ವಿಶ್ವ ಅರಣ್ಯ ದಿನಾಚರಣೆ
Team Udayavani, Mar 28, 2019, 6:30 AM IST
ಉಡುಪಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೆàದ ಕಾಲೇಜು, ಆಸ್ಪತ್ರೆಯ ದ್ರವ್ಯಗುಣ ಸ್ನಾತಕೋತ್ತರ ವಿಭಾಗ ಹಾಗೂ ಸಸ್ಯೋದ್ಯಾನ ಸಮಿತಿಯ ಸಹಭಾಗಿತ್ವದಲ್ಲಿ ವಿಶ್ವ ಅರಣ್ಯ ದಿನಾಚರಣೆ ಮಾ.21ರಂದು ಔಷಧಿ ಸಸ್ಯೋದ್ಯಾನ ರಾಜವನದಲ್ಲಿ ಆಚರಿಸಲಾಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಶಾಲಕ್ಯತಂತ್ರ ವಿಭಾಗದ ಮುಖ್ಯಸ್ಥ ಡಾ| ಕೆ. ರಾಮಚಂದ್ರ ಭಾಗವಹಿಸಿ ಇಂದಿನ ಜೀವನ ಶೈಲಿಯಲ್ಲಿ ಪರಿಸರ ಸಂರಕ್ಷಣೆ ಹಾಗೂ ಅವಶ್ಯಕತೆಯ ಬಗ್ಗೆ ಮಾಹಿತಿ ನೀಡಿದರು. ಎಸ್.ಡಿ.ಎಂ. ಸಸ್ಯೋದ್ಯಾನ ಸಮಿತಿಯ ಅಧ್ಯಕ್ಷೆ ಡಾ| ಸುಮಾ ಮಲ್ಯ ಶೈಕ್ಷಣಿಕ ಕ್ಷೇತ್ರ ಹಾಗೂ ಅರಣ್ಯ ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಿದರು. ದ್ರವ್ಯಗುಣ ವಿಭಾಗದ ಮುಖ್ಯಸ್ಥ ಡಾ| ಶ್ರೀಕಾಂತ ಪಿ. ಅರಣ್ಯ ಸಂರಕ್ಷಣೆಯ ಜವಾಬ್ದಾರಿ ಮತ್ತು ಅದರ ನಿರ್ವಹಣೆ ಬಗ್ಗೆ ವಿವರಿಸಿದರು.
ಕಾಲೇಜಿನ ಉದ್ಯಾನವನದ ಸಸ್ಯಗಳಿಗೆ ನಾಮಫಲಕ ಬಿಡುಗಡೆಗೊಳಿಸಲಾಯಿತು. ಬೇಸಗೆಯಲ್ಲಿ ಗಿಡಮರಗಳಿಗೆ ನೀರುಣಿಸುವ ಯೋಜನೆ ಉದ್ಘಾಟಿಸಲಾಯಿತು. ಉಪನ್ಯಾಸಕರಾದ ಡಾ| ರಮಾದೇವಿ, ಡಾ| ಮೊಹಮ್ಮದ್ ಫೈಸಲ್ ಅಭಿಪ್ರಾಯ ವ್ಯಕ್ತಪಡಿಸಿದರು. ಪ್ರಾಧ್ಯಾಪಕಿ ಡಾ| ನಿವೇದಿತಾ ಶೆಟ್ಟಿ ಸ್ವಾಗತಿಸಿದರು. ಡಾ| ತೇಜಸ್ವಿ ನಾಯ್ಕ ವಂದಿಸಿದರು. ವಿದ್ಯಾರ್ಥಿ ಡಾ| ಪಲ್ಲ ವಿ ಕಶ್ಯಪ್ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.