ಜಿಲ್ಲೆಗೆ ಪ್ರತ್ಯೇಕ ಪ್ರಣಾಳಿಕೆ: ಐವನ್
ಚುನಾವಣೆ ಸಂದರ್ಭ ಐಟಿ, ಇಡಿ ದುರ್ಬಳಕೆ
Team Udayavani, Mar 29, 2019, 6:05 AM IST
ಬೆಳ್ತಂಗಡಿ: ಚುನಾವಣೆ ಸಮೀಪಿಸುತ್ತಿರುವಂತೆ ಕಾಂಗ್ರೆಸ್ ಕಾರ್ಯಕರ್ತರ ಮಾನಸಿಕ ಸ್ಥೈರ್ಯ ಕುಗ್ಗಿಸುವ ಸಲುವಾಗಿ ಬಿಜೆಪಿಯು ಆದಾಯ ತೆರಿಗೆ (ಐಟಿ) ಮತ್ತು ಜಾರಿ ನಿರ್ದೇಶನಾಲಯ(ಇಡಿ)ವನ್ನು ದುರ್ಬಳಕೆ ಮಾಡುತ್ತಿದೆ ಎಂದು ಸಂಸದೀಯ ಕಾರ್ಯದರ್ಶಿ ಐವನ್ ಡಿ’ಸೋಜಾ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.
ಕಾಂಗ್ರೆಸ್ ಕಾರ್ಯಕರ್ತರ, ನಾಯಕರ ಮನೆಗಳಿಗೆ ದಾಳಿ ಮಾಡಿಸುವ ಮೂಲಕ ಐಟಿ ಸರ್ಜಿಕಲ್ ಸ್ಟ್ರೈಕ್ ಆರಂಭಿಸಿದೆ. ನ್ಯಾಯಸಮ್ಮತ ಚುನಾವಣೆ ನಡೆಯಲು ಚುನಾವಣ ಆಯೋಗ ಮಧ್ಯ ಪ್ರವೇಶಿಸಬೇಕು. ಈ ಕುರಿತು ವಿವರಣೆ ಪಡೆಯುವಂತೆ ರಾಷ್ಟ್ರಪತಿ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡ ಲಾಗುವುದು ಎಂದರು.
ಕಾಂಗ್ರೆಸಿಗರೇ ಗುರಿ
ದೇಶಾದ್ಯಂತ ಕಾಂಗ್ರೆಸ್ ನಾಯಕ ರನ್ನೇ ಗುರಿಯಾಗಿಸಿಕೊಂಡು ದಾಳಿ ಮಾಡಲಾಗು ತ್ತಿದೆ. ಬಿಜೆಪಿಗರು ಅಕ್ರಮ ಆಸ್ತಿ ಸಂಪಾದಿಸಿದ್ದರೂ ಅವರ ರಕ್ಷಣೆಯಲ್ಲಿ ಮೋದಿ
ಮತ್ತು ಅವರ ಹಿಂಬಾಲಕರು ನಿರತರಾಗಿದ್ದಾರೆ ಎಂದು ಐವನ್ ಆಕ್ರೋಶ ವ್ಯಕ್ತಪಡಿಸಿದರು. ನಾವು ದಾಳಿ ಮಾಡಬಾರ ದೆಂದು ಎಲ್ಲೂ ಹೇಳಿಲ್ಲ. ಆದರೆ ಕೇಂದ್ರ ಸರಕಾರವು ಚುನಾವಣೆ ಸಂದರ್ಭ ದಾಳಿ ನಡೆಸಿ ಐಟಿಯವರ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದೆ ಎಂದು ಹೇಳಿದರು.
ಜಿಲ್ಲೆಗೆ ರಾಹುಲ್
ದ.ಕ. ಲೋಕಸಭಾ ಕ್ಷೇತ್ರದ ಪ್ರಚಾರ ಬೆಳ್ತಂಗಡಿಯಿಂದಲೇ ಆರಂಭಗೊಳ್ಳ ಲಿದ್ದು, ಜಿಲ್ಲೆಗೆ ರಾಹುಲ್‌ಗಾಂಧಿ, ಪ್ರಿಯಾಂಕಾ ಗಾಂಧಿ, ಮಲ್ಲಿಕಾರ್ಜುನೆ ಖರ್ಗೆ, ಗುಲಾಂ ನಬಿಅಜಾದ್, ಸಿದ್ದರಾಮಯ್ಯ ಮೊದಲಾದ ನಾಯಕರು ಪ್ರಚಾರ ಸ»ಗಳಲ್ಲಿ ಭಾಗವಹಿಸಲಿದ್ದಾರೆ ಎಂದರು.
ಜಿಲ್ಲೆಗೆ ಪ್ರತ್ಯೇಕ ಪ್ರಣಾಳಿಕೆ
ಕಾಂಗ್ರೆಸ್ ಪಕ್ಷ ದ.ಕ. ಜಿಲ್ಲೆಗೆ ಪ್ರತ್ಯೇಕ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಿದೆ. ಈ ನಡುವೆ ಬೆಳ್ತಂಗಡಿ ತಾಲೂಕಿಗೆ ಶಾಶ್ವತ ಯೋಜನೆ ತರುವ ನಿಟ್ಟಿನಲ್ಲಿ ಪ್ರಣಾಳಿಕೆಯಲ್ಲಿ ಸೇರಿಸುವ ಕುರಿತು ಸೋಮವಾರ ಪ್ರಮುಖರ ಸಭೆ ಕರೆಯಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
Sullia: ಬಿಎಸ್ಸೆನ್ನೆಲ್ ಟವರ್‌ಗೆ ಸೋಲಾರ್ ಪವರ್!
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
ಧರ್ಮಾಧಿಕಾರಿ ಡಾ| ಹೆಗ್ಗಡೆ ಸರ್ವಜನರ ವಿಕಾಸಕ್ಕೆ ಸಾಕ್ಷಿ
MUST WATCH
ಹೊಸ ಸೇರ್ಪಡೆ
Mangaluru: ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.