ಅರಂತೋಡು: ಗ್ರಂಥಾಲಯ ಕಟ್ಟಡ ಕಾಮಗಾರಿಗೆ ಮತ್ತೆ ಗ್ರಹಣ!

ಅನುದಾನದ ಕೊರತೆಯಿಂದ ಹಿನ್ನಡೆಯಾಗುತ್ತಿದೆ ಎಂದ ಅಧಿಕಾರಿಗಳು

Team Udayavani, Mar 27, 2019, 10:39 AM IST

27-March-3

ಅರಂತೋಡು ಗ್ರಾ.ಪಂ. ಗ್ರಂಥಾಲಯದ ಕಟ್ಟಡ ಕಾಮಗಾರಿ ಸ್ಥಗಿತಗೊಂಡಿದೆ.

ಅರಂತೋಡು : ಅರಂತೋಡು ಗ್ರಾ.ಪಂ. ವ್ಯಾಪ್ತಿಯ ಸಾರ್ವಜನಿಕ ಗ್ರಂಥಾಲಯ ಕಟ್ಟಡ ಕಾಮಗಾರಿ ಸ್ಥಗಿತಗೊಂಡು ಎರಡು ವರ್ಷ ಕಳೆದು ಅನಂತರದಲ್ಲಿ ಕಾಮಗಾರಿ ಪ್ರಾರಂಭ ಗೊಂಡರೂ, ಮತ್ತೆ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿದ್ದು, ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಿಲ್ಲಾ ಕೇಂದ್ರ ಗ್ರಂಥಾಲಯದ ಅಧೀನದಲ್ಲಿರುವ ಅರಂತೋಡು ಸಾರ್ವಜನಿಕ ಗ್ರಂಥಾಲಯ ಈಗ ಗ್ರಾ.ಪಂ. ಪಕ್ಕದ ಹಳೆಯ ಕಟ್ಟಡದಲ್ಲಿದೆ. ಮೂರು ವರ್ಷಗಳ ಹಿಂದೆ ಇಲಾಖೆಯಿಂದ ಮಂಜೂರಾದ 10 ಲಕ್ಷ ರೂ. ಅನುದಾನಕ್ಕೆ ತಕ್ಕಂತೆ ನೀಲ ನಕಾಶೆ ತಯಾರಿಸಿ ಸರಕಾರಿ ಹಿ.ಪ್ರಾ. ಶಾಲೆ ಸಮೀಪ ಇಲಾಖೆಯ ಗ್ರಂಥಾಲಯ ಕಟ್ಟಡ ಕಾಮಗಾರಿಯನ್ನು ಆರಂಭಿಸಲಾಗಿತ್ತು.
ನಿರ್ಮಿತಿ ಕೇಂದ್ರದವರು ಕಾಮಗಾರಿಯ ಉಸ್ತುವಾರಿ ವಹಿಸಿ ಕೊಂಡಿದ್ದರು. ಮಂಜೂರುಗೊಂಡ 10 ಲಕ್ಷ ರೂ. ಅನುದಾನದಲ್ಲಿ ಮೊದಲ ಹಂತದಲ್ಲಿ 5 ಲಕ್ಷ ರೂ. ಮಾತ್ರ ಬಿಡುಗಡೆ ಗೊಂಡಿತ್ತು. ಉಳಿದ 5 ಲಕ್ಷ ರೂ. ಅನುದಾನ ಬಿಡುಗಡೆಗೊಳ್ಳದ ಹಿನ್ನೆಲೆ ಯಲ್ಲಿ ಕಾಮಗಾರಿಯನ್ನು ಸ್ಥಗಿತಗೊಳಿಸಲಾಗಿತ್ತು. ಕಳೆದ ಜನವರಿ ತಿಂಗಳಲ್ಲಿ ಮತ್ತೆ 5 ಲಕ್ಷ ರೂ. ಅನುದಾನ ಬಿಡುಗಡೆ ಗೊಂಡು ಕಾಮಗಾರಿಯನ್ನು ಪುನರಾರಂಭಿಸಲಾಗಿತ್ತು. ಇದೀಗ ಆಮೆ ನಡಿಗೆಯಲ್ಲಿ ಕಾಮಗಾರಿ ಸಾಗುತ್ತಿದೆ. ವಾರಕ್ಕೆ ಒಂದೆರಡು ದಿನ ಮಾತ್ರ ಕೆಲಸ ನಡೆಸಿದ್ದು, ಸದ್ಯ ಕಾಮಗಾರಿ ಸ್ಥಗಿತಗೊಳಿಸಿದ್ದಾರೆ.
ಕೆಲಸಗಳೆಲ್ಲ ಬಾಕಿ ಇವೆ
ಶೌಚಾಲಯ ನಿರ್ಮಾಣವಾಗಿದ್ದರೂ ಅದಕ್ಕೆ ಬಾಗಿಲು ನಿರ್ಮಿಸಿಲ್ಲ. ವಿದ್ಯುತ್‌ ಸಂಪರ್ಕಕ್ಕೆ ವೈರಿಂಗ್‌ ಆಗಿಲ್ಲ. ಪೈಪ್‌ ಲೈನ್‌ ಆಗಿಲ್ಲ. ನೀರಿನ ಸೌಲಭ್ಯಕ್ಕೆ ಟ್ಯಾಂಕ್‌ ಅಳವಡಿಸಿಲ್ಲ. ಆವರಣಗೋಡೆ ಆಗಿಲ್ಲ. ಗ್ರಂಥಾಲಯಕ್ಕೆ ಮೆಟ್ಟಿಲುಗಳನ್ನು ನಿರ್ಮಾಣ ಮಾಡಿಲ್ಲ. ಹೀಗೆ ಇತರ ಕೆಲಸಗಳು ಬಾಕಿ ಉಳಿದಿವೆ.
ಅರಂತೋಡು ಗ್ರಂಥಾಲಯ ಕಟ್ಟಡದ ಕಾಮಗಾರಿ ಆರಂಭಿಸಿ 8 ತಿಂಗಳ ಬಳಿಕ ಕಾಮಗಾರಿ ಪ್ರಾರಂಭಿಸಿದ್ದ ದೇವಚಳ್ಳ ಗ್ರಂಥಾಲಯ ಕಾಮಗಾರಿ ಪೂರ್ಣಗೊಂಡು ಒಂದು ವರ್ಷದಿಂದ ಹೊಸ ಕಟ್ಟಡದಲ್ಲಿ ಕಾರ್ಯ ನಿರ್ವಾಹಿಸುತ್ತಿದೆ. ದೇವಚಳ್ಳ ಗ್ರಂಥಾಲಯಕ್ಕಿಂತ 8 ತಿಂಗಳು ಮೊದಲು ಪ್ರಾರಂಭಿಸಿದ್ದ ಅರಂತೋಡು ಗ್ರಂಥಾಲಯ ಕಾಮಗಾರಿ ಮಾತ್ರ ಪೂರ್ಣಗೊಳ್ಳದಿರುವುದು ವಿಪರ್ಯಾಸ.
ಸೂಕ್ತ ಕ್ರಮ ಕೈಗೊಳ್ಳಿ
ಅರಂತೋಡು ಲೈಬ್ರೆರಿ ಕಟ್ಟಡ ಕಾಮಗಾರಿ ಕೆಲಸ ನಿಲ್ಲಿಸಿ ಎರಡು ವರ್ಷ ಕಳೆದ ಬಳಿಕ ಮತ್ತೆ ಕಾಮಗಾರಿ ಆರಂಭಿಸಿ ತಿಂಗಳು ಎರಡು ಹತ್ತಿರವಾಗುತ್ತಿದ್ದರೂ ಇನ್ನೂ ಕಾಮಗಾರಿ ಪೂರ್ಣಗೊಳ್ಳದಿರುವುದು ವಿಪರ್ಯಾಸ. ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಕಾಮಗಾರಿ ಸ್ಥಗಿತಗೊಳಿಸಿರುವುದು ವಾಚಕರಿಗೆ ಬೇಸರ ತರಿಸಿದೆ ಎಂದು ಗ್ರಂಥಾಲಯದ ಒದುಗ ಆಶ್ರಫ್ ಗುಂಡಿ ಹೇಳಿದ್ದಾರೆ.
ಚರ್ಚಿಸಲಾಗಿದೆ
ಲೈಬ್ರೆರಿ ಕಾಮಗಾರಿ ಕೊನೆ ಹಂತದಲ್ಲಿದೆ. ಈ ಹಿಂದೆ ನಾನು ಕೂಡ ಸಂಬಂಧಪಟ್ಟವರಲ್ಲಿ ಈ ಬಗ್ಗೆ ಚರ್ಚಿಸಿದ್ದೆ. ಸದ್ಯದಲ್ಲಿಯೇ ಲೈಬ್ರೆರಿ ಜನರ ಉಪಯೋಗಕ್ಕೆ ಲಭ್ಯವಾಗುವ ಆಶಾಭಾವನೆ ಇದೆ.
– ಶಿವಾನಂದ ಉಪಾಧ್ಯಕ್ಷರು,
ಅರಂತೋಡು ಗ್ರಾ.ಪಂ.
ಶೀಘ್ರ ಪೂರ್ಣ
ಎರಡನೇ ಹಂತದ ಅನುದಾನ ಬಿಡುಗಡೆ ತಡವಾದ ಕಾರಣ ಕಾಮಗಾರಿ ವಿಳಂಬವಾಗಿದೆ. ಕಾಮಗಾರಿ ನಿರಂತರವಾಗಿ ನಡೆಸಲು ಸಮಸ್ಯೆಯಾಗಿದೆ. ಆದಷ್ಟು ಬೇಗನೆ ಕಾಮಗಾರಿ ಮಗಿಸಿಕೊಡುತ್ತೇವೆ.
– ರಾಜೇಂದ್ರ, 
ನಿರ್ದೇಶಕ ನಿರ್ಮಿತಿ ಕೇಂದ್ರ, ಸುರತ್ಕಲ್‌
ತೇಜೇಶ್ವರ್‌ ಕುಂದಲ್ಪಾಡಿ

ಟಾಪ್ ನ್ಯೂಸ್

BGT 2024: Aussie squad announced for remaining two matches: Aussies make three changes

BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್‌ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

25-kota

CT Ravi ಬಂಧನ ಪ್ರಕರಣ; ಗೃಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ

Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ

ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

Sandalwood: ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ

Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ

International Conference ಅತ Buntakal Technical College: Student Symposium

Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ

Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ

Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.