ಶಿಥಿಲಾವಸ್ಥೆಯಲ್ಲಿ ಅಜೆಕಾರು ಓವರ್‌ ಹೆಡ್‌ ಟ್ಯಾಂಕ್‌

ಕುಸಿತಗೊಂಡಲ್ಲಿ ನೀರಿಗೆ ತತ್ವಾರ, ಅಪಾರ ನಷ್ಟ ಸಂಭವ

Team Udayavani, Mar 28, 2019, 6:30 AM IST

over-head-tank

ಅಜೆಕಾರು: ಮರ್ಣೆ ಗ್ರಾ.ಪಂ. ವ್ಯಾಪ್ತಿಗೆ ಕುಡಿಯುವ ನೀರು ಒದಗಿಸುವ ಪ್ರಮುಖ ಓವರ್‌ ಹೆಡ್‌ ಟ್ಯಾಂಕ್‌ ಸಂಪೂರ್ಣ ಬಿರುಕು ಬಿಟ್ಟಿದ್ದು ಯಾವುದೇ ಕ್ಷಣದಲ್ಲಿ ಕುಸಿಯುವ ಭೀತಿ ಇರುವುದು ಸ್ಥಳೀಯರನ್ನು ಕಾಡುತ್ತಿದೆ.

ಸುಮಾರು 50 ವರ್ಷಗಳ ಹಿಂದೆ ನಿರ್ಮಾಣ ಗೊಂಡಿರುವ ಈ ಬೃಹತ್‌ ಓವರ್‌ ಹೆಡ್‌ ಟ್ಯಾಂಕ್‌ 50 ಸಾವಿರ ಲೀ. ನೀರು ಶೇಖರಣಾ ಸಾಮಾರ್ಥ್ಯ ಹೊಂದಿದೆ. ಮರ್ಣೆ ಗ್ರಾ.ಪಂ. ವ್ಯಾಪ್ತಿಯ ಸುಮಾರು 480 ಮನೆಗಳಿಗೆ ಕುಡಿಯುವ ನೀರು ಒದಗಿಸುವ ಏಕೈಕ ನೀರಿನ ಮೂಲ ಇದಾಗಿದೆ.

ಟ್ಯಾಂಕ್‌ನ ಸ್ಲಾಬ್‌ ಮತ್ತು ಪಿಲ್ಲರ್‌ಗಳು ಬಿರುಕು ಬಿಟ್ಟಿದು,ª ಸಿಮೆಂಟ್‌ ತುಂಡು ತುಂಡಾಗಿ ಬೀಳುತ್ತಿದೆ. ಟ್ಯಾಂಕ್‌ ನಿರ್ಮಾಣ ಸಂದರ್ಭ ಬಳಸಲಾದ ಕಬ್ಬಿಣದ ಸಲಾಖೆಗಳು ತುಕ್ಕು ಹಿಡಿದಿವೆ.

ಪಂಚಾಯತ್‌ ಕಟ್ಟಡಕ್ಕೆ ಹೊಂದಿಕೊಂಡಂತೆ ಇರುವ ಈ ಓವರ್‌ ಹೆಡ್‌ ಟ್ಯಾಂಕ್‌ ಕುಸಿತಗೊಂಡಲ್ಲಿ ಅಪಾರ ಪ್ರಮಾಣದ ಹಾನಿಯಾಗುವ ಜತೆಗೆ ಪ್ರಾಣಾಪಾಯ ಸಂಭವಿಸಬಹುದಾಗಿದೆ. ಅಲ್ಲದೆ ಪಂಚಾಯತ್‌ ವ್ಯಾಪ್ತಿಯ ಅಜೆಕಾರು ಪೇಟೆ, ಕೊಂಬಗುಡ್ಡೆ, ಕೈಕಂಬ, ನೂಜಿ ವಠಾರ, ಕುರ್ಪಾಡಿ ಪ್ರದೇಶ, ಪ.ಜಾತಿ, ಪ.ಪಂಗಡದ ಹಲವು ಕಾಲೊನಿಗಳ ಗ್ರಾಮಸ್ಥರಿಗೆ ಕುಡಿಯುವ ನೀರಿಗೆ ಸಂಕಷ್ಟಪಡಬೇಕಾದ ಪರಿಸ್ಥಿತಿ ನಿರ್ಮಾಣಗೊಳ್ಳಲಿದೆ.

ಸುಮಾರು 50 ಅಡಿ ಎತ್ತರದಲ್ಲಿರುವ ಈ ಓವರ್‌ ಹೆಡ್‌ ಟ್ಯಾಂಕ್‌ ಕುಸಿತಗೊಂಡರೆ ಸಮೀಪದಲ್ಲಿರುವ ಸುಮಾರು 30,000 ಲೀ. ಸಾಮರ್ಥ್ಯದ ಇನ್ನೊಂದು ಓವರ್‌ ಹೆಡ್‌ ಟ್ಯಾಂಕ್‌, ಪಂಚಾಯತ್‌ ಕಟ್ಟಡ, ಪಂಚಾಯತ್‌ ವಾಣಿಜ್ಯ ಮಳಿಗೆಗಳು, ಗ್ರಾಮ ಕರಣಿಕರ ಕಚೇರಿ ಕಟ್ಟಡಗಳಿಗೆ ಹಾನಿಯಾಗಲಿದೆ.

ನಿರುಪಯುಕ್ತ ಟ್ಯಾಂಕ್‌
ಓವರ್‌ ಹೆಡ್‌ ಟ್ಯಾಂಕ್‌ ಬಳಿಯಲ್ಲಿಯೇ ಸುಮಾರು 10 ವರ್ಷಗಳ ಹಿಂದೆ ಇನ್ನೊಂದು ಓವರ್‌ ಹೆಡ್‌ ಟ್ಯಾಂಕ್‌ ನಿರ್ಮಾಣ ಮಾಡಲಾಗಿತ್ತು. ಇದರ ಎತ್ತರವೂ ಕಡಿಮೆ ಇದ್ದು ನೀರಿನ ಶೇಖರಣೆ ಸಾಮರ್ಥ್ಯ ಕಡಿಮೆ ಇರುವುದರಿಂದ ಗ್ರಾಮಸ್ಥರಿಗೆ ಕುಡಿಯುವ ನೀರು ಒದಗಿಸಲು ಅಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಪಂಚಾಯತ್‌ ಆಡಳಿತವು ಹೊಸ ಓವರ್‌ ಹೆಡ್‌ ಟ್ಯಾಂಕ್‌ನ ಬದಲಾಗಿ ಗ್ರಾಮಸ್ಥರಿಗೆ ನೀರು ಒದಗಿಸುವ ಉದ್ದೇಶದೊಂದಿಗೆ ಹಳೇಯ ಓವರ್‌ ಹೆಡ್‌ ಟ್ಯಾಂಕ್‌ನ ಮೂಲಕವೇ ನೀರು ಒದಗಿಸುತ್ತಿದೆ. ಲಕ್ಷಾಂತರ ರೂ. ವೆಚ್ಚ ಮಾಡಿ ನಿರ್ಮಾಣ ಮಾಡಿರುವ ಹೊಸ ಓವರ್‌ ಹೆಡ್‌ ಟ್ಯಾಂಕ್‌ ನಿಷ್ಪ್ರಯೋಜಕವಾಗಿದೆ.

ತೆರವುಗೊಳಿಸಿದರೂ ಸಮಸ್ಯೆ
ಮರ್ಣೆ ಪಂಚಾಯತ್‌ ವ್ಯಾಪ್ತಿಯ ಹೆಚ್ಚಿನ ಪ್ರದೇಶಕ್ಕೆ ಈ ಓವರ್‌ ಹೆಡ್‌ ಟ್ಯಾಂಕ್‌ ಮೂಲಕವೇ ನೀರು ಒದಗಿಸುತ್ತಿದ್ದು ಈಗ ಕುಸಿಯುವ ಭೀತಿಯಿಂದ ತೆರವುಗೊಳಿಸಿದರೆ ಕುಡಿಯುವ ನೀರಿಗಾಗಿ ಸ್ಥಳೀಯರು ಸಂಕಷ್ಟ ಅನುಭವಿಸ ಬೇಕಾಗುತ್ತದೆ.

ಹಲವು ಬಾರಿ ಗ್ರಾಮ ಸಭೆಗಳಲ್ಲಿ ಓವರ್‌ ಹೆಡ್‌ ಟ್ಯಾಂಕ್‌ ದುರಸ್ತಿ ಅಥವಾ ತೆರವುಗೊಳಿಸುವ ಬಗ್ಗೆ ನಿರ್ಣಯ ಕೈಗೊಂಡಿ ದ್ದರೂ ಯಾವುದೇ ಪ್ರಯೋಜನವಾಗಿಲ್ಲ. 2018-19ನೇ ಸಾಲಿನ ಡಿ.28ರಂದು ನಡೆದ ಪಂಚಾಯತ್‌ ಸಾಮಾನ್ಯ ಸಭೆಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಓವರ್‌ ಹೆಡ್‌ ಟ್ಯಾಂಕನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ನಿರ್ಣಯ ಕೈಗೊಂಡು ಕಾರ್ಕಳ ಎಂಜಿನಿಯರಿಂಗ್‌ ಉಪ ವಿಭಾಗದ ಅಧಿಕಾರಿಗಳಿಗೆ ಪಂಚಾಯತ್‌ ಆಡಳಿತ ಮನವಿ ಮಾಡಿದ್ದರೂ ಇಲಾಖೆಯ ಅಧಿಕಾರಿಗಳಿಂದ ಈವರೆಗೆ ಯಾವುದೇ ಸ್ಪಂದನೆ ದೊರೆತಿಲ್ಲ.

ಪರಿಶೀಲನೆ ಅಗತ್ಯ
ಅತ್ಯಂತ ಅಪಾಯಕಾರಿ ಸ್ಥಿತಿಯಲ್ಲಿರುವ ಓವರ್‌ ಹೆಡ್‌ ಟ್ಯಾಂಕನ್ನು ಪರಿಶೀಲಿಸುವಂತೆ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಇಂಜಿನಿಯರಿಂಗ್‌ ಇಲಾಖೆಯ ಅಧಿಕಾರಿಗಳಿಗೆ ಈಗಾಗಲೇ ಮನವಿ ಮಾಡಲಾಗಿದೆ. ಕಳೆದ 4 ವರ್ಷಗಳ ಹಿಂದೆ ಸ್ವಲ್ಪ ಮಟ್ಟಿನ ದುರಸ್ತಿ ಕಾರ್ಯ ನಡೆದಿತ್ತಾದರೂ ಈಗ ಮತ್ತೆ ಅಪಾಯಕಾರಿ ಸ್ಥಿತಿಯಲ್ಲಿ ಓವರ್‌ ಹೆಡ್‌ ಟ್ಯಾಂಕ್‌ ಇದ್ದು ತುರ್ತು ಪರಿಶೀಲನೆಯ ಅಗತ್ಯವಿರುವುದರಿಂದ ಮತ್ತೆ ಇಲಾಖೆಯ ಅಧಿಕಾರಿಗಳ ಗಮನ ಸೆಳೆಯಲಾಗುವುದು.
-ತಿಲಕ್‌ರಾಜ್‌, ಪಿಡಿಒ ಮರ್ಣೆ ಗ್ರಾ.ಪಂ.

ಟಾಪ್ ನ್ಯೂಸ್

ICC

ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ

Yakshagana: ಇಂದು ನೀಲಾವರ ಮೇಳ ತಿರುಗಾಟಕ್ಕೆ ಚಾಲನೆ

Yakshagana: ಇಂದು ನೀಲಾವರ ಮೇಳ ತಿರುಗಾಟಕ್ಕೆ ಚಾಲನೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ICC

ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?

1-bumm

Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.