ಕಿಟಕಿಯಿಂದ ಕೈ ಹಾಕಿ ಮಹಿಳೆಯ ಸರ ಕಸಿದ
Team Udayavani, Mar 27, 2019, 11:43 AM IST
ಬೆಂಗಳೂರು: ಮಹಿಳೆಯೊಬ್ಬರು ನಿದ್ರಿಸುತ್ತಿರುವಾಗಲೇ ಕಿಟಕಿಯಿಂದ ಕೈ ತೂರಿಸಿದ ದುಷ್ಕರ್ಮಿಯೊಬ್ಬರ ಆಕೆಯ ಕತ್ತಿನಲ್ಲಿದ್ದ ಚಿನ್ನದ ಸರ ಕಿತ್ತೂಯ್ದಿರುವ ಘಟನೆ ಕುಮಾರಸ್ವಾಮಿ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಈ ಕುರಿತು ಚಂದ್ರಾನಗರದ ನಿವಾಸಿ ಬೋರಮ್ಮ (62) ಎಂಬುವವರು ನೀಡಿರುವ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ದುಷ್ಕರ್ಮಿ ಬಂಧನಕ್ಕೆ ಬಲೆಬೀಸಿದ್ದಾರೆ. ರೇಶನ್ ಅಂಗಡಿಯೊಂದರಲ್ಲಿ ಕೆಲಸ ಮಾಡುವ ಬೋರಮ್ಮ, ನೆಲಮಹಡಿಯ ಮನೆಯಲ್ಲಿ ಕಿಟಕಿ ಪಕ್ಕದಲ್ಲಿ ಮಂಚದ ಮೇಲೆ ಮಲಗಿಕೊಂಡಿದ್ದರು. ಬೇಸಿಗೆಯಾಗಿದ್ದರಿಂದ ಕಿಟಕಿ ತೆಗೆದಿದ್ದರು.
ಮಾ. 25ರಂದು ಮುಂಜಾನೆ 5 ಗಂಟೆ ಸುಮಾರಿಗೆ ಮನೆಯ ಸಮೀಪ ಬಂದಿರುವ ದುಷ್ಕರ್ಮಿ, ಕಿಟಕಿಯಿಂದ ಕೈ ತೂರಿಸಿ ಅವರ ಕತ್ತಿನಲ್ಲಿದ್ದ ಸುಮಾರು 35 ಗ್ರಾಂ ತೂಕದ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಬೋರಮ್ಮ ಕಿರುಚಿಕೊಳ್ಳುತ್ತಲೇ ಕುಟುಂಬ ಸದಸ್ಯರು ಓಡಿಬರುವಷ್ಟರಲ್ಲಿ ದುಷ್ಕರ್ಮಿ ಪರಾರಿಯಾಗಿದ್ದ ಎಂದು ಪೊಲೀಸರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.