![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Mar 29, 2019, 11:47 AM IST
ಬೆಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಮೂವರು ಚುನಾವಣಾ ವೀಕ್ಷಕರನ್ನು ಭಾರತ ಚುನಾವಣಾ ಆಯೋಗ ನೇಮಿಸಿದೆ. ಚುನಾವಣೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಬರುವಂತಹ ಅಹವಾಲುಗಳು, ದೂರುಗಳು ಹಾಗೂ ಮನವಿಗಳಿದ್ದರೆ ಮೂವರು ಅಧಿಕಾರಿಗಳಿಗೆ ತಿಳಿಸಬಹುದಾಗಿದೆ.
ಅದರಂತೆ ಯಶವಂತಪುರ ಹಾಗು ದಾಸರಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚುನಾವಣಾ ವೀಕ್ಷಕರಾಗಿ ಪಿ.ಎಸ್.ರೆಡ್ಡಿ ಅವರನ್ನು ನೇಮಿಸಿದ್ದು, ಸಾರ್ವಜನಿಕರು 73789 14111ಗೆ ಕರೆ ಮಾಡುವ ಮೂಲಕ ಅವರನ್ನು ಸಂಪರ್ಕಿಬಹುದಾಗಿದೆ.
ಅದೇ ರೀತಿ ಕೃಷ್ಣರಾಜಪುರ, ಬ್ಯಾಟರಾಯನಪುರ, ಹೆಬ್ಟಾಳ ಮತ್ತು ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಚುನಾವಣಾ ವೀಕ್ಷಕರಾಗಿ ಟಿ.ಎನ್.ವೆಂಕಟೇಶ್ (90876 07776 ) ಹಾಗೂ ಮಹಾಲಕ್ಷ್ಮೀ ಬಡಾವಣೆ ಹಾಗೂ ಮಲ್ಲೇಶ್ವರವ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚುನಾವಣಾ ವೀಕ್ಷಕರಾಗಿ ರೆಡ್ಡಿ ಶಂಕರ್‌ಬಾಬು (88105 21428) ನೇಮಕಗೊಂಡಿದ್ದಾರೆ.
ಸಾರ್ವಜನಿಕರು ಪ್ರತಿದಿನ ಬೆಳಗ್ಗೆ 9 ರಿಂದ 10 ಗಂಟೆಯವರೆಗೆ ಕುಮಾರಕೃಪ ಅತಿಥಿ ಗೃಹದಲ್ಲಿ ಚುನಾವಣಾ ವೀಕ್ಷಕರನ್ನು ಖುದ್ದಾಗಿ ಭೇಟಿ ಮಾಡಿ ಅಹವಾಲುಗಳು, ದೂರುಗಳು ಹಾಗೂ ಮನವಿಗಳನ್ನು ಸಲ್ಲಿಸಬಹುದಾಗಿದೆ ಎಂದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಗಳೂ ಆದ ಬೆಂಗಳೂರು ನಗರ ಜಿಲ್ಲಾಧಿಕಾರಿ ಬಿ.ಎಂ.ವಿಜಯಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.