ಬಿಸಿಲಿಗೆ ಬತ್ತಿದ ತುಂಗಭದ್ರಾ; ಬಾಡಿದ ಭತ್ತ

 ಏ.10ರವರೆಗೆ ನೀರು ಹರಿಸಲು ಒತ್ತಾಯ

Team Udayavani, Mar 27, 2019, 4:42 PM IST

27-March-18

ಕುರುಗೋಡು: ಮಣ್ಣೂರು-ಸೂಗೂರು ವ್ಯಾಪ್ತಿಯಲ್ಲಿ ತುಂಗಭದ್ರಾ ನದಿಯಲ್ಲಿ ನೀರು ಖಾಲಿಯಾಗಿದೆ.

ಕುರುಗೋಡು: ಬೇಸಿಗೆ ಹಿನ್ನೆಲೆಯಲ್ಲಿ ದಿನ ದಿನಕ್ಕೆ ಬಿಸಿಲಿನ ತಾಪ ಹೆಚ್ಚುತ್ತಿದೆ. ಎಲ್ಲೆಂದರಲ್ಲಿ ಜಲಮೂಲಗಳು ಬತ್ತಿ ಹೊಗುತ್ತಿವೆ. ಅದರಲ್ಲೂ ಇನ್ನೂ ದಿನದಿಂದ ದಿನಕ್ಕೆ ತುಂಗಭದ್ರಾ ನದಿಯಲ್ಲಿ ನೀರು ಕಡಿಮೆ ಆಗುತ್ತಿದೆ. ಇದರಿಂದ ಭತ್ತ ನಾಟಿ ಮಾಡಿದ ರೈತರು ದಿನ ದಿನಕ್ಕೆ ಆತಂಕದ ಒಳಗಾಗುತ್ತಿದ್ದಾರೆ.
ತುಂಗಭದ್ರಾ ನದಿ ದಂಡೆ ರೈತರು ಈಗಾಗಲೇ ಸೋನಾ, ನಲ್ಲೂರು ಸೋನಾ, ಗಂಗಾ ಕಾವೇರಿ ಸೇರಿದಂತೆ ಇತರೆ ಭತ್ತದ ಬೆಳಗಳು ನಾಟಿ ಮಾಡಿದ್ದು, ಬೆಳೆಗಳು ಕುಸುಮ ಹೊಡೆದು ಹಾಲು ತುಂಬಿ ಕಾಳು ಕಟ್ಟಿವೆ. ಇನ್ನೆನು ಒಂದು ಅಥವಾ ಎರಡು ನೀರು ಹರಿಸಿ ಬೆಳೆ ಕಾಟವು ಮಾಡಿ ಫಲ ಕೈಗೆ ಬರೋ ಸಮಯದಲ್ಲಿ ಹೊಳೆಯಲ್ಲಿ ನೀರು ಇಲ್ಲದೆ ಪಂಪ್‌ ಸೆಟ್‌ಗೆ ನೀರು ಸಿಗದೆ ಕಟಾವಿಗೆ ಬಂದ ಭತ್ತದ ಬೆಳೆಗಳು, ನೀರಿಲ್ಲದೇ ಬಿರುಕು ಬಿಟ್ಟಿದ್ದು ರೈತರು ಪರದಾಡುವಂತಾಗಿದೆ.
ಈಗಾಗಲೇ ನಾಲ್ಕು-ಐದು ವರ್ಷಗಳಿಂದ ಸರಿಯಾಗಿ ಮಳೆ, ಬೆಳೆ ಇಲ್ಲದೆ ರೈತರು ಕಂಗಾಲಾಗಿದ್ದು, ಈ ಬಾರಿ ತುಂಗಭದ್ರಾ ನದಿಗೆ ನೀರು ಬಿಟ್ಟಿರುವುದರಿಂದ ಆರ್ಥಿಕ ಪರಿಸ್ಥಿತಿಯಿಂದ ಚೇತರಿಸಿಕೊಳ್ಳಲು ಭತ್ತ ಬೆಳೆದಿದ್ದು, ಕೈಗೆ ಬರುವ ಸಮಯದಲ್ಲಿ ನೀರು ಇಲ್ಲವಾಗಿದೆ.
ಈಗಾಗಲೇ ಪಟ್ಟಣದ ವ್ಯಾಪ್ತಿಯ ತುಂಗಭದ್ರಾ ನದಿ ದಂಡೆಯ ರೈತರು ಮಣ್ಣೂರು ಗ್ರಾಮದ 3500 ಎಕರೆ ನೀರಾವರಿ ಪ್ರದೇಶದಲ್ಲಿ ಭತ್ತ ನಾಟಿ ಮಾಡಿದ್ದು, ಸೂಗೂರು 5910 ಎಕರೆ ನೀರಾವರಿ ಪ್ರದೇಶದಲ್ಲಿ ಭತ್ತ ನಾಟಿ ಮಾಡಿದ್ದಾರೆ. ನಡವಿಯಲ್ಲಿ 5987.13 ಎಕರೆ ನೀರಾವರಿ ಪ್ರದೇಶದಲ್ಲಿ ಭತ್ತ ನಾಟಿ ಮಾಡಿದ್ದು, ಇನ್ನೂ ಸಿರಿಗೇರಿ, ಗೇಣಿಕೆಹಾಳ, ಬಸಾಪುರ, ಕೋಳೂರು ಇತರೆ ಗ್ರಾಮಗಳಲ್ಲಿ ಬೋರ್‌ವೆಲ್‌ ನೀರು ಅವಲಂಬಿತದಿಂದ ಭತ್ತ ನಾಟಿ ಮಾಡಿದ್ದಾರೆ. ಭತ್ತ ನಾಟಿ ಮಾಡುವ ಪ್ರಾರಂಭದಲ್ಲಿ ಸಸಿಗಳಿಗೆ ಕೊರತೆ ಕಂಡುಬಂದಿದ್ದರು, ಸೆಂಟ್ಸ್‌ ಲೆಕ್ಕದಲ್ಲಿ ಬೇರೆಡೆಯಿಂದ ತಂದು ಭತ್ತ ನಾಟಿ ಮಾಡಿದ್ದಾರೆ. ವರ್ಷ ಪೂರ್ತಿ ಜಮೀನು ಹದಗೊಳಿಸಿ ರಸಗೊಬ್ಬರ ಹಾಕಿ ಔಷಧಿ ಸಿಂಪರಣೆ ಮಾಡಿದರು ಕೊನೆ ವೇಳೆಯಲ್ಲಿ ವಿದ್ಯುತ್‌ ಮತ್ತು ನೀರಿನ ಕೊರತೆಯಿಂದ ರೈತರು ಚೇತರಿಸಿಕೊಳ್ಳುವುದು ಕಷ್ಟಕರವಾಗಿದೆ.
ಈಗಾಗಲೇ ಏ.10ರವರೆಗೆ ಕಾಲುವೆ ಮತ್ತು ನದಿಗಳಿಗೆ ನೀರು ಬಿಡಬೇಕು ಎಂದು ನೀರಾವರಿ ಸಚಿವರಿಗೆ ತಿಳಿಸಿ ಮನವಿ ಕೂಡ ಮಾಡಿದ್ದೀವಿ. ನಂದಿದಂಡೆ ವ್ಯಾಪ್ತಿಯಲ್ಲಿ ಸುಮಾರು 75 ಸಾವಿರ ಎಕರೆ ರೈತರು ಭತ್ತ ನಾಟಿ ಮಾಡಿದ್ದಾರೆ. ಏ.10ರವರೆಗೆ ನೀರು ಬಿಡದಿದ್ರೆ ರೈತರು ಕಂಗಾಲಾಗುತ್ತಾರೆ. ನೀರು ಕೊಡದೆ ಇರುವವರಿಗೆ ಲೋಕಸಭೆ ಚುನಾವಣೆಯಲ್ಲಿ ಮತ ಹಾಕುವುದಿಲ್ಲ.
. ದರೂರು ಪುರುಷೋತ್ತಮಗೌಡ,
ಜಿಲ್ಲಾಧ್ಯಕ್ಷ, ತುಂಗಭದ್ರಾ ರೈತ ಸಂಘ.

ಟಾಪ್ ನ್ಯೂಸ್

BGT 2024-25: Virat Kohli returns to form in Aussies

BGT 2024-25: ಆಸೀಸ್‌ ನಲ್ಲಿ ಲಯಕ್ಕೆ ಮರಳಿದ ವಿರಾಟ್‌ ಕೊಹ್ಲಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Youth assaulted near Belagavi airport compound

Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

CM-Siddu–Hubballi

By Polls: ಮದ್ಯ ಉದ್ಯಮಿಗಳಿಂದ 700 ಕೋ.ರೂ. ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

BGT 2024-25: Virat Kohli returns to form in Aussies

BGT 2024-25: ಆಸೀಸ್‌ ನಲ್ಲಿ ಲಯಕ್ಕೆ ಮರಳಿದ ವಿರಾಟ್‌ ಕೊಹ್ಲಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Youth assaulted near Belagavi airport compound

Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.