು ಗುಂಡಿಗಳು, ಕೆರೆಗಳ ನಿರ್ಮಾಣ, ಜತೆಗೆ ಹೆಚ್ಚಿನ ನೀರನ್ನು ಅಂತರ್ಜಲ ಮರುಪೂರಣಕ್ಕೆ ಬಳಕೆ ಮಾಡುತ್ತಿರುವುದರ ಫ‌ಲವಾಗಿ ನಿತ್ಯ ಎರಡೂವರೆ ದಶಲಕ್ಷ ಲೀ. ನೀರು ಪೂರೈಕೆ ಆಗುತ್ತಿದೆ. ತೆರೆದ ಬಾವಿಗಾಗಿ ಮೂರ್‍ನಾಲ್ಕು ಮೀಟರ್‌ ಆಳಕ್ಕಿಳಿದರೆ ಸಾಕು, ಅದೇ ರೀತಿ ಕೊಳವೆಬಾವಿಗಾಗಿ 30ರಿಂದ 35 ಮೀಟರ್‌ ಭೂಮಿ ಕೊರೆದರೆ ನೀರು ಪುಟಿಯುತ್ತದೆ.

ಕಟ್ಟಡಗಳ ಮೇಲೆ ಬಿದ್ದ ಮಳೆ ನೀರು ಈ ಟ್ಯಾಂಕ್‌ಗಳಲ್ಲಿ ಸಂಗ್ರಹ ಆಗುತ್ತದೆ. ಈ ನೀರನ್ನು ಸಂಸ್ಕರಣೆ ಮಾಡಿ, ಮರುಬಳಕೆ ಮಾಡಲಾಗುತ್ತಿದೆ. ಹೆಚ್ಚಾದ ನೀರನ್ನು ಒಳಚರಂಡಿ ಮೂಲಕ ಅಂತರ್ಜಲ ಮರುಪೂರಣಕ್ಕೆ ಪೂರೈಸಲಾಗುತ್ತದೆ. ಇದಲ್ಲದೆ, ನಿಲ್ದಾಣದ ವ್ಯಾಪ್ತಿಯಲ್ಲಿರುವ 1,22,500 ಚದರ ಮೀಟರ್‌ನಲ್ಲಿ ಬೆಳೆದ ಉದ್ಯಾನ ಸೇರಿದಂತೆ ಹುಲ್ಲುಹಾಸಿಗೆ ಅಟೋಮೆಟಿಕ್‌ ಯಂತ್ರೋಪರಕರಣಗಳ ನೆರವಿನಿಂದ ನೀರುಣಿಸಲಾಗುತ್ತಿದೆ ಎಂದು ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿಗಮ (ಬಿಐಎಎಲ್‌)ದ ಕಾರ್ಪೋರೇಟ್‌ ಕಮ್ಯುನಿಕೇಷನ್‌ ಮುಖ್ಯಸ್ಥೆ ಅರ್ಚನಾ ಮುತ್ತಪ್ಪ “ಉದಯವಾಣಿ’ಗೆ ತಿಳಿಸಿದರು. ನಿಲ್ದಾಣದ ವ್ಯಾಪ್ತಿಯಲ್ಲಿ ನಿರ್ಮಿಸಿದ ಬೃಹದಾಕಾರದ ಕೆರೆಗಳಿಂದ ಸುತ್ತಲಿನ ಪ್ರದೇಶದಲ್ಲೂ ಅಂತರ್ಜಲ ಮಟ್ಟ ವೃದ್ಧಿ ಯಾಗಿದ್ದು, ಕೃಷಿ ಚಟುವಟಿಕೆಗಳಿಗೆ ಅನುಕೂಲ ಆಗುತ್ತಿದೆ.

ವಿಜಯ್‌ ಕುಮಾರ್‌ ಚಂದರಗಿ

ಟಾಪ್ ನ್ಯೂಸ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.